ಬಾಗಲಕೋಟೆ | ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕಟ್ಟುನಿಟ್ಟಿನ ಗಡುವು: ಸಚಿವ ತಿಮ್ಮಾಪೂರ

Date:

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಸಂಬಂಧಿಸಿದಂತೆ ಕೈಗೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಸೂಚಿಸಿದರು.

- Advertisement -

ಬಾಗಲಕೋಟೆ ನಗರದ ಜಿಲ್ಲಾ ಪಂಚಾಯತ್ ಸಭಾ‌ ಭವನದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಸ್ಥಳೀಯ ಕಲೆ, ಸಂಸ್ಕೃತಿ ಹಾಗೂ ಪಾರಂಪರಿಕ ವೈಶಿಷ್ಟ್ಯ ಉತ್ತೇಜಿಸುವ ಮೂಲಕ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಪ್ರವಾಸಿಗರಿಗೆ ಉತ್ತಮ ಸೌಲಭ್ಯ ದೊರೆಯುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಬಾದಾಮಿಯ ಅಗಸ್ವತೀರ್ಥ ಹೊಂಡದ ಮೇಲಿರುವ ಮನೆಗಳ ಸ್ಥಳಾಂತರ ಕಾರ್ಯ ಆಗುತ್ತಿಲ್ಲ. ಜಮೀನು ಹಸ್ತಾಂತರಕ್ಕೆ ಪ್ರಸ್ತಾವನೆ ಕಳುಹಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ” ಎಂದು ಶಾಸಕ ಚಿಮ್ಮನಕಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

“ಪಟ್ಟದಕಲ್ಲನಲ್ಲಿ ಕಾಮಗಾರಿ 4 ವರ್ಷ ಗತಿಸಿದರೂ ಟೂರಿಸಂ ಪ್ಲಾಜಾ ಪೂರ್ಣಗೊಂಡಿಲ್ಲ. ಈ ರೀತಿಯಾದರೆ ಪ್ರವಾಸೋದ್ಯಮ ಬಲಪಡಿಸುವುದು ಹೇಗೆ” ಎಂದು ಶಾಸಕ ಚುನಕಟ್ಟಿ ಪ್ರಶ್ನಿಸಿದರು.

“ಐಹೊಳೆ ಗ್ರಾಮದಲ್ಲಿರುವ ರಕ್ಷಿತ, ಅಸುರಕ್ಷಿತ ಸ್ಮಾರಕ ವ್ಯಾಪ್ತಿಯಲ್ಲಿ ವಾಸವಾಗಿರುವ ಕುಟುಂಬಗಳನ್ನು ಸ್ಥಳಾಂತರಿಸಬೇಕಿದೆ. ಈ ಕೆಲಸ ಒಂದೇ ಹಂತದಲ್ಲಿ ಮಾಡಲು ಆಗದಿದ್ದರೆ, ಹಂತ ಹಂತವಾಗಿಯಾದರೂ ಕೈಗೊಳ್ಳಬೇಕಿದೆ” ಎಂದು ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್ ಜಿ ನಂಜಯ್ಯನಮತ ತಿಳಿಸಿದರು.

ಇದಕ್ಕೆ ಧ್ವನಿಗೂಡಿಸಿದ ಶಾಸಕ ಉಮೇಶ್ ಮೇಟಿ, ” ಐಹೊಳೆ ಸ್ಮಾರಕಗಳ ಸಂರಕ್ಷಣೆಗಾಗಿ ವಿಶೇಷ ಕಾರ್ಯಕ್ರಮ ರೂಪಿಸಬೇಕಿದೆ. ಅಧಿಕಾರಿಗಳು ಮತುವರ್ಜಿ ವಹಿಸಿ ಸ್ಥಳಾಂತರಕ್ಕೆ ಮುಂದಾಗಬೇಕು” ಎಂದರು.

“ಸ್ಥಳಾಂತರಕ್ಕೆ 13.11 ಎಕರೆ ಜಮೀನು ಖರೀದಿಯಾಗಿದೆ. ಪುನರ್ವಸತಿ ಕಲ್ಪಿಸಲು ಯೋಜನಾ ವರದಿ ಸಲ್ಲಿಸಬೇಕಿದೆ” ಎಂದು ಎಸಿ ಸಂತೋಷ ಜಗಲಾಸರ ತಿಳಿಸಿದರು.

ಮಧ್ಯಪ್ರವೇಶಿಸಿದ ಸಚಿವರು, ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಡಿಸಿಗೆ ಸೂಚಿಸಿದರು. ಬಾದಾಮಿ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಕೂಡಾ ವಿಳಂಬವಾಗುತ್ತಿದೆ ಎಂದು ಚಿಮ್ಮನಕಟ್ಟಿ ಸಭೆಯ ಗಮನಕ್ಕೆ ತಂದರು.

ಇದನ್ನೂ ಓದಿದ್ದೀರಾ? ರಾಜ್ಯದ ಹಲವೆಡೆ ಇಂದಿನಿಂದ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಾಗಲಕೋಟೆ ತಾಲೂಕಿನ ಮಲಾಪುರ ಗುಡ್ಡದ ಮಲ್ಲಿಕಾರ್ಜುನ ದೇವಸ್ಥಾನ ಅಭಿವೃದ್ಧಿ, ಮುಧೋಳ ತಾಲೂಕಿನ ಯಡಹಳ್ಳಿಯ ಅಡಿವೇಶ್ವರ ಮಠ, ಉತ್ತೂರಿನ ಲಕ್ಷ್ಮೀ ದೇವಸ್ಥಾನ, ಜಮಖಂಡಿ ತಾಲೂಕಿನ ಕಡಪಟ್ಟಿ ಸುವರ್ಣಖಂಡಿ ದೊಡ್ಡಬಸವೇಶ್ವರ ದೇವಸ್ಥಾನ, ಶೇರದಾಳದ ಅಲ್ಲಮಪ್ರಭು ದೇವಸ್ಥಾನದ ಹತ್ತಿರ ಯಾತ್ರಿನಿವಾಸ, ಜಮಖಂಡಿಯ ಕಟ್ಟೆಕೆರೆ ಉದ್ಯಾನ ಅಭಿವೃದ್ದಿ ಕುರಿತು ಚರ್ಚೆ ನಡೆಯಿತು.

ಶಾಸಕರಾದ ಜೆ ಟಿ ಪಾಟೀಲ, ಜಗದೀಶ್ ಗುಡಗುಂಟಿ, ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾಧಿಕಾರಿ ಸಂಗಪ್ಪ ವ್ಯ ಸಿದ್ದಾರ್ಥ ಗೋಯಲ್, ಎಡಿಸಿ ಆಶೋಕ ತೇಲಿ ಕೆಬಿಜೆಎನ್ಎಲ್‌ ಬಸವರಾಜ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...