ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Date:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ನೇತೃತ್ವದಲ್ಲಿ ಶುಕ್ರವಾರ ಬಾಗಲಕೋಟೆ ಜಿಲ್ಲಾ ಆಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಸಮಿತಿಯ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ನಡೆದ ಧರಣಿಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡು, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಗಳು ಹಾಗೂ ಆಡಳಿತಾತ್ಮಕ ಲೋಪದೋಷಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ನಮೂನೆ-6ರ ಜೊತೆಗೆ ಘೋಷಣಾ ಪತ್ರಕ್ಕೆ ಸಹಿ ಪಡೆಯುವ ಕ್ರಮವೂ ಮತದಾರರ ಹಕ್ಕುಗಳ ಮೇಲೆ ಪರಿಣಾಮ ಬೀರಬಹುದು ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಮಾತನಾಡಿ, “ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇತರ ಇಬ್ಬರು ಚುನಾವಣಾ ಆಯುಕ್ತರೊಂದಿಗೆ ಸಮರ್ಪಕ ಸಮಾಲೋಚನೆ ನಡೆಸದೆ, ಏಕಪಕ್ಷೀಯವಾಗಿ ಕೈಗೊಂಡಿದ್ದಾರೆಂಬ ವರದಿಗಳು ಹೊರಬಂದಿವೆ. ಈ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ಚುನಾವಣಾ ಆಯೋಗದ ನಿರ್ಧಾರಗಳ ಕಾನೂನುಬದ್ಧತೆಯನ್ನು ಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಮತದಾರರ ಗುರುತಿನ ಚೀಟಿ ನೀಡುವ ಹಾಗೂ ರದ್ದುಪಡಿಸುವ ಪ್ರಕ್ರಿಯೆಗಳು ಸಂಬಂಧಿತ ಕಾನೂನು ಮತ್ತು ನಿಯಮಗಳ ಪ್ರಕಾರವೇ ನಡೆಯಬೇಕು. ಮತದಾರರಲ್ಲಿ ಉಂಟಾಗಿರುವ ಆತಂಕವನ್ನು ನಿವಾರಿಸಲು ಚುನಾವಣಾ ಆಯೋಗ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮುಖಂಡ ಬಸವರಾಜ ದೊಡ್ಡಮನಿ ಮಾತನಾಡಿ, “ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಹಾಗೂ ನ್ಯಾಯಾಲಯದ ವಿಚಾರಣೆಗಳ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯ ಕಾನೂನುಬದ್ಧತೆ ಮತ್ತು ಮತದಾರರ ಹಕ್ಕುಗಳ ರಕ್ಷಣೆಯ ಕುರಿತು ಸ್ಪಷ್ಟತೆ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

  • ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
  • ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಿ, ಕಾನೂನುಬದ್ಧ ಆಧಾರಗಳಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
    ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ ಮುಂಬರುವ ಚುನಾವಣೆಗಳನ್ನು ತಡೆಹಿಡಿಯಬೇಕು.
    2023ರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯನ್ನು ರದ್ದುಗೊಳಿಸಿ, ಸ್ವತಂತ್ರ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಆಯ್ಕೆ ಪ್ರಕ್ರಿಯೆಯನ್ನು ರೂಪಿಸಬೇಕು.

ಪ್ರತಿಭಟನೆಯಲ್ಲಿ ರಮೇಶ ಅನಗವಾಡಿ, ಹೆಚ್.ಎನ್. ನೀಲನಾಯ್ಕ, ಅಬ್ದುಲಹಮೀದ್ ಮಲಬಾರಿ, ದೀಪಕ್ ಕಂಕನವಾಡಿ,ಹುಲ್ಲಪ್ಪ ಅಂಟರಠಾಣಾ, ಮುತ್ತು ಅಶೋಕ ಸಿಂಗೆ, ಶಾಮರಾವ್ ಮಾದರ ಸೇರಿದಂತೆ ಸಮಿತಿಯ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ ಬೆಳಗಿದ ರೋಚಕ ಕತೆ ಗೊತ್ತೇ?

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ...

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...