ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

Date:

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಂಗಪ್ಪ, ರೈತರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

- Advertisement -

ಯಾವ ಬೆಳೆಗೆ ಎಷ್ಟು ಬೆಂಬಲ ಬೆಲೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...
  • ಸೂರ್ಯಕಾಂತಿ: ಪ್ರತಿ ಕ್ವಿಂಟಲ್‌ಗೆ ₹8,343
  • ಹೆಸರುಕಾಳು: ಪ್ರತಿ ಕ್ವಿಂಟಲ್‌ಗೆ ₹8,780
  • ಸೋಯಾಬೀನ್: ಪ್ರತಿ ಕ್ವಿಂಟಲ್‌ಗೆ ₹5,708

ಸೂರ್ಯಕಾಂತಿ ಮತ್ತು ಹೆಸರುಕಾಳಿಗೆ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ ಪ್ರಮಾಣದಲ್ಲಿ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್‌ವರೆಗೆ ಖರೀದಿಸಲಾಗುತ್ತದೆ. ಸೋಯಾಬೀನ್‌ಗೆ ಪ್ರತಿ ಎಕರೆಗೆ 5 ಕ್ವಿಂಟಲ್‌ ಹಾಗೂ ಒಬ್ಬ ರೈತರಿಂದ ಗರಿಷ್ಠ 25 ಕ್ವಿಂಟಲ್‌ವರೆಗೆ ಖರೀದಿ ಮಿತಿ ನಿಗದಿಪಡಿಸಲಾಗಿದೆ.

ನೋಂದಣಿ ಹೇಗೆ?

ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆ 80 ದಿನಗಳವರೆಗೆ ನಡೆಯಲಿದೆ. ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನೂ ಆರಂಭಿಸಲಾಗಿದ್ದು, ಒಟ್ಟು 90 ದಿನಗಳವರೆಗೆ ಖರೀದಿ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ರೈತರು; ಆಧಾರ್ ಕಾರ್ಡ್, ಪಹಣಿ ಪತ್ರಿಕೆ,ಆಧಾರ್‌ಗೆ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಪಾಸ್‌ಬುಕ್ ಪ್ರತಿ ಸಲ್ಲಿಸಬೇಕು.

ಈದಿನ.ಕಾಮ್‌ ಜೊತೆಗೆ ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ, “ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿದರೆ ಮಾತ್ರ ರೈತರ ಸಮಸ್ಯೆ ಬಗೆಹರಿಯುವುದಿಲ್ಲ. ಘೋಷಿತ ಬೆಲೆಗೆ ರೈತರ ಉತ್ಪನ್ನ ಖರೀದಿಸಲು ಸೂಕ್ತ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಬೇಕು. ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯ ಕುರಿತು ರೈತರಿಗೆ ಸಮರ್ಪಕ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಯಾವ ಬೆಳೆಗಳಿಗೆ ಎಷ್ಟು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ, ಎಲ್ಲಿ ಉತ್ಪನ್ನ ಮಾರಾಟ ಮಾಡಬೇಕು ಎಂಬ ಬಗ್ಗೆ ರೈತರಿಗೆ ಸ್ಪಷ್ಟ ಮಾಹಿತಿ ನೀಡಬೇಕು” ಎಂದರು.

ಸೂರ್ಯಕಾಂತಿ ಹಾಗೂ ಹೆಸರುಕಾಳು ಖರೀದಿ ಕುರಿತ ಮಾಹಿತಿಗಾಗಿ ಎಪಿಎಂಸಿ, ಬಾಗಲಕೋಟೆ ನಿರ್ದೇಶಕರು – 90353 53912 ಸಂಪರ್ಕಿಸಬಹುದು. ಸೋಯಾಬೀನ್ ಖರೀದಿ ಕುರಿತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಶಾಖಾ ವ್ಯವಸ್ಥಾಪಕರು – 94498 64458 ಇವರನ್ನು ಸಂಪರ್ಕಿಸಬಹುದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕವಲೆತ್ತು ನದಿ ಪಕ್ಕ ಮೆಟ್ಟಿಲು ನಿರ್ಮಿಸಲು ಡಿಸಿಗೆ ಗ್ರಾಮಸ್ಥರು ಮನವಿ

ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...