ಬಾಗಲಕೋಟೆ | ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟದ ವಿರುದ್ಧ ಕಠಿಣ ಕ್ರಮಕ್ಕೆ ಡಿಸಿ ಸೂಚನೆ

Date:

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಿಂದ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ, ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.

- Advertisement -

ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಗಣೇಶೋತ್ಸವ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಕಾಳಜಿ ಮೆರೆಯಬೇಕು” ಎಂದು ಮನವಿ ಮಾಡಿದರು.

ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

“ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ನದಿ, ಕೆರೆ ಸೇರಿದಂತೆ ಜಲಮೂಲಗಳು ಕಲುಷಿತವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕವಾಗಿ ನಡೆಯುವ ಗಣೇಶೋತ್ಸವದ ಚಪ್ಪರ ಹಾಗೂ ಅಲಂಕಾರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಅವಕಾಶ ನೀಡಬಾರದು” ಎಂದು ಸೂಚನೆ ನೀಡಿದರು.

ಬಾಗಲಕೋಟೆಯ ಆಯ್ದ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಂಚಾರಿ ವಿಸರ್ಜನಾ ತೊಟ್ಟಿ ವ್ಯವಸ್ಥೆ ಕಲ್ಪಿಸಬೇಕು. ಗಣೇಶೋತ್ಸವ ಮಂಡಳಿಗಳು ಸಂಬಂಧಿಸಿದ ಇಲಾಖೆಯಿಂದ ಅಗತ್ಯ ಅನುಮತಿ ಪಡೆದು ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...