ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.
ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಭಾಗದ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತೋರಿದ ಈ ಸಾಧನೆ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಎಂ. ನದಾಫ್ ಹಾಗೂ ಶ್ರೀಶೈಲ ಗಣಿ ಅವರು ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ಮತ್ತು ಸೂಕ್ತ ಮಾರ್ಗದರ್ಶನ ನೀಡಿದ್ದು, ಈ ಯಶಸ್ಸಿಗೆ ಕಾರಣರಾಗಿದ್ದಾರೆ.



