ಬಾಗಲಕೋಟೆ | ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮ ಆರಂಭಿಸಿದರೆ ಯಶಸ್ವಿ ಸಾಧ್ಯ: ಅರವಿಂದ ಈಶ್ವರ ಘಟ್ಟಿ

Date:

ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮವನ್ನು ಪ್ರಾರಂಭಿಸಿದಾಗ ಮಾತ್ರ ಯಶಸ್ವಿ ಉದ್ಯಮಿಗಳಾಗಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಹಾಗೂ ಚಿಕ್ಕೋಡಿಯ ಎಐಜಿ ಪೌಂಡೇಶನ್ ಅಧ್ಯಕ್ಷ ಅರವಿಂದ ಈಶ್ವರ ಘಟ್ಟಿ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ನವನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘ ಜಿಲ್ಲಾ ಘಟಕ, ಚಿಕ್ಕೋಡಿಯ ಎಐಜಿ ಪೌಂಢೇಶನ್, ಬೋಧಿಸತ್ವ ಗೌತಮ ಬುದ್ಧ ನಗರ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಮಖಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಗಲಕೋಟೆ ಜಿಲ್ಲಾ ಚಲವಾದಿ ಸಮಾಜದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ, 2026ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ, ತಾಲೂಕು/ಜಿಲ್ಲೆ/ರಾಜ್ಯ ಪ್ರಶಸ್ತಿ ಪಡೆದ ನೌಕರರಿಗೆ, ಪಿಎಚ್‌ಡಿ ಪೂರ್ಣಗೊಳಿಸಿದ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ಚಲವಾದಿ ಸಮಾಜದ ಮಹಿಳಾ ಜನ ಜಾಗೃತಿ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಪ್ರಸ್ತುತ ಯುವಜನರು ತಮ್ಮ ಮನೆಯ ಜವಾಬ್ದಾರಿಯನ್ನು ಮರೆತು; ಸಮಾಜ ಸೇವೆಯನ್ನು ಮಾಡಬಾರದು. ತಮ್ಮ ಮನೆಯ ಜವಾಬ್ದಾರಿಯ ಜತೆಗೆ ಸಮಾಜದ ಚಿಂತನೆಯನ್ನು ಆರಂಭಿಸಿದಾಗ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯ. ಇಂದಿನ ಯುವಜನರು ಕೇವಲ ಸರ್ಕಾರಿ ನೌಕರಿಯ ಮೇಲೆ ಅವಲಂಬಿತರಾಗದೇ ಸ್ವಂತ ಉದ್ದಿಮೆಯನ್ನು ಸ್ಥಾಪಿಸಲು ಸರ್ಕಾರ ಇಂದು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡು ಸ್ವಂತ ಉದ್ದಿಮೆ ಸ್ಥಾಪಿಸಲು ಅನುಕೂಲವಾಗುತ್ತದೆ. ಆಗ ಮಾತ್ರ ಸಮಾಜ ಹಾಗೂ ತಮ್ಮ ಮನೆಯ ಸೇವೆಯನ್ನು ಮಾಡಲು ಉತ್ತಮ ಸಹಕಾರಿಯಾಗುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘಟನೆಯ ಉಪಾಧ್ಯಕ್ಷ ಡಾ. ಪಿ ಡಿ ಸರಿಕರ, “ನಮ್ಮ ಸಂಘಟನೆ 2025ರಲ್ಲಿ ಪ್ರಾರಂಭವಾಗಿ ಪ್ರಪ್ರಥಮ ಬಾರಿಗೆ ಇದೇ ವೇದಿಕೆಯಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡು ಯಶಸ್ವಿಯಾಗಿ ನೆರವೇರಿಸಿ ಮುಂದುವರೆದ ಭಾಗವಾಗಿ ಚಲವಾದಿ ಸಮಾಜದ ವಧು-ವರರ ಸಮಾವೇಶವನ್ನು ನಡೆಸಿಕೊಂಡು ಬಂದಿದೆ. ಹೆಮ್ಮೆಯ ವಿಷಯ ನಮ್ಮ ಸಂಘಟನೆಯಲ್ಲಿ ನಿವೃತ್ತಿ ಹೊಂದಿದ ಸಮಾಜದ 77 ಮಂದಿ ಸದಸ್ಯರಿದ್ದು, ಸರ್ವ ಸದಸ್ಯರು ಒಮ್ಮತದಿಂದ ಕೆಲಸ ಮಾಡಿದಾಗ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ” ಎಂದರು.

ಸರ್ಕಾರಿ ನೌಕರರ ಸಂಘದ ಗ್ರೇಡ್ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ ನೀಲನಾಯಕ ಅತಿಥಿಯಾಗಿ ಮಾತನಾಡಿ, “ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ. ಪ್ರತಿ ವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಈ ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘಟನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ಇಂತಹ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಜರುಗುವಂತಾಗಬೇಕು” ಎಂದು ತಿಳಿಸಿದರು.

ಉಪನ್ಯಾಸಕರಾಗಿ ಆಗಮಿಸಿದ್ದ ತಾಳಿಕೋಟೆಯ ಎಸ್ ಕೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಪಕ ಡಾ. ಸುಜಾತಾ ಚಲವಾದಿ ಮಾತನಾಡಿ, “ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ. ಇಂತಹ ಪ್ರತಿಭೆಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಅವರ ಮುಂದಿನ ಕಲಿಕೆಗೆ ಮೈಲುಗಲ್ಲು ಆಗಲಿದೆ” ಎಂದರು.

ಮಹಿಳಾ ಜನಜಾಗೃತಿ ಸಮಾವೇಶದ ಬಗ್ಗೆ ಮಾತನಾಡಿದ ಅವರು, “ಇಂದು ಮಹಿಳೆಯರು ಪ್ರತಿ ರಂಗದಲ್ಲೂ ಮುಂದೆ ಬಂದರೆ ಸಮಾಜದ ಅಭಿವೃದ್ಧಿ ಜತೆಗೆ ಮಕ್ಕಳ ಶಿಕ್ಷಣದ ಅಭಿವೃದ್ಧಿ ಸಾಧ್ಯವಾಗುತ್ತದೆ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಭಾರತದಲ್ಲಿರುವ ಪ್ರತಿಯೊಬ್ಬ ಮಹಿಳೆಗೆ ಸಮಾನ ಹಕ್ಕನ್ನು ಕೊಟ್ಟಿದ್ದು, ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯು ಸಮಾನ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟವರೆಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಆದ್ದರಿಂದ ಮಹಿಳೆಯರು ಮೂಡನಂಭಿಕೆಗಳಿಗೆ ಬಲಿಯಾಗದೇ ಹೆಚ್ಚು ಜಾಗೃತಿ ವಹಿಸಬೇಕು. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಮತ್ತು ಶಿಕ್ಷಣವನ್ನು ತಮ್ಮ ಮಕ್ಕಳಿಗೆ ನೀಡಬೇಕು. ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರವನ್ನು ಎತ್ತಿ ತೋರಿಸಬೇಕು” ಎಂದು ನೆರೆದಿದ್ದ ಮಹಿಳೆಯರಿಗೆ ತಿಳಿಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿಗೆ ತಕ್ಕಂತೆ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬುದ್ಧವಿಹಾರ, ನವನಗರದ ಪೂಜ್ಯ ಆಯುಷ್ಮಾನ ದಮ್ಮಪಾಲ ಬಂಥೇಜಿ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ ಎಚ್ ನಾರಾಯಣಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪರಶುರಾಮ ಕಾಂಬಳೆ ಚಲವಾದಿ, ಸಮಾಜದ ಹಿರಿಯ ನಾಗರಿಕ ಸಂಘದ ಜಿಲ್ಲಾ ಪದಾಧಿಕಾರಿಗಳಾದ ಎಚ್ ಡಿ ಹೊಸಮನಿ, ವೈ ಎನ್ ಚಲವಾದಿ, ರಾಮಚಂದ್ರ ನಾಟೀಕಾರ, ಸುಭಾಸ ಹೊದ್ಲೂರ ಶಿವಕುಮಾರ ಶಿಂಘೆ, ಗ್ಯಾನಪ್ಪ ಚಲವಾದಿ, ಮುತ್ತು ಗರಸಂಗಿ, ಎಚ್ ಡಿ ಹೊಸಮನಿ, ಸಿದ್ದಣ್ಣ ಕಡಾಡಿ, ಗುರು ಮದಿನಕರ, ವೈ ಎಸ್ ಕೊಪ್ಪದ, ವಿದ್ಯಾಸಾಗರ ತಳಕೇರಿ, ಶಂಕ್ರಪ್ಪ ದೊಡಮನಿ, ಗೋಪಾಲ ನಾರಾಯಣಿ, ಡಿ ಎಸ್ ಜೈಭೀಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...