ಬಾಗಲಕೋಟೆ | ವಾಲ್ಮೀಕಿ ನಿಗಮ ಹಗರಣ; ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹ

Date:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮೂರನೇ ದಿನವೂ ಮುಂದುವರಿಯಿತು.

- Advertisement -

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ಪಾತ್ರದ ಕುರಿತು ಸೂಕ್ತ ತನಿಖೆ ನಡೆಸಬೇಕು. ನಿಗಮದ ಹಣ ದುರ್ಬಳಕೆಯಿಂದ ನೊಂದಿರುವ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಡವರು ಮತ್ತು ಪರಿಶಿಷ್ಟ ಪಂಗಡದ ಜನರ ಹಿತಾಸಕ್ತಿಗೆ ಸರ್ಕಾರ ಆದ್ಯತೆ ನೀಡಬೇಕು. ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆಯ ಮೂಲಕ ಸತ್ಯಾಂಶವನ್ನು ಹೊರತರಬೇಕು ಎಂದು ಒತ್ತಾಯಿಸಿದರು.

ನ್ಯಾಯ ದೊರೆಯುವವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಮೂರನೇ ದಿನವೂ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಯಿತು.

ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮೂಲಸೌಕರ್ಯಕ್ಕಾಗಿ ಪಾಲಿಕೆ ಎದುರು ಸ್ಲಂ ನಿವಾಸಿಗಳ ಪ್ರತಿಭಟನೆ

ನಗರದ ವಾರ್ಡ್ ನಂ. 2ರ ರಾಮನಗರ ಭಾಗ-2ರಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯ,...

ಗದಗ | ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಸಂತ ಕನಕದಾಸರ ಜಯಂತಿಯನ್ನು ನವಂಬರ್ 27 ರಂದು ನಗರದ ಹಾತ್ತಲಗೇರಿ ನಾಕಾದ...

ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ವಿವಾಹಿತ ಮಹಿಳೆಯೊಬ್ಬರ ಮನೆಗೆ ತಡರಾತ್ರಿ ನುಗ್ಗಿ ಚಾಕು ತೋರಿಸಿ ಜೀವ ಬೆದರಿಕೆ...

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...