ಬಾಗಲಕೋಟೆ ಕಲ್ಲು ತೂರಾಟ ಪೂರ್ವನಿಯೋಜಿತ ಒಳಸಂಚು; ಅಹಿಂದ ಸಂಘಟನೆಗಳ ಆರೋಪ

Date:

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಪವಿತ್ರ ರಂಜಾನ್ ಉಪವಾಸದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆ ಕೇವಲ ಆಕಸ್ಮಿಕವಲ್ಲ; ಅದೊಂದು ಪೂರ್ವನಿಯೋಜಿತ ಒಳಸಂಚು ಎಂದು ಮುಧೋಳದ ಅಹಿಂದ ಸಂಘಟನೆಯ ಒಕ್ಕೂಟ ಗಂಭೀರವಾಗಿ ಆರೋಪ ಮಾಡಿದೆ.

- Advertisement -

ಘಟನೆ ನಡೆಯಲು ಸಂಚು ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಸರ್ಕಲ್‌ನಿಂದ ಹೊರಟ ಪ್ರತಿಭಟನಾ ಮೆರವಣಿಗೆ ತಹಸೀಲ್ದಾರ್‌ ಕಚೇರಿಗೆ ತೆರಳಿ ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಬಿಲಾಲ್ ಬಾನದರ ನೇತೃತ್ವದಲ್ಲಿ ತಹಸೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಹಿಂದ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಮಾತನಾಡಿ, “ಜಿಲ್ಲೆಯಲ್ಲಿ ಶಾಂತಿ ಮತ್ತು ಸುಸ್ಥಿರ ಕಾನೂನು ಸುವ್ಯಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ಹಿಂದೆ ಸಮೀರವಾಡಿ ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದರೆ ಇಂದು ಇಂತಹ ಘಟನೆ ನಡೆಯುತ್ತಿರಲಿಲ್ಲ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ಇಂತಹ ಅಹಿತಕರ ಘಟನೆಗಳಿಗೆ ಪ್ರಚೋದನೆ ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2026 02 27 at 10.57.53 AM

ಜಿಪಂ ಮಾಜಿ ಉಪಾಧ್ಯಕ್ಷ ಹಾಗೂ ರೈತ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, “ಈ ಘರ್ಷಣೆಯ ಹಿಂದೆ ವ್ಯವಸ್ಥಿತವಾದ ಹಿಡನ್ ಅಜೆಂಡಾ ಅಡಗಿದೆ. ರಂಜಾನ್ ಪ್ರಾರ್ಥನೆಯ ಸಮಯ ಹಾಗೂ ಶಿವಾಜಿ ಜಯಂತಿಯ ಮೆರವಣಿಗೆಯ ಹಾದಿಯಲ್ಲಿ ಸೂಕ್ತ ಭದ್ರತೆ ಒದಗಿಸದೇ ಇರುವುದು ವ್ಯವಸ್ಥಿತ ಸಂಚಿನಂತೆ ಭಾಸವಾಗುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಕೋಮು ಕಂದಕ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಅಹಿಂದ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಗಣೇಶ ಮೇತ್ರಿ ಮಾತನಾಡಿ, “ಫೆ.19ರಂದು ರಾತ್ರಿ 10 ಗಂಟೆಯವರೆಗೆ ಮಸೀದಿಯ ಮುಂಭಾಗದಲ್ಲಿ ಡಿಜೆ ಬಳಸಿ ಸಂಭ್ರಮಿಸಲಾಗುತ್ತಿತ್ತು. ಪ್ರಾರ್ಥನೆಯಲ್ಲಿದ್ದ ಮುಸ್ಲಿಂ ಬಾಂಧವರ ಮಸೀದಿಯ ಒಳಗಿನಿಂದಲೇ ಓರ್ವ ಯುವಕನೊಬ್ಬ ಕಲ್ಲು ತೂರಿದ ಎಂಬ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಸೌಹಾರ್ದತೆ ಕೆಡಿಸಿದವರಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಬಾಗಲಕೋಟೆ | ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕ: ಸೀತಾಲಕ್ಷ್ಮಿ

ಮಾರುತಿ ಮಾನೆ, ಬಿಲಾಲ ಬಾನದಾರ, ಮುತ್ತಪ್ಪ ಕೋಮಾರ, ಹನುಮಂತ ಶಿಂಧೆ, ಜಾವೇದ್ ಹವಾಲ್ದಾರ, ರಾಜು ಜಮಾದಾರ, ಗೋವಿಂದಪ್ಪ ಮೆಟಗುಡ್ಡ, ಬಸಪ್ಪ ಸಂಗನವರ, ವಿಠಲ ಬಡಗೇರ, ಭೀಮತಿ ಮೇತ್ರಿ, ಜಾವೇದ ಸಾಂಗ್ಲಿಕರ, ಇಸ್ಮಾಯಿಲ್ ವಾಲಿಕರ್, ಶಫಿಕ್ ಬೇಪಾರಿ, ನೂರಲಿ ಶೇಖ ಐ.ಎಸ್. ಸುರ ಪುರ, ಮೈಬೂಬ್ ಬೆಪಾರಿ, ಅಬ್ದುಲ್ ಜಮಾದಾರ, ಬಿ.ಎಂ.ಮನಿಯಾರ, ಐ. ಎಂ.ಜಮಾದಾರ, ರಿಯಾ ಜ್ ಬಾಗವಾನ ಸೇರಿದಂತೆ ನೂರಾರು ಅಹಿಂದ ಹಾಗೂ ಮುಸ್ಲಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...