ಬಾಗಲಕೋಟೆ | ಹಿಪ್ಪರಗಿ ಬ್ಯಾರೇಜ್‌ಗೆ 1.08 ಲಕ್ಷ ಕ್ಯುಸೆಕ್ ಒಳ ಹರಿವು

Date:

ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಹಿಪ್ಪರಗಿ ಬ್ಯಾರೇಜ್‌ಗೆ ಬುಧವಾರ ಸಂಜೆ 5 ಗಂಟೆಯ ವೇಳೆಗೆ 1,08,000 ಕ್ಯುಸೆಕ್‌ಗಳ ಒಳಹರಿವು ದಾಖಲಾಗಿದೆ. ಇದೇ ವೇಳೆ ಬ್ಯಾರೇಜ್‌ನಿಂದ 1,07,850 ಕ್ಯುಸೆಕ್‌ಗಳ ನೀರನ್ನು ಹೊರಬಿಡಲಾಗುತ್ತಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದ್ದಾರೆ.

- Advertisement -

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 1,03,083 ಕ್ಯುಸೆಕ್‌ಗಳ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ಕೃಷ್ಣಾ ನದಿಯ ಉಪನದಿಗಳು ಭರ್ತಿಯಾಗಿ ಹರಿಯುತ್ತಿರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇರುತ್ತಿದ್ದು, ಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದೇ ವೇಳೆ ಕಲ್ಲೋಳ ಬ್ಯಾರೇಜ್‌ನಿಂದಲೂ 1,27,371 ಕ್ಯುಸೆಕ್‌ಗಳ ನೀರು ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಹರಿವಿನ ಪ್ರಮಾಣ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದು ಹರಿವಿನ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಕೊಯ್ನಾ ಪ್ರದೇಶದಲ್ಲಿ 16.5 ಸೆಂ.ಮೀ, ನವುಜಾ 16 ಸೆಂ.ಮೀ, ಮಹಾಬಳೇಶ್ವರ 26.6 ಸೆಂ.ಮೀ, ರಾಧಾನಗರಿ 12.4 ಸೆಂ.ಮೀ, ದೂದಗಂಗಾ 16.5 ಸೆಂ.ಮೀ, ವಾರಣಾ 14.6 ಸೆಂ.ಮೀ ಹಾಗೂ ತರಾಳಿ 12.2 ಸೆಂ.ಮೀ ಮಳೆಯಾಗಿದೆ. ಅಲ್ಲದೆ ದೂಮ್, ಕನೇರಿ ಹಾಗೂ ಉಮದಿ ಭಾಗಗಳಲ್ಲಿಯೂ ಉತ್ತಮ ಮಳೆಯಾಗಿರುವ ವರದಿಗಳು ಬಂದಿವೆ.

ನದಿಯ ಹರಿವು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳ ಜನರು ಹಾಗೂ ರೈತರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...