ಬಾಗಲಕೋಟೆ | ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು: ಝಡ್‌ಪಿ ಸಿಇಒ ಶಶಿಧರ ಕುರೇರ್

Date:

ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಸೌಲಭ್ಯಗಳ ನಿರ್ವಹಣೆಗೆ ಆದಾಯವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಅವರು ಸ್ಥಳೀಯರಿಗೆ ತಿಳಿಸಿದರು.

- Advertisement -

ತೆರಿಗೆ ಪಾವತಿ ಅಭಿಯಾನದ ಅಂಗವಾಗಿ ಬಾಗಲಕೋಟೆ ತಾಲೂಕಿನ ಕಲಾದಗಿ, ಖಜ್ಜಿಡೋಣಿ, ದೇವನಾಳ, ತುಳಸಗಿರಿ ಹಾಗೂ ಗದ್ದನಕೇರಿ ಗ್ರಾಮ ಪಂಚಾಯಿತಿಗಳ ಮನೆ ಮನೆಗೆ ಭೇಟಿ ನೀಡಿ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ಶುಲ್ಕ ಹಾಗೂ ಇತರೆ ಕರಗಳನ್ನು ಪಾವತಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಗ್ರಾಮ ಪಂಚಾಯಿತಿ ಸಿಬ್ಬಂದಿ ದಾಖಲೆ ನಿರ್ವಹಣೆಯಲ್ಲಿ ಪಾರದರ್ಶಕತೆ ಕಾಪಾಡುವುದು, ಆದಾಯ ಖರ್ಚಿನ ಲೆಕ್ಕಪತ್ರ ನವೀಕರಿಸುವುದು ಸೇರಿದಂತೆ ಆನ್‌ಲೈನ್ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಬೇಕು. ಮುಂದಿನ ಹದಿನೈದು ದಿನಗಳೊಳಗೆ ತೆರಿಗೆ ವಸೂಲಾತಿಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದಿ. ಬಲರಾಮ ಬಾಗಲಕೋಟ ಅವರ ಅಂಗಾಂಗ ದಾನ: ಕುಟುಂಬಸ್ಥರಿಗೆ ಉದ್ಯೋಗದ ಭರವಸೆ

ತೆರಿಗೆ ಸಂಗ್ರಹ ಪ್ರಗತಿ, ಬಾಕಿ ತೆರಿಗೆ ಪಟ್ಟಿ, ದಿನದ ವಸುಲಾತಿ ದಾಖಲೆಗಳು ಹಾಗೂ ಇ-ಗ್ರಾಮ ಸ್ವರಾಜ್ಯ ಪೋರ್ಟ್‌ನಲ್ಲಿ ದಾಖಲಾದ ಮಾಹಿತಿ ಪರಿಶೀಲಿಸಿದ ಅವರು, ತೆರಿಗೆ ವಸೂಲಾತಿ ಗುರಿ ನಿಗದಿ ಮಾಡಿ ಪ್ರತಿದಿನ ವಾರ ಪ್ರಗತಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ 195 ಗ್ರಾಮ ಪಂಚಾಯಿತಿಗಳಿದ್ದು, 31.11 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಬೇಕಿದೆ. ಈಗಾಗಲೇ ಅಂದಾಜು ₹25 ಕೋಟಿಯಷ್ಟು ಸಂಗ್ರಹವಾಗಿದೆ ಎಂದರು.

ಬಾಗಲಕೋಟೆ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...