ಬಾಗಲಕೋಟೆ | ಶ್ರಮಿಕ ಭೋವಿಗರಿಗೆ ಕಿರುಕುಳ ನೀಡದಿರಿ: ಅಧಿಕಾರಿಗಳಿಗೆ ರಾಮಪ್ಪ ಎಂ ಸೂಚನೆ

Date:

ಕುಲಕಸುಬಾಗಿ ತಲೆತಲಾಂತರಗಳಿಂದ ಕೈಯಿಂದ ಕಲ್ಲು ಒಡೆಯುವ ಮೂಲಕ ಜೀವನ ನಡೆಸುತ್ತಿರುವ ಶ್ರಮಿಕ ಭೋವಿ ಸಮುದಾಯದವರಿಗೆ ಪೊಲೀಸ್, ಅರಣ್ಯ ಹಾಗೂ ಗಣಿಗಾರಿಕೆ ಇಲಾಖೆಯ ಅಧಿಕಾರಿಗಳು ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಬಾಗಲಕೋಟೆ ನಗರದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಮುದಾಯದ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭೋವಿ ಸಮುದಾಯದ ಅನೇಕ ಕುಟುಂಬಗಳು ತಲೆತಲಾಂತರಗಳಿಂದ ಕಲ್ಲು ಒಡೆಯುವ ವೃತ್ತಿಯನ್ನೇ ಅವಲಂಬಿಸಿಕೊಂಡು ಜೀವನ ನಡೆಸುತ್ತಿವೆ. ಅವರಿಗೆ ಬೇರೆ ಉದ್ಯೋಗದ ಕೌಶಲ್ಯ ಅಥವಾ ಪರ್ಯಾಯ ಆದಾಯದ ಮೂಲಗಳಿಲ್ಲ. ಹೀಗಾಗಿ, ನಿಯಮಾನುಸಾರ ಅವರಿಗೆ ಕಲ್ಲು ಒಡೆಯಲು ಅಗತ್ಯವಿರುವ ಅನುಮತಿ ದೊರಕಿಸಿಕೊಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಸಭೆಯಲ್ಲಿ ಕೆರೂರಿನ ಸಂಜಯ ಪ್ರಭಾಕರ ಮಾತನಾಡಿ, ಭೋವಿ ಸಮುದಾಯದ ಬಹುತೇಕ ಜನರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಕಲ್ಲು ತೆಗೆಯುವುದು ಹಾಗೂ ಒಡೆಯುವುದೇ ಅವರ ಮೂಲ ಕಸುಬಾಗಿದೆ. ಆದರೆ, ಕಲ್ಲು ಒಡೆಯಲು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ತೊಂದರೆ ನೀಡಲಾಗುತ್ತಿದೆ. ಇದರಿಂದ ಸಮುದಾಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಗುಳೇದಗುಡ್ಡದ ಬಸವರಾಜ ಮಾತನಾಡಿ, ಕೈಯಿಂದ ಕಲ್ಲು ಒಡೆಯಲು ಅವಕಾಶ ನೀಡುತ್ತಿಲ್ಲ. ಅರಣ್ಯ ಇಲಾಖೆಯವರು ಅನಗತ್ಯವಾಗಿ ತೊಂದರೆ ನೀಡುತ್ತಿದ್ದಾರೆ. ಬ್ಲಾಸ್ಟಿಂಗ್ ಮಾಡುವವರಿಗೆ ಹಾಗೂ ಯಂತ್ರಗಳ ಮೂಲಕ ಕಲ್ಲು ತೆಗೆಯುವವರಿಗೆ ಅನುಮತಿ ನೀಡುವ ಬದಲು, ತಲೆತಲಾಂತರಗಳಿಂದ ಕೈಯಿಂದ ಕಲ್ಲು ಒಡೆಯುವ ಭೋವಿ ಸಮುದಾಯದವರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅಶೋಕ ಲಿಂಬಾವಳಿ ಮಾತನಾಡಿ, “ಹಲವು ವರ್ಷಗಳಿಂದ ಕಲ್ಲು ಒಡೆಯುವ ಸಮುದಾಯದವರಿಗೆ ತೊಂದರೆ ನೀಡಲಾಗುತ್ತಿದೆ. ಅನುಮತಿ ನೀಡುವುದಾಗಿ ಹೇಳಲಾಗುತ್ತಿದೆ. ಆದರೆ, ಅನುಮತಿ ಯಾವಾಗ ದೊರೆಯುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

ವೆಂಕಟೇಶ ಮಾತನಾಡಿ, “ಅನಧಿಕೃತವಾಗಿ ಸಂಚರಿಸುವ ಸಾವಿರಾರು ವಾಹನಗಳ ವಿರುದ್ಧ ಕ್ರಮಕೈಗೊಳ್ಳದೆ, ನಾವು ಕಲ್ಲು ತೆಗೆದುಕೊಂಡು ಸಾಗಿಸಿದರೆ ₹25 ಸಾವಿರ ದಂಡ ವಿಧಿಸಲಾಗುತ್ತಿದೆ. ಕೆಲ ಸಂದರ್ಭಗಳಲ್ಲಿ ₹10 ಸಾವಿರ ಪಡೆದು ವಾಹನಗಳನ್ನು ಬಿಡಲಾಗುತ್ತಿದೆ. ಗಣಿಗಾರಿಕೆ ಇಲಾಖೆಯ ಅಧಿಕಾರಿಗಳ ಕಿರುಕುಳವನ್ನು ತಪ್ಪಿಸಬೇಕು” ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, “75 ವರ್ಷಗಳಿಂದ ಕಲ್ಲು ಒಡೆಯುವ ವೃತ್ತಿಯನ್ನು ಮಾಡಿಕೊಂಡು ಬಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದರೆ, ನಿಯಮಾನುಸಾರ ಪರಿಶೀಲಿಸಿ ಅನುಮತಿ ನೀಡಲಾಗುವುದು” ಎಂದು ತಿಳಿಸಿದರು.

“ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ಟಪ್ಟಿಲ್ ಅಹೀರೆ ಮಾತನಾಡಿ, ಕೆಲವು ಪ್ರದೇಶಗಳಲ್ಲಿ ಕಲ್ಲು ಒಡೆಯುವವರಿಗೆ ಅನುಕೂಲ ಮಾಡಿಕೊಡಲಾಗಿದೆ. ಉಳಿದ ಪ್ರದೇಶಗಳನ್ನೂ ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ವೈ.ಎಸ್. ಬಂಡಿವಡ್ಡರ ಮಾತನಾಡಿ, “ಕಲ್ಲು ಒಡೆಯಲು ಅನುಮತಿ ನೀಡುವುದಾಗಿ ಅಧಿಕಾರಿಗಳು ಸುಳ್ಳು ಭರವಸೆ ನೀಡುತ್ತಿದ್ದಾರೆ. ಕಲ್ಲು ಒಡೆಯಲು ಅವಕಾಶ ದೊರೆಯದ ಕಾರಣ ಸಮುದಾಯದ ಅನೇಕ ಕುಟುಂಬಗಳು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

ಭೋವಿ ಸಮುದಾಯಕ್ಕೆ ಸಂಬಂಧಿಸದವರು ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವುದರಿಂದ ನೈಜ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ಸುಳ್ಳು ಜಾತಿ ಪ್ರಮಾಣಪತ್ರ ನೀಡುವುದನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ಸಭೆಯಲ್ಲಿ ಸಮುದಾಯದ ಮುಖಂಡರು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ, “ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಕುರಿತು ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳಿದ್ದರೆ ಅಧಿಕಾರಿಗಳಿಗೆ ಸಲ್ಲಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಜಾತಿ ಪ್ರಮಾಣಪತ್ರವನ್ನು ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕವೇ ನೀಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆಯ್ಕೆಯಾದ ಫಲಾನುಭವಿಗಳಿಗೆ ಬ್ಯಾಂಕ್‌ಗಳಿಂದ ಸಾಲ ಮಂಜೂರು ಮಾಡಲು ವಿಳಂಬ ಮಾಡಲಾಗುತ್ತಿದೆ. ಯೋಜನೆಗೆ ಆಯ್ಕೆಯಾದರೂ ಸಾಲ ನೀಡುವುದಿಲ್ಲ ಎಂದು ಬ್ಯಾಂಕ್‌ಗಳು ಹೇಳುತ್ತಿವೆ ಎಂಬ ಮುಖಂಡರ ದೂರಿಗೆ ಅಧ್ಯಕ್ಷ ರಾಮಪ್ಪ ಎಂ. ಸ್ಪಂದಿಸಿದರು.

ಸರ್ಕಾರದ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ನಿಯಮಾನುಸಾರ ಕೂಡಲೇ ಸಾಲ ಬಿಡುಗಡೆ ಮಾಡಬೇಕು. ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸುವಂತಿಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಹಾಗೂ ಬ್ಯಾಂಕ್‌ಗಳು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...