ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಪ್ರಥಮ ಘಟಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದ್ದು, ಈ ಪಟ್ಟಿಯಲ್ಲಿ ಇಳಕಲ್ಲಿನ ಚಿತ್ತರಗಿ ಶ್ರೀ ವಿಜಯ ಮಹಾಂತ ಶಿವಯೋಗಿಗಳ ಸಂಸ್ಥಾನ ಮಠದ ಪೀಠಾಧಿಪತಿ ಗುರುಮಹಾಂತ ಸ್ವಾಮೀಜಿ ಆಯ್ಕೆಯಾಗಿರುವುದು ಸಂತಸ ಮೂಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
“ಬಸವಾದಿ ಶರಣರ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು, ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವುದು ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ಗುರುಮಹಾಂತ ಸ್ವಾಮೀಜಿ ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ವ್ಯಸನಮುಕ್ತ ಸಮಾಜ ನಿರ್ಮಾಣದತ್ತ ಅವರು ಕೈಗೊಂಡಿರುವ ಜಾಗೃತಿ ಕಾರ್ಯಕ್ರಮಗಳು ಗಮನಾರ್ಹವಾಗಿವೆ” ಎಂದು ಪ್ರಶಂಸಿಸಿದರು.
ಇದನ್ನೂ ಓದಿ > ಕೂಳು ಕಸಿದುಕೊಳ್ಳುವ ಕ್ರೌರ್ಯ: ಆಧುನಿಕ ಯುದ್ಧಗಳ ಕರಾಳ ಮುಖ
“ಸಾಮಾಜಿಕ, ಧಾರ್ಮಿಕ ಹಾಗೂ ಮಾನವೀಯ ಸೇವೆಗಳ ಮೂಲಕ ಜನಮನ ಗೆದ್ದಿರುವ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ಪದವಿ ಲಭಿಸಿರುವುದು ಸಂತಸದ ಸಂಗತಿಯಾಗಿದೆ. ಈ ಗೌರವದಿಂದ ಅವರ ಸೇವಾ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ” ಎಂದು ಅವರ ಭಕ್ತ ಗಣ ಸಂತಸ ವ್ಯಕ್ತಪಡಿಸಿದೆ.





