ಬಾಗಲಕೋಟೆ | ಕಾರು ಸ್ಫೋಟ ಪ್ರಕರಣ: ದುಡ್ಡು ವಾಪಸ್ ಕೇಳಿದ್ದಕ್ಕೆ ಕೊಲೆ ಸಂಚು!

Date:

ಬಾಗಲಕೋಟೆ ಜಿಲ್ಲೆ ಹಿಪ್ಪರಗಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಸಂಚು ರೂಪಿಸಿದ್ದಾರೆ ಎಂಬ ಸತ್ಯವನ್ನು ಪ್ರಾಥಮಿಕ ತನಿಖೆಯಲ್ಲಿ ಪತ್ತೆಹಚ್ಚಿದ್ದಾರೆ.

- Advertisement -

ಈ ಕುರಿತು ಮಾಹಿತಿ ನೀಡಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್, “ಕಾರು ಮಾಲೀಕ ಹನಮಂತ ಅಥಣಿ ಅವರು ನಾಲ್ಕು ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ನಿಂಗಪ್ಪ ಎಂಬುವವರಿಗೆ ₹40 ಲಕ್ಷ ಸಾಲ ನೀಡಿದ್ದರು. ಸಾಲವನ್ನು ಮರಳಿ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿಂಗಪ್ಪ ತಮ್ಮ 5 ಎಕರೆ 20 ಗುಂಟೆ ಜಮೀನನ್ನು ಹನಮಂತ ಅವರ ಹೆಸರಿಗೆ ನೋಂದಣಿ ಮಾಡಿಕೊಟ್ಟಿದ್ದರು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ನಿಂಗಪ್ಪನ ಸಹೋದರನ ಮಗ ಶಿವಾನಂದ ಮಧ್ಯಪ್ರವೇಶಿಸಿ, “ದೊಡ್ಡಪ್ಪನ ಜಮೀನು ತಮ್ಮ ಬಳಿಯೇ ಇರಲಿ, ಹನಮಂತ ಅವರಿಗೆ ಹಣವನ್ನು ಕಂತುಗಳಲ್ಲಿ ಪಾವತಿಸುವುದಾಗಿ ಕರಾರು ಮಾಡಿಕೊಂಡಿದ್ದ. ಅಸಲು ಮತ್ತು ಬಡ್ಡಿ ಸೇರಿ ಒಟ್ಟು ₹67 ಲಕ್ಷ ನೀಡುವುದಾಗಿ ಒಪ್ಪಿಕೊಂಡಿದ್ದ” ಎಂದು ಎಸ್ಪಿ ವಿವರಿಸಿದ್ದಾರೆ.

ಆದರೆ ಕಳೆದ ವರ್ಷ ಶಿವಾನಂದನಿಗೆ ಹಣ ಹೊಂದಿಸುವುದು ಕಷ್ಟವಾಗಿತ್ತು. ಈ ವೇಳೆ ಬಡ್ಡಿ ಹೆಚ್ಚಾಗಿದೆ ಎಂದು ಹನಮಂತ ಅವರೊಂದಿಗೆ ತಕರಾರು ತೆಗೆದುಕೊಂಡಿದ್ದಾನೆ. ಹಣದ ವಿಚಾರವೇ ನಂತರ ಹನಮಂತನನ್ನು ಕೊಲೆ ಮಾಡುವ ಸಂಚಿಗೆ ಕಾರಣವಾಗಿದ್ದು, ಆ ಉದ್ದೇಶದಿಂದಲೇ ಕಾರಿನಲ್ಲಿ ಸ್ಫೋಟ ನಡೆಸಲಾಗಿದೆ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಸಿದ್ದಾರ್ಥ್ ಗೋಯಲ್ ತಿಳಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಸ್ಫೋಟದ ಹಿಂದಿರುವ ಸಂಪೂರ್ಣ ಸಂಚು ಹಾಗೂ ಭಾಗಿಯಾಗಿರುವವರ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...