ಬಾಗಲಕೋಟೆ | ‘ಕಾಕ್ರೋಚ್’ ಪೋಸ್ಟರ್ ಮಹಾತ್ಮೆ; ವಿಡಿಯೋ ವೈರಲ್ ಬೆನ್ನಲ್ಲೇ ಗುಂಡಿ ಮುಚ್ಚಿದ ಅಧಿಕಾರಿಗಳು

Date:

ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿರುವ ‘ಕಾಕ್ರೋಚ್ ಜನತಾ ಪಕ್ಷ’ (CJP) ಪ್ರೇರಿತ ಅನಾಮಧೇಯ ಯುವಕರ ಗುಂಪೊಂದು, ನಗರಸಭೆಯ ಬೇಜವಾಬ್ದಾರಿತನದ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದೆ. ಮಾತ್ರವಲ್ಲದೆ, ಯಶಸ್ಸನ್ನೂ ಕಂಡಿದೆ. ರಸ್ತೆ ಮಧ್ಯದ ಅಪಾಯಕಾರಿ ಗುಂಡಿಯನ್ನು ಮುಚ್ಚದ ಅಧಿಕಾರಿಗಳಿಗೆ ಯುವಜನರು ವ್ಯಂಗ್ಯದ ಮೂಲಕ ಚುರುಕು ಮುಟ್ಟಿಸಿದ್ದು, ಎಚ್ಚೆತ್ತ ಅಧಿಕಾರಿಗಳು ಗುಂಡಿ ಮುಚ್ಚಿದ್ದಾರೆ.

- Advertisement -

ಈ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ನಡೆದಿದೆ. ಇಳಕಲ್ ನಗರಸಭೆಯ ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಯುವಜನರ ವಿನೂತನ ಪ್ರತಿಭಟನೆ ಗಮನ ಸೆಳದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇಳಕಲ್ ನಗರದ 7ನೇ ವಾರ್ಡ್‌ನ ಸರ್ಕಾರಿ ಆಸ್ಪತ್ರೆ ಮತ್ತು ಅನ್ನಪೂರ್ಣ ಲಾಡ್ಜ್ ಹತ್ತಿರವಿರುವ ಕಿರು ಸೇತುವೆಯ ಕಾಂಕ್ರೀಟ್ ಕಿತ್ತುಹೋಗಿತ್ತು. ರಸ್ತೆ ಮಧ್ಯದಲ್ಲೇ ಕಬ್ಬಿಣದ ಸರಳುಗಳು ಬಾಯಿ ತೆರೆದು ನಿಂತಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ತರುವಂತಿತ್ತು. ಈ ಬಗ್ಗೆ ಸ್ಥಳೀಯ ನಿವಾಸಿಗಳು ನಗರಸಭೆಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಇದರಿಂದ ಆಕ್ರೋಶಗೊಂಡ ಯುವಜನರು, ಗುಂಡಿಯಿಂದ ಮೇಲಕ್ಕೆದ್ದಿದ್ದ ಕಬ್ಬಿಣದ ಕಂಬಿಗೆ ಪೋಸ್ಟರ್ ಒಂದನ್ನು ತೂಗುಹಾಕಿದರು. ಅದರಲ್ಲಿ, “ನಾನು ಕಾಕ್ರೋಚ್ (ಜಿರಳೆ), ನಿಮಗೊಂದು ಆತಂಕದ ವಿಷಯ ಹೇಳಲು ಬಂದಿದ್ದೇನೆ. ದೊಡ್ಡದಾದ ಈ ಗುಂಡಿ ಮುಚ್ಚಿಸಲು ಆಳುವವರಿಗಾಗಲಿ, ಅಧಿಕಾರಿಗಳಿಗಾಗಲಿ ಪುರುಸೊತ್ತಿಲ್ಲ. ನಿರುದ್ಯೋಗಿ ಮತ್ತು ಸೋಮಾರಿಯಾದ ನನ್ನಿಂದಲೂ ಇದು ಆಗದ ಕೆಲಸ. ದಯವಿಟ್ಟು ವಾಹನ ಸವಾರರು ಎಚ್ಚರಿಕೆಯಿಂದ ಓಡಾಡಿ” ಎಂದು ಜಿರೆಳೆಯ ಹೆಸರಿನಲ್ಲಿ ವ್ಯವಸ್ಥೆಯನ್ನು ಅಣಕಿಸಲಾಗಿತ್ತು.

ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ನೆಟ್ಟಿಗರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಲಾರಂಭಿಸಿದ್ದರು. ಇದೀಗ, ಎಚ್ಚೆತ್ತ ನಗರಸಭೆ ಅಧಿಕಾರಿಗಳು, ಸದ್ದಿಲ್ಲದೆ ಇಡೀ ಗುಂಡಿಯನ್ನು ಮುಚ್ಚಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...