ಬಾಗಲಕೋಟೆ | ಕಾಂಗ್ರೆಸ್‌ ಅಭ್ಯರ್ಥಿ ಗೆಲುವು : ಕಾರ್ಯಕರ್ತರಿಂದ ಸಂಭ್ರಮಾಚರಣೆ

Date:

ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಇಡೀ ರಾಜ್ಯದ ಗಮನ ಸೆಳೆದಿದ್ದ ಉತ್ತರ ಕರ್ನಾಟಕದ ಹೈವೋಲ್ಟೇಜ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

- Advertisement -

ತೋಟಗಾರಿಕೆ ವಿವಿಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ಮತ ಎಣಿಕೆಯ ಮೊದಲ ಸುತ್ತಿನಿಂದಲೇ ಉಮೇಶ್ ಮೇಟಿ ಮುನ್ನಡೆ ಕಾಯ್ದುಕೊಂಡಿದ್ದರು. 11ನೇ ಸುತ್ತಿನ ಎಣಿಕೆ ಮುಕ್ತಾಯದ ವೇಳೆಗೆ ಸುಮಾರು 9,969 ಮತಗಳ ಭಾರಿ ಅಂತರವನ್ನು ಸಾಧಿಸಿದ್ದರು. ಅಂತಿಮವಾಗಿ 22ನೇ ಸುತ್ತಿನ ಅಂತ್ಯಕ್ಕೆ 19944 ಅಂತರ ಮತ್ತಷ್ಟು ಹೆಚ್ಚಾಗಿದ್ದು, ಕೊನೆಯ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೇಸ್ ಪಡೆದ ಒಟ್ಟು 97941 ಮತಗಳು, ಬಿಜೆಪಿ ಪಡೆದ 76075 ಮತಗಳ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಿಜೆಪಿಯ ಹಿರಿಯ ನಾಯಕ ವೀರಣ್ಣ ಚರಂತಿಮಠ ತಂತ್ರಗಾರಿಕೆಯನ್ನು ಮೆಟ್ಟಿ ನಿಂತು ಮೇಟಿ ಪುತ್ರ ಈಗ ಬಾಗಲಕೋಟೆಯ ನೂತನ ಶಾಸಕರಾಗಿ ಹೊರಹೊಮ್ಮಿದ್ದಾರೆ. ತಂದೆ ದಿ. ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನವನ್ನು ಈಗ ಅವರ ಪುತ್ರ ಭದ್ರಪಡಿಸಿಕೊಂಡಿದ್ದಾರೆ.  ಮಾಜಿ ಶಾಸಕ ಹೆಚ್.ವೈ. ಮೇಟಿ ಅವರ ಮೇಲಿದ್ದ ಅನುಕಂಪ ಕಾಂಗ್ರೆಸ್‌ಗೆ ವರದಾನವಾಗಿದೆ. ಹಾಗೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸತತ ಪ್ರಚಾರ ಕೈ ಹಿಡಿದಿದೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಸತತವಾಗಿ ಹಿನ್ನಡೆ ಅನುಭವಿಸುವ ಮೂಲಕ ಬಿಜೆಪಿಗೆ ಆಘಾತ ನೀಡಿದ್ದಾರೆ.

“ಒಟ್ಟಿನಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಈ ಫಲಿತಾಂಶದೊಂದಿಗೆ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ತನ್ನ ಹಿಡಿತವನ್ನು ಮತ್ತಷ್ಟು ಭದ್ರಪಡಿಸಿಕೊಂಡಂತಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...

ಬಾಗಲಕೋಟೆ | ಬೆಳೆ ವಿಮೆ ಪರಿಹಾರದಲ್ಲಿ ವಿಳಂಬ ಬೇಡ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಅರ್ಹ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೊರೆಯಬೇಕಾದ...