ಬಾಗಲಕೋಟೆ | ಫಸಲ್ ಭೀಮಾ ಯೋಜನೆ: ಕಳೆದ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚು ನೋಂದಣಿ

Date:

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ರೈತರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ದಾಖಲೆ ಪ್ರಮಾಣದಲ್ಲಿ 58,838 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 25,997 ರೈತರು ಮಾತ್ರ ಯೋಜನೆಗೆ ಹೆಸರು ನೋಂದಾಯಿಸಿದ್ದರೆ, ಈ ಬಾರಿ ಅದರ ದುಪ್ಪಟ್ಟಿಗೂ ಅಧಿಕ ಸಂಖ್ಯೆಯಲ್ಲಿ ರೈತರು ಸೇರ್ಪಡೆಯಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ.

- Advertisement -

ತಾಲೂಕುವಾರು ನೋಂದಣಿಯಲ್ಲಿ 16,236 ರೈತರೊಂದಿಗೆ ಇಳಕಲ್ ತಾಲೂಕು ಮೊದಲ ಸ್ಥಾನದಲ್ಲಿದೆ. ಹುನಗುಂದದಲ್ಲಿ 11,593 ಹಾಗೂ ಬಾದಾಮಿಯಲ್ಲಿ 11,469 ರೈತರು ನೋಂದಾಯಿಸಿಕೊಂಡಿದ್ದು, ಮಳೆ ಆಶ್ರಿತ ಪ್ರದೇಶಗಳ ರೈತರು ಬೆಳೆ ವಿಮೆಯತ್ತ ಹೆಚ್ಚಿನ ಆಸಕ್ತಿ ತೋರಿದ್ದಾರೆ. ಜಮಖಂಡಿ ತಾಲೂಕಿನಲ್ಲಿ 6,445, ಬಾಗಲಕೋಟೆಯಲ್ಲಿ 4,506, ಗುಳೇದಗುಡ್ಡದಲ್ಲಿ 3,814, ಮುಧೋಳದಲ್ಲಿ 2,814, ಬೀಳಿಗಿಯಲ್ಲಿ 1,590 ರೈತರು ನೋಂದಾಯಿಸಿಕೊಂಡಿದ್ದಾರೆ. ರಬಕವಿ–ಬನಹಟ್ಟಿ ತಾಲೂಕಿನಲ್ಲಿ ಕೇವಲ 159 ಹಾಗೂ ತೆರದಾಳದಲ್ಲಿ 212 ರೈತರು ಮಾತ್ರ ನೋಂದಣಿ ಮಾಡಿಕೊಂಡಿದ್ದು, ಈ ಎರಡೂ ತಾಲೂಕುಗಳು ಕೊನೆಯ ಸ್ಥಾನದಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಬೆಳೆವಾರು ನೋಂದಣಿಯಲ್ಲಿ ತೊಗರಿ ಬೆಳೆದ ರೈತರು ಅಗ್ರಸ್ಥಾನದಲ್ಲಿದ್ದು, 17,380 ರೈತರು ವಿಮೆಗೆ ಹೆಸರು ನೋಂದಾಯಿಸಿದ್ದಾರೆ. ಮೆಕ್ಕೆಜೋಳ ಬೆಳೆದ 13,616, ಈರುಳ್ಳಿ ಬೆಳೆದ 7,274 ಹಾಗೂ ಸೂರ್ಯಕಾಂತಿ ಬೆಳೆದ 2,516 ರೈತರು ಸೇರಿದಂತೆ ವಿವಿಧ ಬೆಳೆಗಳ ರೈತರು ಯೋಜನೆಯ ಲಾಭ ಪಡೆಯಲು ಮುಂದೆ ಬಂದಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ 2.83 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಆರಂಭಿಕ ಮಳೆಯ ಬಳಿಕ ಮಳೆ ಕೈಕೊಟ್ಟಿರುವ ಪರಿಣಾಮ ಹಲವು ಕಡೆ ಬೆಳೆ ಒಣಗಲಾರಂಭಿಸಿದೆ. ಕೆಲವು ಪ್ರದೇಶಗಳಲ್ಲಿ ಬಿತ್ತಿದ ಬೀಜಗಳು ಮೊಳಕೆಯೇ ಬರದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ದಿನಗಳಲ್ಲೂ ಮಳೆ ವಿಳಂಬವಾದರೆ ಬೆಳೆ ನಷ್ಟದ ಭೀತಿ ಎದುರಾಗುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆಯ ಮೊರೆ ಹೋಗಿದ್ದಾರೆ.

ಕೃಷಿ ಇಲಾಖೆಯು ಗ್ರಾಮ ಮಟ್ಟದಲ್ಲಿ ನಡೆಸಿದ ಜಾಗೃತಿ ಅಭಿಯಾನವೂ ನೋಂದಣಿ ಸಂಖ್ಯೆಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎರಡು ಪಟ್ಟು ಹೆಚ್ಚು ರೈತರು ಯೋಜನೆಗೆ ಸೇರ್ಪಡೆಯಾಗಿದ್ದಾರೆ.

ಅಧಿಸೂಚಿತ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಲು ಆಗಸ್ಟ್‌ 14 ಕೊನೆಯ ದಿನವಾಗಿದ್ದು, ಅರ್ಹ ರೈತರು ವಿಳಂಬ ಮಾಡದೆ ಕೂಡಲೇ ನೋಂದಣಿ ಮಾಡಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...