ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

Date:

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ ಒಬ್ಬ ಪ್ರಾಮಾಣಿಕ ಪತ್ರಕರ್ತ ಸಮಾಜದಲ್ಲಿದ್ದರೆ, ಆ ಸಮಾಜ ಮಾದರಿಯಾಗಿ ಬೆಳೆಯಲು ಸಾಧ್ಯ ಎಂದು ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಅಶೋಕ ನಾರಾಯಣಿ ಅಭಿಪ್ರಾಯಪಟ್ಟರು.

- Advertisement -

ಬಾಗಲಕೋಟೆ ನಗರದಲ್ಲಿ ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘದ ವತಿಯಿಂದ ಪತ್ರಕರ್ತ ಸುಭಾಷ್‌ ಹೊದ್ಲುರ ಅವರಿಗೆ ಏರ್ಪಡಿಸಿದ್ದ ಗೌರವ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

“ಪತ್ರಿಕೋದ್ಯಮವೆಂದರೆ ಕೇವಲ ಸುದ್ದಿ ಪ್ರಕಟಿಸುವ ವೃತ್ತಿಯಲ್ಲ; ಅದು ಸಮಾಜದ ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸಿ, ಜನರ ಸಮಸ್ಯೆಗಳನ್ನು ಗುರುತಿಸಿ, ಜನಾಭಿಪ್ರಾಯ ರೂಪಿಸುವ ಮಹತ್ವದ ಜವಾಬ್ದಾರಿಯಾಗಿದೆ. ಪತ್ರಕರ್ತರು ತಮ್ಮ ಅನುಭವ, ಜ್ಞಾನ ಹಾಗೂ ಸಾಮಾಜಿಕ ಕಾಳಜಿಯ ಮೂಲಕ ಜನರಿಗೆ ಮಾರ್ಗದರ್ಶನ ನೀಡಬಲ್ಲರು. ಹೀಗಾಗಿ ಸಮಾಜದ ಪ್ರಗತಿಗೆ ಅನುಭವಿ ಪತ್ರಕರ್ತರ ಸಲಹೆ ಮತ್ತು ಮಾರ್ಗದರ್ಶನ ಅತ್ಯಗತ್ಯ” ಎಂದು ಹೇಳಿದರು.

“ಸಮಾಜದ ವಿವಿಧ ಕ್ಷೇತ್ರಗಳ ಬೆಳವಣಿಗೆ, ಜನರ ಆಶೋತ್ತರಗಳು ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ವಿಶ್ಲೇಷಿಸಿ ಜನರ ಮುಂದಿಡುವ ಸಾಮರ್ಥ್ಯ ಪತ್ರಕರ್ತರಿಗಿದೆ. ಇಂತಹ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುವ ಪತ್ರಕರ್ತರ ಸೇವೆಯನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಕಾರ್ಯಕ್ರಮದ ಅತಿಥಿಗಳಾದ ಡಾ. ಪಿ.ಡಿ. ಸರಿಕಾರ, ವೈ.ಎನ್. ಚಲವಾದಿ, ಗುರುಶಾಂತಪ್ಪ ಮದೀನಕರ ಹಾಗೂ ಗೋಪಾಲ ನಾರಾಯಣಿ ಮಾತನಾಡಿ, ಪತ್ರಕರ್ತರು ಸಮಾಜದ ವಿವಿಧ ಕ್ಷೇತ್ರಗಳ ಕುರಿತು ಜ್ಞಾನ ಮತ್ತು ಪ್ರಬುದ್ಧತೆ ಹೊಂದಿರುತ್ತಾರೆ. ಜನರ ಸಮಸ್ಯೆಗಳು, ಸಾಮಾಜಿಕ ಬದಲಾವಣೆಗಳು ಹಾಗೂ ಅಭಿವೃದ್ಧಿಯ ವಿಚಾರಗಳನ್ನು ಸಮರ್ಥವಾಗಿ ವಿಶ್ಲೇಷಿಸಿ ಜನಜಾಗೃತಿ ಮೂಡಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.

ಪತ್ರಕರ್ತ ಸುಭಾಷ ಹೊದ್ಲುರ ಅವರು ಪತ್ರಿಕೋದ್ಯಮದಲ್ಲಿ ಗಳಿಸಿರುವ ಅನುಭವ ಮತ್ತು ಸಮಾಜದ ಬೆಳವಣಿಗೆಗೆ ನೀಡುತ್ತಿರುವ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಿರುವುದು ಅರ್ಥಪೂರ್ಣ ಕಾರ್ಯವಾಗಿದೆ. ಇಂತಹ ಗೌರವಗಳು ಪತ್ರಕರ್ತರ ಸಾಮಾಜಿಕ ಸೇವೆಗೆ ಮತ್ತಷ್ಟು ಪ್ರೋತ್ಸಾಹ ನೀಡಲಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಿದ್ದಣ್ಣ ಕಡಾಡಿ, ಎಂ.ಎಂ. ಚಬನೂರ, ಜೈಭೀಮ, ಖೇಡಗಿ, ಬಡಿಗೇರ, ನಿವೃತ್ತ ಪ್ರಾಂಶುಪಾಲ ವಿದ್ಯಾಸಾಗರ ತಳಕೇರಿ, ಮಲ್ಲಪ್ಪಗೋಳ ಸೇರಿದಂತೆ ಚಲವಾದಿ ಸಮಾಜದ ಹಿರಿಯರು ಹಾಗೂ ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್,...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....