ಬಾಗಲಕೋಟೆ | ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

Date:

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರರು, ಡಿ.ಇ., ವಾಟರ್‌ಮನ್, ಜವಾನರು ಹಾಗೂ ಸ್ವಚ್ಛತಾಗಾರರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ನೌಕರರಿಗೆ ಹೆಚ್ಚುವರಿ ಕೆಲಸದ ಹೊರೆ ನೀಡುವುದನ್ನು ಕೂಡಲೇ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕರ ವಸೂಲಿ, ವಿವಿಧ ಯೋಜನೆಗಳ ಬರವಣಿಗೆ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಸದಸ್ಯರು ಸೂಚಿಸುವ ಕೆಲಸಗಳನ್ನು ನಿರ್ವಹಿಸುವುದರ ಜತೆಗೆ ಎಸ್‌ಐಆರ್‌ ಸೇರಿದಂತೆ ವಿವಿಧ ಕಾರ್ಯಗಳನ್ನು ನೌಕರರಿಗೆ ವಹಿಸಲಾಗುತ್ತಿದೆ. ಇದರಿಂದ ಮೂಲ ಕರ ವಸೂಲಿ ಕಾರ್ಯಕ್ಕೆ ತೊಂದರೆಯಾಗುತ್ತಿದ್ದು, ತೆರಿಗೆ ಸಂಗ್ರಹಣೆ ಕುಂಠಿತವಾಗಿದೆ ಎಂದು ತಿಳಿಸಿದರು.

“ನೌಕರರನ್ನು ಹೆಚ್ಚುವರಿ ಕೆಲಸದಿಂದ ಬಿಡುಗಡೆಗೊಳಿಸಬೇಕು. ದಂಡ ಸಹಿತ ತೆರಿಗೆ ಪಾವತಿಸುವಂತೆ ನೋಟಿಸ್ ನೀಡುವುದನ್ನು ನಿಲ್ಲಿಸಬೇಕು. ಈ ಕ್ರಮ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ಸೇವಾ ಹಿರಿತನ ಪರಿಗಣಿಸಿ ಇನ್‌ಕ್ರಿಮೆಂಟ್ ನೀಡಬೇಕು. ನೌಕರರು ನಿವೃತ್ತರಾದಾಗ ಅಥವಾ ಮರಣ ಹೊಂದಿದ ಸಂದರ್ಭದಲ್ಲಿ ₹6 ಲಕ್ಷ ಇಡಗಂಟು ನೀಡಬೇಕು. ಪಂಚಾಯಿತಿಯ ಆದಾಯಕ್ಕೆ ಅನುಗುಣವಾಗಿ ಕರ ವಸೂಲಿಗಾರರನ್ನು ನೇಮಕ ಮಾಡಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಹೊಳಬಸು ಮುನ್ನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ ಚವ್ಹಾಣ, ಶಂಕರ ಕಟಗೇರಿ, ಮಂಜುನಾಥ ನಾಯ್ಕರ್ ಹಾಗೂ ಹನಮಂತ ಗುಡೂರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...