ಬಾಗಲಕೋಟೆ | ನವನಗರ ಬೌದ್ಧ ವಿಹಾರಕ್ಕೆ ಸಚಿವರ ಭೇಟಿ: ಅಭಿವೃದ್ಧಿಗೆ ಭರವಸೆ

Date:

ನವನಗರದ ಎಪಿಎಂಸಿ ಸಮೀಪದಲ್ಲಿರುವ ಬೌದ್ಧ ವಿಹಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಇಂದು ಭೇಟಿ ನೀಡಿ ವಿಹಾರದ ಅಭಿವೃದ್ಧಿ ಹಾಗೂ ವ್ಯವಸ್ಥೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement -

ವಿಸ್ತಾರವಾದ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಬೌದ್ಧ ವಿಹಾರದಲ್ಲಿ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಬಹುಜನ ನಾಯಕರ ಪ್ರತಿಮೆಗಳು ಸ್ಥಾಪಿಸಲಾಗಿದ್ದು, ಅವುಗಳನ್ನು ವೀಕ್ಷಿಸಿದ ಸಚಿವರು ಸಂತೋಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ವಿಹಾರದ ಸಾಂಸ್ಕೃತಿಕ ಮತ್ತು ಸಾಮಾಜಿಕ ಮಹತ್ವವನ್ನು ಗುರುತಿಸಿದ ಅವರು, ಇಂತಹ ಕೇಂದ್ರಗಳು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಭೀಮವಾದದ ರಾಜ್ಯ ಸಂಚಾಲಕ ಪರಸುರಾಮ ನೀಲನಾಯಕ ಅವರೊಂದಿಗೆ ಸಚಿವರು ಕೆಲಕಾಲ ಮಾತುಕತೆ ನಡೆಸಿದರು. ಸ್ಥಳೀಯವಾಗಿ ಎದುರಾಗುತ್ತಿರುವ ಸಮಸ್ಯೆಗಳು, ಮೂಲಭೂತ ಸೌಲಭ್ಯಗಳ ಅಗತ್ಯತೆ ಹಾಗೂ ಅಭಿವೃದ್ಧಿ ಕುರಿತಾಗಿ ಚರ್ಚಿಸಿ, ಅವುಗಳ ಪರಿಹಾರಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಬಾಗಲಕೋಟೆ | ಪೋಕ್ಸೊ ಆರೋಪಿಗೆ 5 ಲಕ್ಷ ರೂ. ದಂಡ, 20 ವರ್ಷ ಶಿಕ್ಷೆ: ಸತ್ರ ನ್ಯಾಯಾಲಯ ಆದೇಶ

ಕಾರ್ಯಕ್ರಮದಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ, ಬಸವರಾಜ ಬದಾಮಿ, ನಾಗೇಶ ನೀಲನಾಯಕ, ಡಿ.ಎಸ್. ಜೈಭೀಮ, ರಮೇಶ್ ಗಂಜಿಹಾಳ, ಎನ್.ಬಿ. ಗಸ್ತಿಬಸವರಾಜ ಹಿರೇಮನಿ, ಸದಾಶಿವ ಕೆಂಭಾವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಜೊತೆಗೆ ಮುಸ್ಲಿಂ ಮುಖಂಡರು ಹಾಗೂ ಬುದ್ಧ ಅನುಯಾಯಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...