ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

Date:

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಮೃತ್‌ 2.0 ಯೋಜನೆಯಡಿ ₹37.17 ಕೋಟಿ ವೆಚ್ಚದ ನೀರು ಸರಬರಾಜು ವ್ಯವಸ್ಥೆ ಪುನಶ್ಚೇತನ ಕಾಮಗಾರಿಗೆ ಸಚಿವ ವಿಜಯಾನಂದ ಕಾಶಪ್ಪನವರ ಬುಧವಾರ ಚಾಲನೆ ನೀಡಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಚಾಲುಕ್ಯ ನಗರದಲ್ಲಿ ಭೂಮಿಪೂಜೆ ನೆರವೇರಿಸಿದ ಅವರು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಇಳಕಲ್‌ ಹಾಗೂ ಹುನಗುಂದ ಪಟ್ಟಣಗಳಿಗೆ ದಿನದ 24 ಗಂಟೆಯೂ ಕುಡಿಯುವ ನೀರು ಪೂರೈಸುವ ಗುರಿ ಹೊಂದಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಯೋಜನೆಯಡಿ ಆಲಮಟ್ಟಿ ಮೂಲ ಸ್ಥಾವರದಲ್ಲಿ 600 ಎಚ್‌ಪಿ ಸಾಮರ್ಥ್ಯದ ಮೂರು ಪಂಪ್‌ಸೆಟ್‌ಗಳನ್ನು ಹಾಗೂ ಹುನಗುಂದದ ಜಲಶುದ್ಧೀಕರಣ ಘಟಕದಲ್ಲಿ 200 ಎಚ್‌ಪಿ ಸಾಮರ್ಥ್ಯದ ಮೂರು ಪಂಪ್‌ಸೆಟ್‌ಗಳನ್ನು ಅಳವಡಿಸಲಾಗುತ್ತದೆ.

ಹಳೆಯ ಪಂಪ್‌ಸೆಟ್‌ಗಳ ಬದಲಾವಣೆ ಮತ್ತು ವಿದ್ಯುತ್ ಸಂಬಂಧಿತ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತದೆ. 2014ರಲ್ಲಿ ಆರಂಭವಾದ ಆಲಮಟ್ಟಿ ಕುಡಿಯುವ ನೀರಿನ ಯೋಜನೆಯು ಜನಸಂಖ್ಯೆ ಮತ್ತು ನಗರ ವಿಸ್ತರಣೆಯಿಂದಾಗಿ ಮತ್ತಷ್ಟು ಬಲಪಡಿಸುವ ಅಗತ್ಯ ಎದುರಿಸಿತ್ತು. ಇದೀಗ ಕೈಗೆತ್ತಿಕೊಂಡಿರುವ ಪುನಶ್ಚೇತನ ಕಾಮಗಾರಿ ಪೂರ್ಣಗೊಂಡರೆ ಎರಡೂ ಪಟ್ಟಣಗಳ ಜನರಿಗೆ ನಿರಂತರ ನೀರು ಪೂರೈಕೆಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...