ಬಾಗಲಕೋಟೆ | ಡಿಸಿಸಿ ಬ್ಯಾಂಕ್‌ ದುರಾಡಳಿತದ ವಿರುದ್ಧ ಹೋರಾಟಕ್ಕೆ ರೈತ ಮುಖಂಡ ಯಲ್ಲಪ್ಪ ಹೆಗಡೆ ಕರೆ

Date:

ಬಾಗಲಕೋಟೆ ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ದುರಾಡಳಿತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 21ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.

- Advertisement -

ಬಾಗಲಕೋಟೆ ನವನಗರದ ಪತ್ರಿಕಾ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಸೆಪ್ಟೆಂಬರ್ 22ರಂದು ಬ್ಯಾಂಕ್‌ನ ಸಾಮಾನ್ಯ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಅದರ ಪೂರ್ವಭಾವಿಯಾಗಿ ಸೆ.21ರಂದು ಡಿಸಿಸಿ ಬ್ಯಾಂಕ್‌ನ ‘ಶುದ್ಧೀಕರಣ’ಕ್ಕಾಗಿ ಹೋರಾಟ ನಡೆಸಲಾಗುತ್ತಿದೆ.ಬ್ಯಾಂಕ್‌ನ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ರೈತಪರ ನಿಲುವು ಖಚಿತಪಡಿಸಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಇದರ ಜೊತೆಗೆ ಜಿಲ್ಲೆಯ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಬೆಳೆ ಸಾಲ ನೀಡಬೇಕು. ರೈತರಿಗೆ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸಿ, ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆ ನಿಜವಾದ ಅರ್ಥದಲ್ಲಿ ರೈತರಿಗೆ ನೆರವಾಗುವಂತೆ ರೂಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಡಿಸಿಸಿ ಬ್ಯಾಂಕ್ ಸಹಕಾರಿ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿದ್ದು, ಜಿಲ್ಲೆಯ ಸಾವಿರಾರು ರೈತರು ಹಾಗೂ ಗ್ರಾಮೀಣ ಜನರ ಆರ್ಥಿಕ ಬದುಕಿನೊಂದಿಗೆ ನೇರವಾಗಿ ಸಂಪರ್ಕ ಹೊಂದಿದೆ. ಹೀಗಾಗಿ ಬ್ಯಾಂಕ್‌ನ ಆಡಳಿತದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ, ಸ್ವಜನಪಕ್ಷಪಾತ ಅಥವಾ ದುರಾಡಳಿತಕ್ಕೆ ಅವಕಾಶ ನೀಡಬಾರದು. ಬ್ಯಾಂಕ್‌ನ ವ್ಯವಹಾರಗಳು ಪಾರದರ್ಶಕವಾಗಿರಬೇಕು ಮತ್ತು ಠೇವಣಿದಾರರು, ಸದಸ್ಯರು ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು

ಸೆ.21ರಂದು ನಡೆಯಲಿರುವ ಹೋರಾಟದಲ್ಲಿ ಜಿಲ್ಲೆಯ ರೈತರು, ಸಹಕಾರ ಕ್ಷೇತ್ರದ ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪಾರದರ್ಶಕ, ಪ್ರಾಮಾಣಿಕ ಹಾಗೂ ರೈತಪರ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಗಾಗಿ ನಡೆಯುವ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಹುಸೇನಸಾಬ್ ಮಾಲದಾರ, ಶೇಖರ್ ಕುಂದರಗಿ, ಗೊವಿಂದಪ್ಪ ಬೆಳಗಂಟಿ, ಭೀಮಶಿ ಬಸರಿಕಟ್ಟಿ, ಪರಸುರಾಮ ಮಂಟೂರ, ಸದಾಶಿವ ಆಗೋಜಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...