ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

Date:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಸಾವಿರಾರು ಮತದಾರರ ಹೆಸರುಗಳ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. 34,355 ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ ಬಿದ್ದಿದ್ದಾರೆ. ಕೇವಲ ಮೂರು ತಿಂಗಳ ಹಿಂದೆ ನಡೆದ ಉಪಚುನಾವಣೆ ವೇಳೆ ಮತ ಚಲಾಯಿಸಿದ್ದ ಹಲವರ ಹೆಸರುಗಳು ಈಗ ಮತದಾರರ ಪಟ್ಟಿಯಿಂದ ಕಾಣೆಯಾಗಿರುವುದಾಗಿ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

- Advertisement -

ಲಭ್ಯ ಮಾಹಿತಿಯ ಪ್ರಕಾರ, ಏಪ್ರಿಲ್‌ನಲ್ಲಿ ನಡೆದ ಉಪಚುನಾವಣೆ ವೇಳೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 2,59,797 ಮತದಾರರಿದ್ದರು. ಆದರೆ, ಜೂನ್ 16ರಿಂದ ಆರಂಭವಾದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೇವಲ 2,47,563 ಮತದಾರರಿಗೆ ಮಾತ್ರ ಗಣತಿ ನಮೂನೆ (Enumeration Form) ವಿತರಿಸಲಾಗಿದೆ. ಅಂದರೆ, 12,234 ಮತದಾರರ ಹೆಸರುಗಳು ಎಸ್‌ಐಆರ್ ಆರಂಭಕ್ಕೂ ಮುನ್ನವೇ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಡಿಲೀಟ್ ಮಾಡಲಾದ ಹೆಸರುಗಳಲ್ಲಿ 1,027 ಮೃತರು, 781 ಗೈರು, 800 ನಕಲಿ, 8,465 ಸ್ಥಳಾಂತರಗೊಂಡವರು ಹಾಗೂ 1,161 ಇತರೆ ಕಾರಣಗಳು ಎಂದು ದಾಖಲಾಗಿದೆ. ವಿಶೇಷವೆಂದರೆ, ಈ ಪೈಕಿ ಬಹುತೇಕ ಅರ್ಜಿಗಳು ಆನ್‌ಲೈನ್ ಮೂಲಕ ಸಲ್ಲಿಕೆಯಾಗಿರುವುದಾಗಿ ತಿಳಿದುಬಂದಿದೆ.

ಇದಕ್ಕೂ ಮೀರಿ ಎಸ್‌ಐಆರ್ ಪ್ರಕ್ರಿಯೆಯಲ್ಲಿಯೇ 3,858 ಗೈರು, 21,400 ಸ್ಥಳಾಂತರಗೊಂಡವರು, 6,037 ಮೃತರು, 2,877 ನಕಲಿ ಹಾಗೂ 183 ಇತರೆ ಸೇರಿ ಒಟ್ಟು 34,355 ಮತದಾರರನ್ನು ಎಸ್‌ಎಸ್‌ಡಿಡಿಒ ವರ್ಗಕ್ಕೆ ಸೇರಿಸಲಾಗಿದೆ. ಇವರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಬಾಗಲಕೋಟೆ ಮುಳುಗಡೆ ಪ್ರದೇಶದ ಸಾವಿರಾರು ಕುಟುಂಬಗಳು ನವನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ. ಆದರೆ, ಸರ್ಕಾರದಿಂದ ನಿವೇಶನ, ಪರಿಹಾರ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ಮುಳುಗಡೆ ಪ್ರದೇಶದ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನೇ ಸಾಕ್ಷಿಯಾಗಿ ಕೇಳಲಾಗುತ್ತಿರುವ ಕಾರಣ, ಅನೇಕರು ವಾಸಸ್ಥಳ ಬದಲಾದರೂ ತಮ್ಮ ಮತದಾರರ ಹೆಸರನ್ನು ಮೂಲ ಕ್ಷೇತ್ರದಲ್ಲಿಯೇ ಉಳಿಸಿಕೊಂಡಿದ್ದಾರೆ.

ಈ ವಾಸ್ತವ ಪರಿಸ್ಥಿತಿಯನ್ನು ಸಮರ್ಪಕವಾಗಿ ಪರಿಶೀಲಿಸದ ಪರಿಣಾಮ, ಈಗಾಗಲೇ 29,865 ಸ್ಥಳಾಂತರಗೊಂಡ ಮತದಾರರು ಎಂಬ ಅಂಕಿ ದಾಖಲಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈ ವಿಷಯವಾಗಿ ಈದಿನ.ಕಾಮ್‌ ಜೊತೆಗೆ ನವನಗರ ನಿವಾಸಿ ಮಲ್ಲಪ್ಪ ಕೋರಿ, “ಮೂರು ತಿಂಗಳ ಹಿಂದಷ್ಟೇ ಉಪಚುನಾವಣೆಯಲ್ಲಿ ಮತ ಚಲಾಯಿಸಿದ್ದೆ. ಈಗ ನನ್ನ ಹೆಸರೇ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದಕ್ಕೆ ಯಾರೂ ಸ್ಪಷ್ಟ ಉತ್ತರ ನೀಡುತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ, “ಎಸ್‌ಐಆರ್‌ನಲ್ಲಿ ಸ್ಥಳಾಂತರಗೊಂಡವರ ವಿಭಾಗದಲ್ಲಿ ಬಂದಿರುವ ಎಲ್ಲ ಅರ್ಜಿಗಳನ್ನು ಮರುಪರಿಶೀಲಿಸಲಾಗುವುದು. ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಕೈಬಿಡದಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಮೂರು ತಿಂಗಳ ಅಂತರದಲ್ಲಿ ಮತದಾರರ ಪಟ್ಟಿಯಲ್ಲಿ ಕಂಡುಬಂದ ಈ ಭಾರೀ ವ್ಯತ್ಯಾಸ, ಎಸ್‌ಐಆರ್ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಪರಿಶೀಲನಾ ಕ್ರಮಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಅಂತಿಮ ಕರಡು ಪ್ರಕಟವಾಗುವ ಮುನ್ನ ಸಮಗ್ರ ಮರುಪರಿಶೀಲನೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...