ಬಾಗಲಕೋಟೆ | ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಕರವೇ ಪ್ರತಿಭಟನೆ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ನೊಂದು ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಜೊತೆಗೆ ಪರೀಕ್ಷಾಂಗ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ಬಾಗಲಕೋಟೆ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ, “ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ” ಎಂದು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇಪ್ಪತ್ತೆರಡು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ , ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಕೇಂದ್ರ ಸರ್ಕಾರ ಶಿಕ್ಷಣ ಸಚಿವರ ರಾಜೀನಾಮೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಟೀಕಿಸಿದ್ದಾರೆ.

“ಪ್ರಧಾನಮಂತ್ರಿ ವಿಡಿಯೋ ಸಂದೇಶದ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದ ಅವರು, ಜುಲೈ 31, 2026ರೊಳಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ಬಾಗಲಕೋಟೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸ್ಥಳೀಯ ಸಂಸದರ ನಿವಾಸ ಅಥವಾ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭಾವನೆಗಳಿಗೆ ಗೌರವ ನೀಡಿ, ಪ್ರಕರಣದ ಕುರಿತು ಪಾರದರ್ಶಕ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಪ್ರಧಾನ ಕಚೇರಿ ಉದ್ಘಾಟನೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅನೇಕ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳ ತವರೂರಾಗಿದ್ದು,...

ಕಲಬುರಗಿ | ಪ್ರಾಧ್ಯಾಪಕ ಶಿವಾನಂದ ಬಂಟನೂರಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ...

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...