ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

Date:

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸುವ ಉದ್ದೇಶದಿಂದ ಹೆಸ್ಕಾಂ ಬಾಗಲಕೋಟೆ ವೃತ್ತದಲ್ಲಿ ವಿಶೇಷ ವಿದ್ಯುತ್ ಜಾಲ ನಿರ್ವಹಣಾ ಅಭಿಯಾನ ಕೈಗೊಂಡಿದೆ.

- Advertisement -

ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ನಿರ್ದೇಶನದಂತೆ ಬಾಗಲಕೋಟೆ, ಜಮಖಂಡಿ ಹಾಗೂ ಮುಧೋಳ ವಿಭಾಗಗಳಲ್ಲಿ ವ್ಯಾಪಕ ನಿರ್ವಹಣಾ ಕಾರ್ಯಾಚರಣೆ ನಡೆಸಲಾಗಿದ್ದು, ಒಟ್ಟು 299 ನಿರ್ವಹಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ವಿಭಾಗವಾರು ಬಾಗಲಕೋಟೆಯಲ್ಲಿ 89, ಜಮಖಂಡಿಯಲ್ಲಿ 129 ಹಾಗೂ ಮುಧೋಳದಲ್ಲಿ 81 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿದ್ಯುತ್ ಜಾಲದ ದುರ್ಬಲ ಕೊಂಡಿಗಳನ್ನು ಗುರುತಿಸಿ ದುರಸ್ತಿ ಮಾಡುವುದರ ಜತೆಗೆ, ಸಂಭವನೀಯ ಅವಘಡಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳಿಗೂ ಆದ್ಯತೆ ನೀಡಲಾಗಿದೆ.

ಅಪಾಯಕ್ಕೆ ಆಹ್ವಾನ ನೀಡುವ ವಿದ್ಯುತ್ ಕಂಬ, ತಂತಿಗಳ ದುರಸ್ತಿಅಭಿಯಾನದಡಿ ವಿದ್ಯುತ್ ಪರಿವರ್ತಕಗಳ (ಟಿ.ಸಿ.) ಆರ್ಥಿಂಗ್ ವ್ಯವಸ್ಥೆ ದುರಸ್ತಿ, ಬಾಗಿದ ವಿದ್ಯುತ್ ಕಂಬಗಳನ್ನು ನೇರಗೊಳಿಸುವುದು, ಸಡಿಲಗೊಂಡ ತಂತಿಗಳನ್ನು ಬಿಗಿಗೊಳಿಸುವುದು, ಎಲ್‌ಟಿ ಮಾರ್ಗಗಳ ದುರಸ್ತಿ ಹಾಗೂ ಮುರಿದ ಕಂಬಗಳ ಬದಲಾವಣೆ ಸೇರಿದಂತೆ ಹಲವು ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

ವಿದ್ಯುತ್ ಮಾರ್ಗಗಳಿಗೆ ಅಡ್ಡಿಯಾಗುವ ಗಿಡ, ಬಳ್ಳಿಗಳು ಮತ್ತು ಮರದ ಕೊಂಬೆಗಳನ್ನು ತೆರವುಗೊಳಿಸಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ವಹಿಸಲಾಗಿದೆ.ವಿಶೇಷವಾಗಿ ಕೃಷಿ ಜಮೀನುಗಳಲ್ಲಿ ವಾಲಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸುವುದು ಹಾಗೂ ಸಡಿಲಗೊಂಡ ವಿದ್ಯುತ್ ತಂತಿಗಳನ್ನು ಬಿಗಿಗೊಳಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.ಅವಘಡ ಸಂಭವಿಸಿದ ಬಳಿಕ ಪರಿಹಾರ ಹುಡುಕುವುದಕ್ಕಿಂತ, ಅವಘಡವೇ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ವಿದ್ಯುತ್ ಜಾಲದ ಸುಸ್ಥಿತಿ ಕಾಪಾಡುವ ಮೂಲಕ ಸಾರ್ವಜನಿಕರ ಸುರಕ್ಷತೆ ಹಾಗೂ ನಿರಂತರ ವಿದ್ಯುತ್ ಪೂರೈಕೆಯನ್ನು ಖಾತರಿಪಡಿಸಲು ಹೆಸ್ಕಾಂ ಈ ಕ್ರಮ ಕೈಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು...

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...

ಕಾರವಾರ | ಕಸದಲ್ಲಿ ಸಿಕ್ಕ ಚಿನ್ನದ ಓಲೆ, ವಾರಸುದಾರರಿಗೆ ಹಿಂದಿರುಗಿಸಿದ ಪೌರಕಾರ್ಮಿಕರು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯದಲ್ಲಿ ಸಿಕ್ಕ ಚಿನ್ನದ ಕಿವಿಯೋಲೆಯನ್ನು...