ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 2026-27ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್‌ನ 11 ಉಳಿಕೆ ಸೀಟುಗಳ ಭರ್ತಿಗೆ ನವೆಂಬರ್ 14ರಂದು ವಾಕ್-ಇನ್ ಪ್ರವೇಶ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.
ಕೆಇಎ ಮೂಲಕ ನಡೆದ ಎಲ್ಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. 2026ನೇ ಸಾಲಿನಲ್ಲಿ ಕೆಇಎಯಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ನವೆಂಬರ್ 14ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳಬೇಕು. ನಂತರ ಮಧ್ಯಾಹ್ನ 5 ಗಂಟೆಯವರೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯ ಆಡಳಿತ ಕಚೇರಿಯ ಕೊಠಡಿ ಸಂಖ್ಯೆ 118ರಲ್ಲಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಂಕಪಟ್ಟಿಗಳ ಮೂಲಪ್ರತಿ, ಕೆಇಎ ಪರಿಶೀಲನಾ ದಾಖಲೆ, ರ‍್ಯಾಂಕ್ ಹಾಗೂ ನೋಂದಣಿ ಸ್ಲಿಪ್, ಆಧಾರ್ ಕಾರ್ಡ್ ಮೂಲಪ್ರತಿ, ಪಾಸ್‌ಪೋರ್ಟ್ ಅಳತೆಯ ನಾಲ್ಕು ಭಾವಚಿತ್ರಗಳು ಮತ್ತು ವರ್ಗಾವಣೆ ಪ್ರಮಾಣಪತ್ರ (ಟಿಸಿ) ತರಬೇಕು.ಹೆಚ್ಚಿನ ಮಾಹಿತಿಗಾಗಿ 9986246229, 7760671295 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ವಿಶೇಷಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




