ಬಾಗಲಕೋಟೆ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇಮಕಾತಿಯಲ್ಲಿ ಅಕ್ರಮ; ಕ್ರಮಕ್ಕೆ ಆಗ್ರಹ

Date:

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕೊಣ್ಣೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಿರುವ ಅಕ್ರಮ ನೇಮಕಾತಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿ ಜಮಖಂಡಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

“ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನೇಮಕಾತಿ ಕರೆಯಲಾಗಿತ್ತು. ಇಲ್ಲಿ ಯಾವುದೇ ಮಾನದಂಡಗಳನ್ನು ಪರಿಗಣಿಸದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ತಮಗೆ ಬೇಕಾದ ಅಭ್ಯರ್ಥಿಗಳಿಂದ ಹಣ ಪಡೆದು ನೇಮಕ ಮಾಡಿಕೊಂಡಿದ್ದಾರೆ” ಎಂದು ಪರೀಕ್ಷಾರ್ಥಿ ಅರ್ಜುನ ಮರನೂರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಕೊಣ್ಣೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪೂರ್ವ ನಿರ್ಧರಿತ ರೀತಿಯಲ್ಲಿ ನಡೆದಿರುವ ಸಿಬ್ಬಂದಿ ನೇಮಕಾತಿಯನ್ನು ಕೂಡಲೇ ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಪರೀಕ್ಷಾರ್ಥಿ ಅರ್ಜುನ ಮರನೂರು ಮಾತನಾಡಿ, “ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಎರಡು ಕಂಪ್ಯೂಟರ್ ಆಪರೇಟರ್, 3 ಕ್ಲರ್ಕ್ ಹುದ್ದೆ, 1 ಸಿಪಾಯಿ ಹುದ್ದೆಗೆ ಅರ್ಜಿ ಕರೆಯಲಾಗಿತ್ತು. ಲಿಖಿತ ಪರೀಕ್ಷೆ ಹಾಗೂ ಮೌಕಿಕ ಸಂದರ್ಶನವೂ ಇತ್ತು. ಆದರೆ ಇಲ್ಲಿ ಆಡಳಿತ ಕಮಿಟಿ ಅಧ್ಯಕ್ಷರು, ನಿರ್ದೇಶಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ತಮಗೆ ಬೇಕಾದ ಅಭ್ಯರ್ಥಿಗಳ ಕಡೆಯಿಂದ ತಲಾ ₹15 ಲಕ್ಷ ಲಂಚ ತೆಗೆದುಕೊಂಡು ಅವರನ್ನು ಆಯ್ಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

ದಲಿತ ಮುಖಂಡ ಶಿವಾನಂದ ಬಬಲೇಶ್ವರ ಮಾತನಾಡಿ, “ನಮ್ಮ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ವಿಶ್ವವಿದ್ಯಾಲಯಗಳು ಇದ್ದು, ಅವುಗಳಿಗೆ ಕೊಡದೆ, ಮಂಡ್ಯ ವಿಶ್ವವಿದ್ಯಾಲಯವನ್ನು ಪರೀಕ್ಷೆ ನಡೆಸಲು ಆಯ್ಕೆ ಮಾಡಿಕೊಂಡಿದ್ದು ಸಂಶಯಾಸ್ಪದವಾಗಿದೆ. ಹಾಗೆ ಪರೀಕ್ಷೆಯನ್ನು ನಡೆಸಲು ವಿಶ್ವವಿದ್ಯಾಲಯ ಆಯ್ಕೆ ಮಾಡುವಾಗ ಪಾರದರ್ಶಕವಾಗಿ ಸ್ಥಳೀಯರಿಗೆ ಹಾಗೂ ಊರಿನ ಪ್ರಮುಖರಿಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಕೊಣ್ಣೂರ ಗ್ರಾಮದ ಸ್ಥಳಿಯ ವಾಟ್ಸಪ್ ಗ್ರೂಪ್‌ಗಳು ಸಾಕಷ್ಟು ಇದ್ದು‌, ನೇಮಕಾತಿ ಪ್ರಕ್ರಿಯೆ ಬಗ್ಗೆ ಪ್ರಚಾರ ಮಾಡದೇ ಗುಪ್ತವಾಗಿ ಇಡಲಾಗಿತ್ತು. ಸಂಘದ ಎಲ್ಲ ಶೇರುದಾರರಿಗೆ ಮಾಹಿತಿ ನೀಡಿರುವುದಿಲ್ಲ” ಎಂದರು.

ದಲಿತ ಮುಖಂಡ ವಿಜಯ ಛಲವಾದಿ ಮಾತನಾಡಿ, “ಸಿಬ್ಬಂದಿ ನೇಮಕಾತಿ ಮಾಡಿಕೊಂಡಿರುವುದು ಸಂಶಯಾಸ್ಪದವಾಗಿದೆ. ಸುಮಾರು 12 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಳೆಯ ಸಿಬ್ಬಂದಿಗೆ ಮುಂಬಡ್ತಿ ಹುದ್ದೆ ನೀಡದೆ ಹೊಸಬರನ್ನು ನೇರವಾಗಿ ಆಯ್ಕೆ ಮಾಡಿಕೊಂಡಿದ್ದು, ಸಹಕಾರ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿದೆ. ಕೀ ಉತ್ತರಗಳನ್ನು ಬಿಡುಗಡೆ ಮಾಡಿದ ಬಳಿಕ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ನಿಯಮದಲ್ಲಿ ಅವಕಾಶ ಕೊಡಲಾಗುತ್ತದೆ. ಆದರೆ, ಇಲ್ಲಿ ಏಕ ಅವಕಾಶ ಕೊಟ್ಟಿರುವುದಿಲ್ಲ. ಒಟ್ಟಾರೆಯಾಗಿ ಇಡೀ ನೇಮಕಾತಿ ಪ್ರಕ್ರಿಯೆ ಅಕ್ರಮದಿಂದ ಕೂಡಿದೆ. ಕೂಡಲೇ ಸೂಕ್ತ ತನಿಖೆ ನಡೆಸಿ ಮರು ಪರೀಕ್ಷೆ ನಡೆಸಬೇಕು. ನಮ್ಮ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗದಿದ್ದರೆ ಜಿಲ್ಲಾಡಳಿತದ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಂಕಟಗಳಿಗೆ ಧ್ವನಿಯಾಗುವ ಕಲಾ ಮಾಧ್ಯಮ ಸಿನಿಮಾ : ಗಿರೀಶ್‌ ಕಾಸರವಳ್ಳಿ

ಈ ಪ್ರತಿಭಟನೆಯಲ್ಲಿ ರೈತ ಮುಖಂಡರುಗಳಾದ ಮಲ್ಲಪ್ಪ ಹೊರಟ್ಟಿ, ಭೀಮಪ್ಪ‌ಸುಣಗಾರ, ಗ್ರಾಮ ಪಂಚಾಯತಿ ಸದಸ್ಯ ಗದಿಗೆಪ್ಪ ಧಾರವಾಡ, ಭೀರಪ್ಪ ಎಣ್ಣಿ, ಕರೇಪ್ಪ ಮೇತ್ರಿ ಸೇರಿದಂತೆ ಪರೀಕ್ಷಾರ್ಥಿಗಳು ಇದ್ದರು.

ವರದಿ: ಜಮಖಂಡಿ ಸಿಟಿಜನ್ ಜರ್ನಲಿಸ್ಟ್ ಮಹದೇವ ಕುಂಚನೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...