ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

Date:

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು ಒಗ್ಗೂಡಿಸಿ ಸಮ ಸಮಾಜ ನಿರ್ಮಾಣದ ಹೋರಾಟಕ್ಕೆ ರಾಜಕೀಯ ಶಕ್ತಿ ತುಂಬುವ ಉದ್ದೇಶದಿಂದ ಸತ್ಯಶೋಧಕ ಸಂಘದಿಂದ ನವೆಂಬರ್ 29ರಂದು ಬಾಗಲಕೋಟೆಯಲ್ಲಿ ‘ಬಸವ ಭೀಮ ಸಂಗಮ’ ಸಮಾವೇಶ ಆಯೋಜಿಸಲಾಗಿದೆ.

- Advertisement -

ಬಾಗಲಕೋಟೆಯ ನವನಗರದ ಕಲಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾವೇಶವನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಲಿದ್ದು, ಮಾಜಿ ಸಚಿವ ಎಸ್.ಆರ್. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸತ್ಯ ಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಮಾನತೆ, ಸ್ವಾಭಿಮಾನ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ವಿಚಾರಧಾರೆಗಳನ್ನು ಸಂಘಟಿತ ಸಾಮಾಜಿಕ ಮತ್ತು ರಾಜಕೀಯ ಶಕ್ತಿಯಾಗಿ ರೂಪಿಸುವುದು ಸಮಾವೇಶದ ಆಶಯವಾಗಿದೆ. ಈ ಚಿಂತನೆಗಳನ್ನು ಇಂದಿನ ಜೆನ್‌ಜಿ ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ವರ್ಷ ಕೂಡಲಸಂಗಮದಲ್ಲಿ ಆರಂಭವಾದ ಅಭಿಯಾನ ಜಿಲ್ಲೆಯ ಐದು ತಾಲೂಕುಗಳಲ್ಲಿ ನಡೆದಿದ್ದು, ಮುಂದಿನ ದಿನಗಳಲ್ಲಿ ಬೆಳಗಾವಿ, ಕಲಬುರಗಿ ಹಾಗೂ ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ ಬಿಜ್ಜಳನ ಸಾವಿನ ಕುರಿತು ರವಿ ಹಂಜ್ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಐತಿಹಾಸಿಕ ಅಧ್ಯಯನವಿಲ್ಲದೆ ಮಹನೀಯರ ಚಾರಿತ್ರ್ಯಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...

ದೊಡ್ಡಬಳ್ಳಾಪುರ | ಕೆವಿಎನ್ ಕನ್ನಡ ವ್ಯಾಕರಣದ ತೋರುದೀಪ’ದೊಡ್ಡಬಳ್ಳಾಪುರದಲ್ಲಿ ಚಿಂತನ -ಮಂಥನ

ಭಾಷೆ ಕಲಿಕೆಯಿಂದ ಬರುವಂಥದ್ದಲ್ಲ. ಹುಟ್ಟಿನಿಂದಲೇ ಬಂದಿರುವ ಸಾಮರ್ಥ್ಯ. ಇದನ್ನು ಯೂನಿವರ್ಸಲ್ ಗ್ರಾಮರ್...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...

ಹಾವೇರಿ | ಟನ್ ಕಬ್ಬಿಗೆ ₹3,225 ದರ ನಿಗದಿ: ಸಚಿವ ರುದ್ರಪ್ಪ ಲಮಾಣಿ

ಪ್ರತಿ ಟನ್ ಕಬ್ಬಿಗೆ ₹3,225 ದರ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು...