ಬಾಗಲಕೋಟೆ | ಕುರಿ ಉಣ್ಣೆ ಸಹಕಾರ ಸಂಘಗಳ ಬಲವರ್ಧನೆಗೆ ಜಿಲ್ಲಾ ಒಕ್ಕೂಟ ರಚನೆ

Date:

ಬಾಗಲಕೋಟೆ ಜಿಲ್ಲೆಯ ಕುರಿ ಸಂಗೋಪನೆದಾರರು ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಒಕ್ಕೂಟ ರಚಿಸಲು ನಿರ್ಧರಿಸಲಾಗಿದೆ.

- Advertisement -

ಬಾಗಲಕೋಟೆ ನವನಗರದಲ್ಲಿ ನಡೆದ ಜಿಲ್ಲೆಯ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಜಿಲ್ಲೆಯ ಎಲ್ಲಾ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳನ್ನು ಒಳಗೊಂಡಂತೆ ‘ಜಿಲ್ಲಾ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಬಾಗಲಕೋಟೆ’ ರಚಿಸಲು ಸಭೆ ತೀರ್ಮಾನಿಸಿತು. ಕುರಿ ಸಂಗೋಪನೆದಾರರು ಹಾಗೂ ಉಣ್ಣೆ ಉತ್ಪಾದಕರ ಅಭಿವೃದ್ಧಿ, ಸಹಕಾರ ಸಂಘಗಳ ಬಲವರ್ಧನೆ, ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) ಮೂಲಕ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಲು ಸಭೆ ನಿರ್ಧರಿಸಿತು. ಈ ಕುರಿತು ಮುಂದಿನ ಹೋರಾಟದ ರೂಪುರೇಷೆ ಹಾಗೂ ಕಾರ್ಯಯೋಜನೆ ಸಿದ್ಧಪಡಿಸಲು ಆ.25ರಂದು ಮತ್ತೊಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಪಿಕೆಪಿಎಸ್‌ ಸಹಕಾರ ಸಂಘಗಳು ನೋಂದಣಿಯಾದ ಕೆಲವೇ ದಿನಗಳಲ್ಲಿ ‘ಬಿ’ ಕ್ಲಾಸ್‌ ಶೇರು ನೀಡುವ ವ್ಯವಸ್ಥೆ ಇರುವಂತೆ, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೂ ಶೇರು ನೀಡುವ ಅವಧಿಯನ್ನು ಕಡಿತಗೊಳಿಸಿ ಶೀಘ್ರವಾಗಿ ಶೇರು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.

ಆ.25ರಂದು ಬೆಳಿಗ್ಗೆ 10 ಗಂಟೆಗೆ ಬಾಗಲಕೋಟೆ ನವನಗರದ ಸೆಕ್ಟರ್‌ ನಂ.35ರ ಪೊಲೀಸ್‌ ಪ್ಯಾಲೇಸ್‌ ಸಮೀಪದ ಕೆನರಾ ಬ್ಯಾಂಕ್‌ ಬಳಿ ಇರುವ ಓಂ ಸಾಯಿ ಈವೆಂಟ್ಸ್‌ನಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಎಲ್ಲ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಂಘದ ಸಿಕ್ಕಾ–ಸೀಲು ಸಹಿತ ಕಡ್ಡಾಯವಾಗಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಸಂಘಗಳ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಸಲಹೆಗಳನ್ನು ಸಭೆಯಲ್ಲಿ ಮಂಡಿಸುವ ಮೂಲಕ ಜಿಲ್ಲೆಯ ಕುರಿ ಸಂಗೋಪನೆದಾರರು ಮತ್ತು ಉಣ್ಣೆ ಉತ್ಪಾದಕರ ಹಿತಕ್ಕಾಗಿ ಮುಂದಿನ ಹೋರಾಟ ಹಾಗೂ ಕಾರ್ಯಯೋಜನೆ ರೂಪಿಸಲು ಸಹಕರಿಸುವಂತೆ ರೈತ ಯುವ ಹೋರಾಟಗಾರ ಯಲ್ಲಪ್ಪ ಹೆಗಡೆ,ಮಹಾಲಿಂಗ ಮಾಯನ್ನವರ ಹಾಗೂ ಸಂಜು ಹಡಕರ ತಿಳಿಸಿದ್ದಾರೆ.

ಸಭೆಯಲ್ಲಿ ವೀರಣ್ಣ ಹಳೆಗೌಡರ, ಮಹೇಶ ಬೆಂಕಿ, ಕೃಷ್ಣ ಕರಡಿಗುಡ್ಡ, ಕೃಷ್ಣ ಜಟ್ಟನ್ನವರ, ರಮೇಶ ಹೀರಕನ್ನವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...