ಬಾಗಲಕೋಟೆ | ಅರ್ಹ ರೈತರು ಬೆಳೆ ವಿಮೆ ವಂಚಿತರಾಗದಂತೆ ಕ್ರಮಕ್ಕೆ ಸಿಇಒ ಸೂಚನೆ

Date:

ಬಾಗಲಕೋಟೆ ಜಿಲ್ಲೆಯ ಯಾವುದೇ ಅರ್ಹ ರೈತ ಬೆಳೆ ವಿಮೆ ಯೋಜನೆಯಿಂದ ವಂಚಿತರಾಗದಂತೆ ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಗಜಾನನ ಬಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಬೆಳೆ ವಿಮೆ ಯೋಜನೆ ಅನುಷ್ಠಾನ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಬೆಳೆ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿದ್ದು, ಬ್ಯಾಂಕ್‌ಗಳು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಅರ್ಹ ರೈತರು ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ರೈತರಿಗೆ ಬೆಳೆ ವಿಮೆಯ ಮಹತ್ವ, ನೋಂದಣಿ ವಿಧಾನ, ಕಂತು ಪಾವತಿ, ಅಂತಿಮ ದಿನಾಂಕ ಹಾಗೂ ಯೋಜನೆಯ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಬೇಕು. ಬೆಳೆ ಸಾಲ ಮಂಜೂರು ಮಾಡುವ ವೇಳೆ ಬ್ಯಾಂಕ್‌ಗಳು ನಿಯಮಾನುಸಾರ ವಿಮೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಜಿಲ್ಲೆಯಲ್ಲಿ ಶೇ.100ರಷ್ಟು ಅರ್ಹ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.

“ಬಿಡಿಸಿಸಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪಿಕೆಪಿಎಸ್) ಮೂಲಕ ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು. ಕಳೆದ ಹಂಗಾಮಿನಲ್ಲಿ 22 ಸಾವಿರಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದು, ಈ ಹಂಗಾಮಿನಲ್ಲಿ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಆಗುವಂತೆ ಬ್ಯಾಂಕ್‌ಗಳು ರೈತರ ಮನವೊಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ಹೆಸರು, ಸೋಯಾಬೀನ್, ಅವರೆ ಹಾಗೂ ಉದ್ದು ಬೆಳೆಗಳಿಗೆ ವಿಮೆ ಕಂತು ಪಾವತಿಸಲು ಜುಲೈ 15 ಕೊನೆಯ ದಿನವಾಗಿದೆ. ಅರಿಶಿಣ, ಸೂರ್ಯಕಾಂತಿ, ಸಜ್ಜೆ, ಜೋಳ, ತೊಗರಿ, ಶೇಂಗಾ, ಎಳ್ಳು (ಮಳೆ ಆಶ್ರಿತ), ಕೆಂಪು ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ, ಈರುಳ್ಳಿ (ನೀರಾವರಿ), ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ (ಮಳೆ ಆಶ್ರಿತ) ಬೆಳೆಗಳಿಗೆ ಆಗಸ್ಟ್ 14 ಕೊನೆಯ ದಿನವಾಗಿರುವುದಾಗಿ ಮಾಹಿತಿ ನೀಡಿದರು.

ಸಭೆಯಲ್ಲಿ ಬೆಳೆ ವಿಮೆ ಯೋಜನೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದನಗೌಡ ನೀಲಪ್ಪನವರ್, ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ ಹೂಗಾರ್, ಸಹಕಾರ ಇಲಾಖೆ ಉಪನಿಬಂಧಕ ದಾನಯ್ಯ ಹಿರೇಮಠ ಹಾಗೂ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...