ಬಾಗಲಕೋಟೆ | ಮಕ್ಕಳ ಸಾಹಿತ್ಯ ರಚಿಸಲು ಕಲ್ಪನಾಶಕ್ತಿ ಮತ್ತು ಮಗುವಿನ ಮನಸ್ಸು ಅಗತ್ಯ: ವಿನಾಯಕ ಕಮತದ

Date:

ಮಕ್ಕಳಿಗಾಗಿ ಬರೆಯುವುದು ಎಂದರೆ ತನ್ನೊಳಗಿನ ಮಗುವಿನ ಅಭಿವ್ಯಕ್ತಿಯನ್ನು ಹೊರಹಾಕುವುದಾಗಿದೆ. ಮಕ್ಕಳ ಮನಸ್ಸನ್ನು ಅರಿತು, ಅವರ ದೃಷ್ಟಿಕೋನದಿಂದ ಸಾಹಿತ್ಯ ರಚನೆ ಮಾಡಬೇಕು ಎಂದು ಸಾಹಿತಿ ವಿನಾಯಕ ಕಮತದ ಹೇಳಿದರು.

- Advertisement -

ಬಾಗಲಕೋಟೆ ನಗರದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ‘ಉತ್ತರ ಕರ್ನಾಟಕ ಮಕ್ಕಳ ಸಾಹಿತಿಗಳು – ಸಾಹಿತ್ಯ ವೇದಿಕೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಮಕ್ಕಳ ಸಾಹಿತ್ಯವು ಕೇವಲ ಮನರಂಜನೆಯ ಮಾಧ್ಯಮವಲ್ಲ, ಅದು ಮಕ್ಕಳ ಕಲ್ಪನಾಶಕ್ತಿ, ಸೃಜನಶೀಲತೆ ಹಾಗೂ ಸಂವೇದನೆಗಳನ್ನು ಬೆಳೆಸುವ ಪ್ರತಿಬಿಂಬವಾಗಿದೆ ಎಂದು ಅವರು ತಿಳಿಸಿದರು.

‘ಉತ್ತರ ಕರ್ನಾಟಕದ ಮಕ್ಕಳ ಸಾಹಿತ್ಯ – ಒಂದು ವಿಶ್ಲೇಷಣೆ’ ವಿಷಯದ ಕುರಿತು ಉಪನ್ಯಾಸ ನೀಡಿದ ಸಾಹಿತಿ ಆನಂದ ಪಾಟೀಲ, ಉತ್ತರ ಕರ್ನಾಟಕದ ಮಕ್ಕಳ ಸಾಹಿತ್ಯವು ವಿಶಿಷ್ಟ ಹಾದಿಯಲ್ಲಿ ಸಾಗುತ್ತಾ ಸಮಾಜಕ್ಕೆ ಮೌಲ್ಯಯುತ ಕೊಡುಗೆ ನೀಡಿದೆ ಎಂದು ಹೇಳಿದರು.

“ಮಕ್ಕಳ ಸಾಹಿತ್ಯದ ಬೆಳವಣಿಗೆಯನ್ನು ಮೂರು ಹಂತಗಳಲ್ಲಿ ಗುರುತಿಸಬಹುದಾಗಿದೆ. ಮೊದಲ ಹಂತದಲ್ಲಿ ಶಿಕ್ಷಣದ ಅಂಗವಾಗಿ ಬಾಲಸಾಹಿತ್ಯ ರೂಪುಗೊಂಡರೆ, ಎರಡನೇ ಹಂತದಲ್ಲಿ ಶಿಕ್ಷಕ-ಸಾಹಿತಿಗಳು ತಮ್ಮ ಬಾಲ್ಯದ ಹಳ್ಳಿ ಬದುಕನ್ನು ಸಾಹಿತ್ಯದಲ್ಲಿ ಕಟ್ಟಿಕೊಟ್ಟರು. ಮೂರನೇ ಹಂತದಲ್ಲಿ ಶಿಕ್ಷಕರಲ್ಲದ ಲೇಖಕರು ಮಕ್ಕಳ ಸಾಹಿತ್ಯ ರಚನೆಗೆ ಹೊಸ ಆಯಾಮ ನೀಡಿದರು” ಎಂದು ವಿವರಿಸಿದರು.

ಲೇಖಕ ತಮ್ಮಣ್ಣ ಬೀಗಾರ ಮಾತನಾಡಿ, ಉತ್ತರ ಕರ್ನಾಟಕದ ಸಾಹಿತಿಗಳು ಮಕ್ಕಳ ಸಾಹಿತ್ಯಕ್ಕೆ ಹೊಸ ದಿಕ್ಕು ನೀಡಿದ್ದು, ಸಾಹಿತ್ಯವು ಹೃದಯದ ತುಡಿತದಿಂದ ಮೂಡಿಬರಬೇಕು. ತಮ್ಮ ಬಾಲ್ಯದ ಅನುಭವಗಳನ್ನು ಮಕ್ಕಳ ಸಾಹಿತ್ಯದೊಂದಿಗೆ ಅನುಸಂಧಾನಗೊಳಿಸಿದ್ದೇನೆ ಎಂದು ಹೇಳಿದರು.

ಸಾಹಿತಿ ರಾಜಶೇಖರ ಕುಕ್ಕುಂದ ಮಾತನಾಡಿ, “ಬಾಲ್ಯದ ಅನುಭವಗಳು ಹಾಗೂ ಪ್ರಕೃತಿಯೊಂದಿಗಿನ ನಂಟೇ ತಮ್ಮ ಬರವಣಿಗೆಗೆ ಪ್ರೇರಣೆಯಾಗಿದೆ. ವಿಜ್ಞಾನ ವಿಷಯವನ್ನು ಅಧ್ಯಯನ ಮಾಡಿದರೂ ಸಾಹಿತ್ಯದ ಮೇಲಿನ ಆಸಕ್ತಿ ಎಂದಿಗೂ ಕಡಿಮೆಯಾಗಲಿಲ್ಲ. ಕವಿತೆ ಬರೆಯುವಾಗ ಮಗುವಿನ ಮನಸ್ಸು ಹೊಂದಿರಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಬಿ.ಆರ್. ಹಿರೇಮಠ ಮಾತನಾಡಿ, ಕಥೆ-ಕಾದಂಬರಿಗಳ ಓದು ವ್ಯಕ್ತಿತ್ವ ವಿಕಸನಕ್ಕೆ ಮಹತ್ವದ ಕೊಡುಗೆ ನೀಡುತ್ತದೆ ಎಂದು ಹೇಳಿದರು.

ಕನ್ನಡ ಸಲಹಾ ಮಂಡಳಿಯ ಸದಸ್ಯ ವಿಜಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಯುಪಿ ಚುನಾವಣೆ | ಮತದಾರರ ಮನಗೆಲ್ಲಲು ಯೋಗಿ ಸಂಪುಟದ ಮೆಗಾ ಪ್ಲ್ಯಾನ್; ಹಸು ಖರೀದಿಗೆ ಸಬ್ಸಿಡಿ, ಉಚಿತ ಕೋಳಿ ಮರಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ (2027ರ ಫೆಬ್ರವರಿ–ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆಯಿದೆ)...

ಚಿಂತಾಮಣಿ | ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಕ್ಕೆ ತಹಶೀಲ್ದಾರ್, ತಾ.ಪಂ ಇಒ ದಿಢೀರ್ ಭೇಟಿ – ಪರಿಶೀಲನೆ

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ...

ಕೋಲಾರ | ಆದಿಮದಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವ ಸಂಭ್ರಮ, ಕಿಕ್ಕಿರಿದ ಪ್ರೇಕ್ಷಕರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ...