ಬಾಗಲಕೋಟೆ |ಬೆಳೆ ನಷ್ಟದ ಸಂಕಷ್ಟಕ್ಕೆ ವಿಮಾ ಭದ್ರತೆ: ರೈತರಿಗೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

Date:

ಹವಾಮಾನ ವೈಪರೀತ್ಯ ಹಾಗೂ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ರೈತರಲ್ಲಿ ಮನವಿ ಮಾಡಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬೆಳೆ ವಿಮಾ ಯೋಜನೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೆಳೆಸಾಲ ಪಡೆದ ರೈತರಿಗೆ ಅಧಿಸೂಚಿತ ಬೆಳೆಗಳ ವಿಮೆ ಕಡ್ಡಾಯವಾಗಿರುತ್ತದೆ. ಯೋಜನೆಯಿಂದ ಹೊರಗುಳಿಯಲು ಇಚ್ಛಿಸುವವರು ಬೆಳೆ ನೋಂದಣಿಯ ಕೊನೆಯ ದಿನಾಂಕಕ್ಕೆ ಏಳು ದಿನಗಳ ಮುಂಚಿತವಾಗಿ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತ ಮುಚ್ಚಳಿಕೆ ಪತ್ರ ಸಲ್ಲಿಸಬೇಕು.ಬೆಳೆಸಾಲ ಪಡೆಯದ ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವುದು ಐಚ್ಛಿಕವಾಗಿದೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇತ್ತ ಬೆಲೆ ಏರಿಕೆಯ ‘ಬರೆ’, ಅತ್ತ 1 ಟ್ರಿಲಿಯನ್‌...

ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌ ಸರ್ಕಾರ "ಟ್ರಿಲಿಯನ್ ಡಾಲರ್ ಆರ್ಥಿಕತೆ"ಯ ಭವ್ಯ ಚಿತ್ರಣವನ್ನು ಸಾರ್ವಜನಿಕರ ಮುಂದಿಡುತ್ತಿವೆ. ಸದ್ಯ ಕರ್ನಾಟಕದಲ್ಲಿ ಕಂಡುಬರುತ್ತಿರುವ...

ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗರ್ವಭಂಗ: ಸೊಕ್ಕು ಮುರಿದ...

ಈ ಚುನಾವಣಾ ಫಲಿತಾಂಶದಿಂದ ಟ್ರಂಪ್ ಅವರು ತಮ್ಮ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮುಂದಿನ ಜನವರಿ 3ರಂದು ಹೊಸ ಕಾಂಗ್ರೆಸ್ (ಸಂಸತ್ತು) ಅಸ್ತಿತ್ವಕ್ಕೆ ಬಂದ ಬಳಿಕ ಅವರ ಆಡಳಿತದ ಹಾದಿ ಅತ್ಯಂತ ದುರ್ಗಮವಾಗಲಿದೆ....

ಆಹಾರ ಬೆಳೆಗಳಿಗೆ ಶೇ.1.5, ವಾಣಿಜ್ಯ ಬೆಳೆಗಳಿಗೆ ಶೇ.5ರಷ್ಟು ಕಂತು

ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಆಹಾರ ಬೆಳೆಗಳಿಗೆ ವಿಮಾ ಮೊತ್ತದ ಶೇ.1.5ರಷ್ಟು ಹಾಗೂ ವಾಣಿಜ್ಯ ಬೆಳೆಗಳಿಗೆ ಶೇ.5ರಷ್ಟು ವಿಮಾ ಕಂತನ್ನು ರೈತರು ಪಾವತಿಸಬೇಕಾಗುತ್ತದೆ. ವಿಮೆ ಮಾಡಿಸಿಕೊಳ್ಳುವ ರೈತರು ಪ್ರೂಟ್ಸ್ ತಂತ್ರಾಂಶದಲ್ಲಿ ಎಫ್‌ಐಡಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸ್ಥಳೀಯ ಗಂಡಾಂತರಗಳಿಂದ ಬೆಳೆ ಹಾನಿಯಾದಲ್ಲಿ ವಿಮೆ ಮಾಡಿಸಿರುವ ರೈತರು ನಷ್ಟದ ವಿವರ, ಹಾನಿಯ ವ್ಯಾಪ್ತಿ ಹಾಗೂ ಕಾರಣವನ್ನು 72 ಗಂಟೆಗಳೊಳಗಾಗಿ ಸಂಬಂಧಪಟ್ಟ ವಿಮಾ ಸಂಸ್ಥೆ, ಹಣಕಾಸು ಸಂಸ್ಥೆ ಅಥವಾ ಕೃಷಿ, ತೋಟಗಾರಿಕೆ ಇಲಾಖೆಗೆ ತಿಳಿಸಬೇಕು. ವಿಳಂಬ ಮಾಡದೆ ಮಾಹಿತಿ ನೀಡುವ ಮೂಲಕ ವಿಮಾ ಸೌಲಭ್ಯ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೊನೆಯ ದಿನದವರೆಗೆ ಕಾಯಬೇಡಿ

ಪ್ರಸಕ್ತ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಗೆ ಎಸ್‌ಬಿಐ ಜನರಲ್ ಇನ್ಸುರೆನ್ಸ್ ಕಂಪನಿಯನ್ನು ವಿಮಾ ಸಂಸ್ಥೆಯಾಗಿ ಆಯ್ಕೆ ಮಾಡಲಾಗಿದೆ. ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಸಮೀಪದ ಬ್ಯಾಂಕ್, ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ನೋಂದಣಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡು ವಿಮಾ ಕಂತು ಪಾವತಿಸಬೇಕು ಎಂದು ಮನವಿ ಮಾಡಿದರು.

ಬೆಳೆ ವಿಮೆ ಹಾಗೂ ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ 1800-209-1111 ಸಹಾಯವಾಣಿಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗೌರಮ್ಮ ಸುಂಕದ ಅವರು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಆರ್.ಡಿ.ಪಿ.ಆರ್. ಇಲಾಖೆಗಳ ಬೆಳೆ ಕಟಾವು ಪ್ರಯೋಗಗಳ ಪ್ರಗತಿ ವಿವರಗಳನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಬೆಳೆ ವಿಮೆ ಯೋಜನೆಯ ಮಾಹಿತಿಯುಳ್ಳ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಮಹಿಳಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು

ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ...

ವಿಜಯಪುರ |ಮತಗಳ್ಳತನ ನಿಲ್ಲಿಸಿ, ಪ್ರಜಾಪ್ರಭುತ್ವ ಉಳಿಸಿ: ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ಮತದಾರರ ಹೆಸರುಗಳನ್ನು...

ಉಡುಪಿ | ಹಾವಂಜೆ ಗೋಳಿಕಟ್ಟೆಯಲ್ಲಿ ನೂತನ ಅಲ್ ಫಲಾಹ್ ಜುಮ್ಮಾ ಮಸೀದಿ ಉದ್ಘಾಟನೆ

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನಾ...

ವಿಜಯಪುರ |ಹಾಲು, ಬಸ್ ದರ ಏರಿಕೆ ಹಿಂಪಡೆಯಲು ಅಪ್ಪುರಾಜ್ ನಿಮಾದಾರ ಆಗ್ರಹ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿರುವ...