ಮದುವೆಯಾಗುತ್ತೇನೆಂದು ನಂಬಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ₹5 ಲಕ್ಷ ದಂಡ ಹಾಗೂ 20 ವರ್ಷ ಕಠಿಣ ಶಿಕ್ಷೆ ನೀಡಿ ಆದೇಶಿಸಿದೆ.
ಅಪ್ರಾಪ್ತೆ ಎಂಬುದು ಗೊತ್ತಿದ್ದರೂ ಎರಡು ವರ್ಷಗಳಿಂದ ಪ್ರಿತಿಸುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ಹೋಗಿ, ʼನಾನು ನಿನ್ನನ್ನು ಮದುವೆಯಾಗುತ್ತೇನೆʼ ಎಂದು ನಂಬಿಸಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರ ಪರಿಣಾಮ ಬಾಲಕಿ ಈಗ 5 ತಿಂಗಳ ಗರ್ಭಿಣಿಯಾಗಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಕುರಿತು ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ ಸಿಪಿಐ ಸುನಿಲ್ ಸವದಿಯವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಂವಿಧಾನ ವಿರೋಧಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವ ಸಂರಕ್ಷಿಸಬೇಕು: ಜಿ ಪರಮೇಶ್ವರ್
ಸದರಿ ಪ್ರಕರಣದ ವಿಚಾರಣೆಗೆ ಕೈಗೆತ್ತಿಕೊಂಡ ಬಾಗಲಕೋಟೆಯ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರೀತಿ ಸದ್ಗುರು ಸದರ ಜೋಶಿ ಇವರು ಅಭಿಯೋಗದ ಪರ ಹಾಜರುಪಡಿಸಲಾದ ಎಲ್ಲ ಸಾಕ್ಷಿ ಪುರಾವೆಗಳನ್ನು ಅವಲೋಕಿಸಿ, ಅಭಿಯೋಜನೆಯು ಆರೋಪಿತನ ಮೇಲಿನ ಆಪಾದನೆಯನ್ನು ರುಜುವಾತುಪಡಿಸುವಲ್ಲಿ ಯಶಸ್ವಿಯಾಗಿ ಎಂದು ತಿರ್ಮಾನಿಸಿ ಆರೋಪಿಗೆ ಕಲಂ 4, 6 ಪೋಕ್ಸೊ ಕಾಯ್ದೆಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಹೇಶ ಪಾಟೀಲ ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು.




