ಬಾಗಲಕೋಟೆ | ಶಾಮನೂರು ಶಿವಶಂಕರಪ್ಪ ಜಾತಿನಿಂದನೆ; ಕ್ಷಮೆಯಾಚಿಸುವಂತೆ ಹಡಪದ ಸಮಾಜದ ಮುಖಂಡರು ಆಗ್ರಹ

Date:

ಕ್ಷೌರಿಕ ವೃತ್ತಿ ನಿರತ ಹಡಪದ ಸಮಾಜದ ಬಗ್ಗೆ ಕಾನೂನು ನಿಷೇದಾತ್ಮಕ ಪದ ಬಳಸಿ ನಮ್ಮ ಸಮಾಜದ ಬಂಧುಗಳಿಗೆ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ ಶಾಮನೂರ ಶಿವಶಂಕ್ರಪ್ಪ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ ಮೇಲೆ ಸ್ವಯಂ ಪ್ರೇರಿತ ಪಿರ್ಯಾದಿ ದಾಖಲಿಸುವ ಕುರಿತು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೋಲಿಸ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದರು.

“ನಾವು ಕ್ಷೌರಿಕ ವೃತ್ತಿಯನ್ನು ತಲಾತಲಾಂತರದಿಂದ ಮಾಡಿಕೊಂಡು ಬಂದಿದ್ದೇವೆ. ಈ ಮೂಲಕ ಜನರ ಸೇವೆಯನ್ನು ಮಾಡುತ್ತಿದ್ದೇವೆ” ಎಂದು ಹಡಪದ ಸಮಾಜದ ಮುಖಂಡರು ಹೇಳಿದರು.

“ವೀರಶೈವ ಲಿಂಗಾಯತ ಮಹಾಸಭಾದ ಮುಖಂಡ, ಮಾಜಿ ಸಚಿವ ಶಾಮನೂರ ಶಿವಶಂಕ್ರಪ್ಪ ಅವರು ಮಹಾ ಸಭಾದ ಬಗ್ಗೆ ಪತ್ರಿಕಾ ಪ್ರಕಟನೆ ಮಾಡುವ ಸಮಯದಲ್ಲಿ ನಮ್ಮ ನಮ್ಮ ಸಮಾಜದ ನಾಗರಿಕರಿಗೆ ಕಾನೂನು ನಿಷೇಧಾತ್ಮಕ ಪದ ಬಳಸಿ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ್ದಾರೆ. ಹಾಗಾಗಿ ಅವರು ನಮ್ಮ ಸಮಾಜದ ಬಂಧುಗಳಿಗೆ ಮಾಡಿದ ಜಾತಿನಿಂದನೆಗೆ ಕ್ಷಮೆಯಾಚಿಸಬೇಕು” ಎಂದು ಹಡಪದ ಸಮಾಜದ ಗುರುಹಿರಿಯರು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೊಡಗು | ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಸಾಮರ್ಥ್ಯ ಬೆಳೆಸಲು ಕೆ‌ ಟಿ ಬೇಬಿಮ್ಯಾಥ್ಯೂ ಕರೆ

“ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಸ್ವಯಂ ಪ್ರೇರಿತ ಪಿರ್ಯಾದಿ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...