ಬಾಗಲಕೋಟೆ | ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ: ಸಿದ್ದರಾಮಯ್ಯ ತಿರುಗೇಟು

Date:

ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ. ಅವರಿಗೆ ಯಾವುದೇ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

- Advertisement -

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆ ʼಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆʼ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, “ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಅವರು. ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡ್ ಅಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲ. ಆದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲುವ ಭಯ ಇರುವುದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ” ಎಂದರು.

“ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ. ಹಾಗಾಗಿ ಬಿಜೆಪಿ ಕರ್ನಾಟಕದಲ್ಲಿ ಹೀನಾಯ ಸ್ಥಿತಿಯಲ್ಲಿದೆ” ಎಂದರು.

ಲೋಕಸಭಾ ಸ್ಥಾನಗಳ ಹೆಚ್ಚಳ: ʼಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನುʼ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಗಳನ್ನು ಹೆಚ್ಚಿಸಬೇಕು. ಆದರೆ ಅನ್ಯಾಯ ದೋರಣೆ ಇರಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ; ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು” ಎಂದರು.

ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು

ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ, “ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವ ಬಗ್ಗೆ ಮಾತನಾಡಿ, ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು” ಎಂದರು.

ʼಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆʼ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ವಿರುದ್ಧ ಪ್ರತಿಕ್ರಿಯೆ ನೀಡಿ, “ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ?” ಎಂದರು.

ಎಲ್ಲರಿಗೂ ಅನುದಾನ ನೀಡಿದಂತೆ ಅಲ್ಪಸಂಖ್ಯಾತರಿಗೂ ಅನುದಾನ ಒದಗಿಸಲಾಗಿದೆ

ರಾಜ್ಯದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಯತ್ನಾಳ್ ಅವರು ಆರೋಪಿಸಿರುವ ಬಗ್ಗೆ ಮಾತನಾಡಿ, “ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ.14ರಷ್ಟಿದ್ದು, ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ” ಎಂದರು.

ಬಿಜೆಪಿ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ

ಬಿಜೆಪಿಯವರು ಸಿಎಂ ಸ್ಥಾನದ ಬಗ್ಗೆ ಪದೇ ಪದೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, “ಈಗಾಗಲೇ ಈ ಕುರಿತು ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು ಅವರೇನು ನಮ್ಮ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್” ಎಂದರು.

ಇದನ್ನೂ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮತದಾರರ ಪ್ರಚಾರ, ಪಾಠ ಕಲಿಯುವುದೇ ಹೈಕಮಾಂಡ್?

ಅಧಿಕಾರ ಮತ್ತು ಹಣದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, “ಹಾಗೇನಾದರೂ ಹಣ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರೆ ಅದು ಬಿಜೆಪಿ ಮಾತ್ರ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...