ಬಾಗಲಕೋಟೆ | 60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಅನುದಾನ ಬಳಕೆ

Date:

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಿಎಸ್‌ಆರ್ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ 60 ಶಾಲೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶಾಲೆಗಳ ಅಭಿವೃದ್ಧಿ ಕುರಿತು ಕೈಗಾರಿಕಾ ಉದ್ಯಮಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕೈಗಾರಿಕೆಗಳು, ಉದ್ಯಮಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವ ಪಡೆಯಲು ಸಿಎಸ್‌ಆರ್ ಯೋಜನೆಯಡಿ ಅವಕಾಶವಿದೆ. ಜಿಲ್ಲೆಯ ಆಯ್ಕೆಯಾದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಶಾಲೆಗಳಲ್ಲಿ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ, ಸುಸಜ್ಜಿತ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಶಿಕ್ಷಣ ಸೌಲಭ್ಯ, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯ, ಗ್ರಂಥಾಲಯ, ಆಟದ ಮೈದಾನ, ಕಾಂಪೌಂಡ್ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಕೈಗಾರಿಕೆಗಳು ಹಾಗೂ ವಿವಿಧ ಸಂಸ್ಥೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಬಹುದಾಗಿದೆ” ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಮಾತನಾಡಿ, “ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ಶಾಲೆಯಿಂದ ಹೊರಗುಳಿಯುವ ಮಕ್ಕಳ ಪ್ರಮಾಣ ಕಡಿಮೆ ಮಾಡುವುದು ಹಾಗೂ ಸರ್ಕಾರಿ ಶಾಲೆಗಳ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವುದು ಯೋಜನೆಯ ಪ್ರಮುಖ ಉದ್ದೇಶ” ಎಂದರು.

“ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇಂತಹ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಿದರೆ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಉತ್ತಮ ಮಾದರಿ ರೂಪಿಸಲು ಜಿಲ್ಲೆಯ ಎಲ್ಲಾ ಕೈಗಾರಿಕೆಗಳು ಹಾಗೂ ಉದ್ಯಮಿಗಳು ಸಕ್ರಿಯವಾಗಿ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಜಿತ್ ಮನ್ನಿಕೇರಿ ಮಾತನಾಡಿ, “1ರಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯುವಂತೆ ಮಾಡುವ ಉದ್ದೇಶ ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 60 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿಪಡಿಸಲು ಆದೇಶಿಸಲಾಗಿದೆ” ಎಂದರು.

ತಾಲ್ಲೂಕುವಾರು ಶಾಲೆಗಳ ವಿವರ ಹೀಗಿದೆ: ಬಾದಾಮಿ 11, ಬಾಗಲಕೋಟೆ 9, ಬೀಳಗಿ 6, ಹುನಗುಂದ 14, ಜಮಖಂಡಿ 13 ಹಾಗೂ ಮುಧೋಳ 7 ಶಾಲೆಗಳು ಅಭಿವೃದ್ಧಿಗೆ ಆಯ್ಕೆಯಾಗಿವೆ ಎಂದು ಮಾಹಿತಿ ನೀಡಿದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಿಕ್ಷಣ ಇಲಾಖೆ ಉಪಸಮನ್ವಯಾಧಿಕಾರಿ ಪ್ರಮೋದಿನಿ ಸೇರಿದಂತೆ ಅಧಿಕಾರಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...