ಬಾಗಲಕೋಟೆ | ಕಬ್ಬು ಬೆಳೆಗಾರರ ಸಭೆ ವಿವಾದ: ರೂ.25 ಲಕ್ಷ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಶಾಸಕ ಟಿ ಪಾಟೀಲ

Date:

ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಮಾತನಾಡಿಲ್ಲ ಎಂದು ಆರೋಪಿಸಿ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಅಪಪ್ರಚಾರ ಮಾಡಿರುವ ಬೀಳಗಿ ಕ್ಷೇತ್ರದ ರೈತ ಸಂಘದ ಧುರೀಣನ ವಿರುದ್ಧ ₹25 ಲಕ್ಷ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಾಸಕ, ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಟಿ. ಪಾಟೀಲ ಎಚ್ಚರಿಕೆ ನೀಡಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಕಬ್ಬಿಗೆ ಲಾಭದಾಯಕ ಬೆಲೆ ನಿಗದಿ ಹಾಗೂ ರೈತರ ವಿವಿಧ ಬೇಡಿಕೆಗಳ ಕುರಿತು ಪ್ರಸ್ತಾಪಿಸಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

“ಕಬ್ಬು ತೂಕ ಮಾಡುವ ಸಂದರ್ಭದಲ್ಲಿ ರೈತರಿಗೆ ಆಗುತ್ತಿರುವ ವಂಚನೆಯನ್ನು ತಡೆಯಲು ಸಕ್ಕರೆ ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಡಿಜಿಟಲ್ ತೂಕ ಮಾಪನ ವ್ಯವಸ್ಥೆ ಅಳವಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದೇನೆ. ಕಬ್ಬು ಸಾಗಣೆ ಸಂದರ್ಭದಲ್ಲಿ ಲಾಗಾಣಿ ಹೆಸರಿನಲ್ಲಿ ರೈತರಿಂದ ಹಣ ಕಡಿತ ಮಾಡುತ್ತಿರುವುದರಿಂದ ಅವರಿಗೆ ಆರ್ಥಿಕ ನಷ್ಟವಾಗುತ್ತಿದೆ. ಈ ಸಮಸ್ಯೆಯ ಬಗ್ಗೆಯೂ ಗಮನಹರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

ಸಭೆಯಲ್ಲಿ ಯಾವುದೇ ವಿಷಯ ಪ್ರಸ್ತಾಪಿಸಿಲ್ಲ ಎಂಬ ಆರೋಪವನ್ನು ದಾಖಲೆಗಳೊಂದಿಗೆ ಸಾಬೀತುಪಡಿಸಲಿ. ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಟಿ. ಪಾಟೀಲ ಸವಾಲು ಹಾಕಿದರು.

ಮುಖ್ಯಮಂತ್ರಿಗಳ ಪಕ್ಕದಲ್ಲಿ ಕುಳಿತು ಫೋಟೋ ತೆಗೆಸಿಕೊಳ್ಳುವುದಕ್ಕಷ್ಟೇ ಸಭೆಗೆ ಹೋಗಿದ್ದೇನೆ ಎಂಬ ಅರ್ಥದಲ್ಲಿ ಅನುಚಿತ ಹಾಗೂ ಅಸಂಸದೀಯ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಆರೋಪ ಮಾಡಲಾಗಿದೆ. ಇದು ತಮ್ಮ ಘನತೆ ಮತ್ತು ಗೌರವಕ್ಕೆ ಧಕ್ಕೆ ತಂದಿದ್ದು, ಈ ಹಿನ್ನೆಲೆಯಲ್ಲಿ ₹25 ಲಕ್ಷ ಮಾನನಷ್ಟ ಮೊಕದ್ದಮೆ ದಾಖಲಿಸುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಸಭೆಯಲ್ಲಿ ತಮ್ಮ ಧ್ವನಿ ಎತ್ತಿದ್ದರೂ, ಅದನ್ನು ಮರೆಮಾಚಿ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕನ್ನಡದ ಅಸ್ಮಿತೆ, ಸಂಸ್ಕೃತಿ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ: ಪ್ರೊ. ವಿಜಯಾ ಕೋರಿಶೆಟ್ಟಿ

ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ...

ದೊಡ್ಡಬಳ್ಳಾಪುರ |ಧರ್ಮಸ್ಥಳದ ಶ್ರೀಮುಡಿ ಭವನದದಲ್ಲಿ ದಲಿತ ಮುಖಂಡ ಗುರುರಾಜಪ್ಪ ರವರ ಶವ ಪತ್ತೆ !

ದಲಿತರ ಮುಖಂಡ, ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ಸಿ.ಗುರುರಾಜಪ್ಪ...

ಗಗನಯಾತ್ರಿಗಳ ರಕ್ಷಣೆಗೆ ಗೂಗಲ್-ನಾಸಾ ‘ರೋಬೊ ವೈದ್ಯ’: ಮಂಗಳ ಯಾನಕ್ಕೆ ‘ಎಐ’ ನೆರವು

ಭವಿಷ್ಯದ ಆಳ ಬಾಹ್ಯಾಕಾಶ ಮತ್ತು ಮಂಗಳ ಗ್ರಹದ ಸುದೀರ್ಘ ಯಾನಗಳಲ್ಲಿ ಗಗನಯಾತ್ರಿಗಳಿಗೆ...