ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

Date:

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಾಂಡದ ಮುಖಂಡರು ಆರೋಪಿಸಿದ್ದಾರೆ.

- Advertisement -

ಬಾಗಲಕೋಟೆಯ ನವನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವೀಂದ್ರ ಲಮಾಣಿ, 2018-19ರಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಕುಮಾರ ಲೇಸು ಲಮಾಣಿ ಅವರು ಇತರ ಸಿಬ್ಬಂದಿಯ ಸಹಕಾರದಿಂದ ದಾಖಲೆಗಳನ್ನು ತಿರುಚಿ, ಎರಡು ಪ್ರಕರಣಗಳ ಮೂಲಕ ಒಟ್ಟು 12 ಎಕರೆ ಜಮೀನನ್ನು ಬೇರೆ ವ್ಯಕ್ತಿಗಳ ಹೆಸರಿಗೆ ವರ್ಗಾವಣೆ ಮಾಡಿರುವುದಾಗಿ ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

1955ರಲ್ಲೇ ಮೃತಪಟ್ಟಿದ್ದ ವ್ಯಕ್ತಿಗಳ ಹೆಸರಿನಲ್ಲಿ ಹೆಬ್ಬೆಟ್ಟಿನ ಗುರುತು ಹಾಗೂ ಸಹಿಗಳನ್ನು ಬಳಸಿ ಭೂಮಿ ವರ್ಗಾವಣೆ ಪ್ರಕ್ರಿಯೆ ನಡೆಸಲಾಗಿದೆ ಎಂಬುದು ಅವರ ಆರೋಪವಾಗಿದೆ.ಈ ಕುರಿತು ಅಕ್ಟೋಬರ್ 21 ಮತ್ತು 22ರಂದು ಲೋಕಾಯುಕ್ತ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ದೂರು ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಮೀನನ್ನು ಮೂಲ ವಾರಸುದಾರರಿಗೆ ಮರಳಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವೇಂದ್ರ ಲಮಾಣಿ, ಕೇಮು ಲಮಾಣಿ, ಮಾನಿಂಗಪ್ಪ ಲಮಾಣಿ, ಲಕ್ಷ್ಮಣ ಲಮಾಣಿ ಹಾಗೂ ಸೋಮಲು ಲಮಾಣಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...