ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

Date:

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ವರದಿ ಬಂದ ಬಳಿಕ ವಾಸ್ತವಾಂಶಗಳು ತಿಳಿಯಲಿವೆ. ಹೀಗಾಗಿ ಆತುರದ ತೀರ್ಮಾನಕ್ಕೆ ಬರುವ ಬದಲು ತಾಳ್ಮೆಯಿಂದ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.

- Advertisement -

ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಹಾಗೂ ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಂಬಂಧಪಟ್ಟವರು ತಪ್ಪು ಮಾಡಿದ್ದರೆ ಅದಕ್ಕೆ ಉತ್ತರಿಸಲೇಬೇಕಾಗುತ್ತದೆ. ಹನಿ ಟ್ರ್ಯಾಪ್ ಮಾಡಿದವರು ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಎಂದು ಮಾರ್ಮಿಕವಾಗಿ ನುಡಿದರು.

ಸ್ಟಿಂಗ್ ಆಪರೇಷನ್ ಅನ್ನು ತಮ್ಮದೇ ಪಕ್ಷದವರು ಮಾಡಿಸಿದ್ದಾರೆ ಎಂಬ ಸಚಿವ ಯತೀಂದ್ರ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಶಪ್ಪನವರ, ಆ ಹೇಳಿಕೆಯನ್ನು ತಾನು ಗಮನಿಸಿಲ್ಲ. ಈ ವಿಚಾರದ ಬಗ್ಗೆ ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ವಿಡಿಯೋವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ತಳ್ಳಿಹಾಕಿದ ಕಾಶಪ್ಪನವರ, ಇವೆಲ್ಲವೂ ವಿನಾಕಾರಣ ಮಾಡುತ್ತಿರುವ ಆರೋಪಗಳು ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬಾರದು ಎಂಬ ಕಾರಣಕ್ಕೆ ಅವರ ವಿರುದ್ಧ ಪಕ್ಷದೊಳಗೇ ಉಚ್ಛಾಟನೆಯ ಕ್ರಮ ಕೈಗೊಳ್ಳಲಾಗಿತ್ತು.ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಏನನ್ನೂ ಮಾಡದವರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದಲೇ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.ಜೆಡಿಎಸ್‌ನ ರಾಜಕೀಯ ಭವಿಷ್ಯದ ಕುರಿತು ವ್ಯಂಗ್ಯವಾಡಿದ ಕಾಶಪ್ಪನವರ, ಕುಮಾರಸ್ವಾಮಿ ಅವರು ಶಾಶ್ವತವಾಗಿ ಮುಖ್ಯಮಂತ್ರಿಯಾಗಿ ಉಳಿಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಜೆಡಿಎಸ್ ಕುಟುಂಬಕ್ಕೆ ಸೀಮಿತವಾದ ಪಕ್ಷವಾಗಿದ್ದು, ಜನರು ಆ ಪಕ್ಷವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಟೀಕಿಸಿದರು.2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಈಗಿರುವ 18 ಸ್ಥಾನಗಳೂ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

ಸಮ್ಮಿಶ್ರ ಸರ್ಕಾರದ ಮೂಲಕ ಮತ್ತೆ ಅಧಿಕಾರಕ್ಕೆ ಬರಬಹುದು ಎಂಬ ಕನಸನ್ನು ಕುಮಾರಸ್ವಾಮಿ ಕಾಣುತ್ತಿದ್ದಾರೆ. ಆದರೆ, ಜಾತ್ಯತೀತ ತಳಹದಿಯ ಮೇಲೆ ಪಕ್ಷ ಕಟ್ಟಿದ್ದೇವೆ ಎನ್ನುವ ಜೆಡಿಎಸ್, ಕೋಮುವಾದಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ಯಾವ ಸಿದ್ಧಾಂತವನ್ನು ತೋರಿಸುತ್ತದೆ? ಎಂದು ಪ್ರಶ್ನಿಸಿದರು.

ಜೆಡಿಎಸ್‌ಗೆ ನಿರ್ದಿಷ್ಟ ತತ್ವ ಮತ್ತು ಸಿದ್ಧಾಂತಗಳಿಲ್ಲ ಎಂದು ಆರೋಪಿಸಿದ ಅವರು, ಬಿಜೆಪಿ ಜೊತೆಗಿನ ಮೈತ್ರಿಯನ್ನೇ ಮುಂದಿಟ್ಟುಕೊಂಡು ಆ ಪಕ್ಷದ ರಾಜಕೀಯ ನಿಲುವನ್ನು ಟೀಕಿಸಿದರು.ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿಗೆ ಮರಳುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಶಪ್ಪನವರ, ಯತ್ನಾಳ ಅವರು ಹಿಂದೆ ಜೆಸಿಬಿ ಮೇಲೆ ಹೂವು ಹಾಕುತ್ತಿದ್ದರು, ‘ಜೆಸಿಬಿ ನನ್ನದು’ ಎಂದು ಹೇಳುತ್ತಿದ್ದರು.ಈಗ ಆ ಜೆಸಿಬಿ ಎಲ್ಲಿ ಹೋಯಿತು ಎಂದು ವ್ಯಂಗ್ಯವಾಡಿದರು.

ಯತ್ನಾಳರನ್ನು ಮತ್ತೆ ಬಿಜೆಪಿಗೆ ಕರೆತಂದರೆ, ಅದೇ ಜೆಸಿಬಿ ಬಳಸಿ ಪಕ್ಷವನ್ನು ಸ್ವಚ್ಛಗೊಳಿಸುವ ಪರಿಸ್ಥಿತಿ ಎದುರಾಗಬಹುದು. ಈಗಾಗಲೇ ಉಳಿದಿರುವ ಬಿಜೆಪಿಯ ಮರ್ಯಾದೆಯೂ ಹೋಗಬಹುದು ಎಂದು ಟೀಕಿಸಿದರು.

ಯತ್ನಾಳ ಅವರನ್ನು ಪಕ್ಷದಿಂದ ಹೊರಹಾಕಿದವರ ರಾಜಕೀಯ ಅಸ್ತಿತ್ವಕ್ಕೇ ಅವರು ಮರಳಿದ ಬಳಿಕ ಸವಾಲು ಎದುರಾಗಬಹುದು ಎಂಬರ್ಥದಲ್ಲಿ ಮಾತನಾಡಿದ ಸಚಿವರು, ಬಿಜೆಪಿಯೊಳಗಿನ ಬೆಳವಣಿಗೆಗಳ ಕುರಿತು ವ್ಯಂಗ್ಯಭರಿತ ಹೇಳಿಕೆ ನೀಡಿದರು.

ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ತನಿಖೆಯ ಫಲಿತಾಂಶಕ್ಕಾಗಿ ಕಾಯುವಂತೆ ಹೇಳಿದ ಸಚಿವ ವಿಜಯಾನಂದ ಕಾಶಪ್ಪನವರ, ಇದೇ ವೇಳೆ ಸಿದ್ದರಾಮಯ್ಯ ವಿರುದ್ಧದ ಆರೋಪಗಳು, ಜೆಡಿಎಸ್‌ನ ರಾಜಕೀಯ ನಿಲುವು ಹಾಗೂ ಯತ್ನಾಳರ ಬಿಜೆಪಿ ಮರುಪ್ರವೇಶದ ವಿಚಾರಗಳಲ್ಲಿ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...