ಬಾಗಲಕೋಟೆ | ಕಬ್ಬು ದರ ನಿಗದಿಗೆ ವೈಜ್ಞಾನಿಕ ಅಧ್ಯಯನ ನಡೆಸಿ: ರೈತ ಮುಖಂಡರ ಆಗ್ರಹ

Date:

ಪ್ರಸಕ್ತ ಸಾಲಿನ ಕಬ್ಬು ದರ ನಿಗದಿ, ಕಾರ್ಖಾನೆಗಳಿಂದ ರೈತರಿಗೆ ಪಾವತಿಸಬೇಕಿರುವ ಬಾಕಿ ಮೊತ್ತ ಹಾಗೂ ಕಬ್ಬು ಪೂರೈಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಎಂ. ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

- Advertisement -

ಬಾಗಲಕೋಟೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿ ಕುರಿತು ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ರೈತರ ಉತ್ಪಾದನಾ ವೆಚ್ಚವನ್ನು ಆಧಾರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಕಬ್ಬಿನ ದರ ನಿಗದಿಪಡಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

Advertisements

ರೈತ ಮುಖಂಡ ಸುಭಾಷ್‌ ಮಾತನಾಡಿ, “ಮಳೆ ಕೊರತೆಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಬ್ಬು ಸೇರಿದಂತೆ ಬೆಳೆಗಳು ಒಣಗುತ್ತಿವೆ. ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಪ್ರಸಕ್ತ ಹಂಗಾಮಿನ ಕಬ್ಬಿನ ದರವನ್ನು ರೈತರು ಮಾಡುತ್ತಿರುವ ವಾಸ್ತವಿಕ ಖರ್ಚಿನ ಆಧಾರದ ಮೇಲೆ ವೈಜ್ಞಾನಿಕವಾಗಿ ನಿಗದಿಪಡಿಸಬೇಕು” ಎಂದು ಒತ್ತಾಯಿಸಿದರು.

ಕಬ್ಬು ಬೆಳೆಯಲು ರೈತರು ಮಾಡುತ್ತಿರುವ ಖರ್ಚಿನ ಕುರಿತು ಕೃಷಿ ಇಲಾಖೆ, ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಾಗೂ ಸಂಬಂಧಿಸಿದ ಸಂಶೋಧನಾ ಮತ್ತು ಸರ್ಕಾರಿ ಇಲಾಖೆಗಳು ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಧ್ಯಯನದ ವರದಿಯನ್ನು ಕೇಂದ್ರ ಸರ್ಕಾರದ ಸಂಬಂಧಿತ ಸಂಸ್ಥೆಗೆ ಪರಿಗಣನೆಗಾಗಿ ಕಳುಹಿಸಬೇಕು. ದರ ನಿಗದಿ ಕುರಿತು ಸಕ್ಕರೆ ಸಚಿವರು ಹಾಗೂ ಆಯುಕ್ತರ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಎಂ. ಮಾತನಾಡಿ, “ರೈತರ ಬಾಕಿ ಮೊತ್ತವನ್ನು ಶೀಘ್ರ ಪಾವತಿಸಲು ಸಕ್ಕರೆ ಕಾರ್ಖಾನೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 2025-26ನೇ ಸಾಲಿಗೆ ಸಂಬಂಧಿಸಿದಂತೆ ಜಮಖಂಡಿ ಶುಗರ್ಸ್‌ನಿಂದ ₹81 ಲಕ್ಷ ಬಾಕಿ ಇರುವುದಾಗಿ ತಿಳಿಸಿ, ಪ್ರತಿ ಮೆಟ್ರಿಕ್ ಟನ್‌ಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ಶೀಘ್ರ ಪಾವತಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಖಾನೆಗಳ ಪ್ರತಿನಿಧಿಗಳು, ಸೆ.15ರೊಳಗೆ ಬಾಕಿ ಪಾವತಿಸುವುದಾಗಿ ಭರವಸೆ ನೀಡಿದರು. ಐದು ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ಸೆ.20ರೊಳಗೆ ಪಾವತಿಸುವುದಾಗಿ ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.

ಸಭೆಯಲ್ಲಿ ಕಬ್ಬು ಬೆಳೆಗಾರರ ಮುಖಂಡರು, “ಮೊದಲ ಕಂತಿನಲ್ಲಿ ಪ್ರತಿ ಟನ್‌ಗೆ ₹3,300 ನಿಗದಿಪಡಿಸಿದರೆ, ಎರಡನೇ ಕಂತಾಗಿ ₹300 ಪಾವತಿಸಬೇಕು ಎಂದು ಆಗ್ರಹಿಸಿದರು. ಕಾರ್ಖಾನೆಗಳ ಪ್ರತಿನಿಧಿಗಳು, ಮೊದಲ ಕಂತಿನಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ ₹3,200 ಪಾವತಿಸಲಾಗಿದೆ. ಎರಡನೇ ಕಂತಿನಲ್ಲಿ ಸರ್ಕಾರದಿಂದ ₹50 ಹಾಗೂ ಕಾರ್ಖಾನೆಯಿಂದ ₹50 ಸೇರಿ ಒಟ್ಟು ₹100 ಪಾವತಿಸಲಾಗಿದೆ. ರೈತರು ಒತ್ತಾಯಿಸಿರುವ ₹300 ಎರಡನೇ ಕಂತಿನ ಬೇಡಿಕೆಯನ್ನು ಆಡಳಿತ ಮಂಡಳಿಯ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.

ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕ ಸಿ.ಬಿ. ಪಾಟೀಲ ಅವರು ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಮಾನದಂಡಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಜಿಪಂ ಸಿಇಒ ಗಜಾನನ ಬಾಲೆ, ಎಸ್‌ಪಿ ಸಿದ್ದಾರ್ಥ ಗೋಯಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....