ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

Date:

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಹೆಚ್ಚಿಸಲು ಸರ್ಕಾರ ಮುಂದಾಗಿರುವುದಕ್ಕೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ (ರಿ), ಉತ್ತರ ಪ್ರಾಂತ, ಬಾಗಲಕೋಟೆ ಜಿಲ್ಲಾ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.

- Advertisement -

ರೈತರು ಹಾಗೂ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುವ ಪ್ರಸ್ತಾವಿತ ದರ ಹೆಚ್ಚಳವನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿ ಪದಾಧಿಕಾರಿಗಳು ತಹಶೀಲ್ದಾರ್ ವಿನೋದ ಹತ್ತಳ್ಳಿ ಹಾಗೂ ಉಪನೋಂದಣಿ ಅಧಿಕಾರಿ ಭರತೇಶ ಪಾಟೀಲ ಅವರ ಮೂಲಕ ಸರ್ಕಾರಕ್ಕೆ ಆಕ್ಷೇಪಣಾ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಬೀಳಗಿ, ಬಾಗಲಕೋಟೆ, ಮುಧೋಳ, ಜಮಖಂಡಿ, ಬಾದಾಮಿ, ಹುನಗುಂದ, ಇಲಕಲ್ಲು, ರಬಕವಿ-ಬನಹಟ್ಟಿ ಹಾಗೂ ಗುಳೇದಗುಡ್ಡ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಕೃಷಿ ಜಮೀನು, ನಿವೇಶನ ಹಾಗೂ ಇತರೆ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳವು ರೈತರು, ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸಂಕಷ್ಟ ತಂದೊಡ್ಡಲಿದೆ ಎಂದು ಸಂಘ ಆತಂಕ ವ್ಯಕ್ತಪಡಿಸಿದೆ.

ಈಗಾಗಲೇ ರೈತರು ಬರಗಾಲ, ಮಳೆ ಅಭಾವ, ಬೆಳೆ ನಷ್ಟ, ಕೃಷಿ ಉತ್ಪಾದನಾ ವೆಚ್ಚ, ಬೀಜ, ಗೊಬ್ಬರ, ಕೂಲಿ ಕಾರ್ಮಿಕರು ಹಾಗೂ ನೀರಾವರಿ ವೆಚ್ಚಗಳ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ತಿ ಮಾರ್ಗಸೂಚಿ ದರ ಹೆಚ್ಚಿಸಿದರೆ ಜಮೀನು ಖರೀದಿ ಮತ್ತು ಮಾರಾಟದ ವೇಳೆ ಮುದ್ರಾಂಕ ಹಾಗೂ ನೋಂದಣಿ ಶುಲ್ಕದ ಹೊರೆ ಮತ್ತಷ್ಟು ಹೆಚ್ಚಾಗಲಿದೆ. ಇದರಿಂದ ಸಣ್ಣ ಮತ್ತು ಅತಿಸಣ್ಣ ರೈತರು ಸೇರಿದಂತೆ ಸಾಮಾನ್ಯ ಕುಟುಂಬಗಳು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಕುಟುಂಬದ ಆಸ್ತಿ ಹಂಚಿಕೆ, ಮಕ್ಕಳಿಗೆ ದಾನಪತ್ರ ಮಾಡುವುದು, ನಿವೇಶನ ಖರೀದಿ, ಮನೆ ನಿರ್ಮಾಣ ಹಾಗೂ ಆಸ್ತಿ ವರ್ಗಾವಣೆ ಪ್ರಕ್ರಿಯೆಗಳಿಗೂ ಹೆಚ್ಚಿನ ಹಣ ವ್ಯಯಿಸಬೇಕಾದ ಅನಿವಾರ್ಯತೆ ಎದುರಾಗಲಿದೆ. ಗ್ರಾಮೀಣ ಪ್ರದೇಶದ ನೀರಾವರಿ ಜಮೀನು, ಒಣಭೂಮಿ ಹಾಗೂ ಬಾಗಾಯತು ಜಮೀನುಗಳ ಭೌಗೋಳಿಕ ಮತ್ತು ಕೃಷಿ ಸ್ವರೂಪ ವಿಭಿನ್ನವಾಗಿರುವುದರಿಂದ ಎಲ್ಲವನ್ನೂ ಒಂದೇ ಮಾನದಂಡದಲ್ಲಿ ಮೌಲ್ಯಮಾಪನ ಮಾಡುವುದು ವೈಜ್ಞಾನಿಕ ಕ್ರಮವಲ್ಲ ಎಂದು ಸಂಘ ಆಕ್ಷೇಪಿಸಿದೆ.

ಸರ್ಕಾರಕ್ಕೆ ಕಿಸಾನ್ ಸಂಘದ ಪ್ರಮುಖ ಆಗ್ರಹಗಳೇನು?

ದರ ಪರಿಷ್ಕರಣೆಗೂ ಮುನ್ನ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರೈತ ಸಂಘಟನೆಗಳು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಬೇಕು. ಪ್ರತಿ ಗ್ರಾಮದ ವಾಸ್ತವಿಕ ಮಾರುಕಟ್ಟೆ ಪರಿಸ್ಥಿತಿ, ಕೃಷಿ ಭೂಮಿಯ ಸ್ವರೂಪ, ನೀರಾವರಿ ಸೌಲಭ್ಯ ಹಾಗೂ ಸ್ಥಳೀಯ ಪರಿಸ್ಥಿತಿಗಳನ್ನು ಆಧರಿಸಿ ವೈಜ್ಞಾನಿಕವಾಗಿ ಮಾರ್ಗಸೂಚಿ ದರ ನಿಗದಿಪಡಿಸಬೇಕು.

ಸಾರ್ವಜನಿಕರ ಆಕ್ಷೇಪಣೆಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ಪರಿಷ್ಕೃತ ದರಗಳನ್ನು ಜಾರಿಗೊಳಿಸಬಾರದು ಎಂದು ಸಂಘ ಒತ್ತಾಯಿಸಿದೆ.ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಾರ್ಗಸೂಚಿ ದರ ಹೆಚ್ಚಳದ ಪ್ರಸ್ತಾವನೆಯನ್ನು ಕೈಬಿಡಬೇಕು. ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ಏಕಪಕ್ಷೀಯವಾಗಿ ದರ ಹೆಚ್ಚಳ ಜಾರಿಗೊಳಿಸಿದರೆ ಜನಸಾಮಾನ್ಯರ ಮೇಲೆ ಅನಗತ್ಯ ಆರ್ಥಿಕ ಹೊರೆ ಬೀಳಲಿದೆ ಎಂದು ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ ಯಡಹಳ್ಳಿ, ಕಬ್ಬು ಬೆಳೆಗಾರರ ಪ್ರಮುಖ ಅಶೋಕ ಮಂತ್ರಿ, ರೈತ ಮುಖಂಡರಾದ ನಾಗಪ್ಪ ಬಿರಾದಾರ, ಚಂದ್ರಪ್ಪ ಹಳೆರೊಳ್ಳಿ, ಮಲ್ಲಯ್ಯ ಮಠ ಹಾಗೂ ಮಲ್ಲಿಕಾರ್ಜುನ ವಿಭೂತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ರಾಯಚೂರು | ವಿವಿಧ ನಿಗಮ ಮಂಡಳಿಗಳಿಗೆ ಜಿಲ್ಲೆಯ 12 ಮಂದಿಗೆ ಸ್ಥಾನ

ರಾಜ್ಯ ಸರ್ಕಾರ ವಿವಿಧ ನಿಗಮ, ಮಂಡಳಿ ಹಾಗೂ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು...

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣ ನೀರು ಹರಿಸಲು ಆಗ್ರಹ; ನ.16ಕ್ಕೆ ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಅಡಿಕೆ, ಬಾಳೆ, ತೆಂಗು,...

ಶಿವಮೊಗ್ಗ | ನೆಹರು ಕ್ರೀಡಾಂಗಣದಲ್ಲಿ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆಗೆ ಕಡಿವಾಣ

ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಶಿವಮೂರ್ತಿ ಸರ್ಕಲ್ ಸಮೀಪದ ಐತಿಹಾಸಿಕ ನೆಹರು ಕ್ರೀಡಾಂಗಣದ...