ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

Date:

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ ವ್ಯವಸ್ಥೆಯಲ್ಲಿನ ಲೋಪದೋಷಗಳು ಬಯಲಾಗಿವೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟದ ಕೊರತೆ, ಆಹಾರ ಧಾನ್ಯಗಳ ಪೂರೈಕೆಯಲ್ಲಿ ಲೋಪ, ವೃದ್ಧಾಶ್ರಮದಲ್ಲಿ ಮೂಲಸೌಕರ್ಯಗಳ ಅಭಾವ ಕಂಡುಬಂದ ಹಿನ್ನೆಲೆಯಲ್ಲಿ ಜಿ.ಪಂ ಸಿಇಒ ಗಜಾನನ ಬಾಲೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದ್ದಾರೆ.

- Advertisement -

ಸೋಮವಾರ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ವಿವಿಧ ಸರ್ಕಾರಿ ಸಂಸ್ಥೆಗಳು, ವಸತಿ ನಿಲಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕ ಸೇವೆಗಳಲ್ಲಿನ ಲೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಆಸ್ಪತ್ರೆಯಲ್ಲಿ ಸ್ವಚ್ಛತೆ, ಆಹಾರದ ಗುಣಮಟ್ಟಕ್ಕೆ ಲೋಪ:

ಜಮಖಂಡಿಯ 100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಿಇಒ, ವಾರ್ಡ್‌ಗಳು, ಪ್ರಯೋಗಾಲಯ ಹಾಗೂ ಅಡುಗೆಮನೆಯನ್ನು ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಮತ್ತು ಆಹಾರ ತಯಾರಿಕೆಯ ಕಳಪೆ ಗುಣಮಟ್ಟ ಕಂಡುಬಂದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಕರ್ತವ್ಯದ ವೇಳೆ ಹಾಜರಿರದ ಮುಖ್ಯ ವೈದ್ಯಾಧಿಕಾರಿ ಡಾ. ಕರಿಯಣ್ಣವರ ಅವರಿಗೆ ನೋಟಿಸ್ ನೀಡುವಂತೆ ಸೂಚಿಸಿದರು.

Advertisements

ಇದೇ ವೇಳೆ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನಿಂಗ್ ಯಂತ್ರ ಇಲ್ಲದ ಕಾರಣ ರೋಗಿಗಳು ಖಾಸಗಿ ಕೇಂದ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಸಾರ್ವಜನಿಕರು ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಿಇಒ, ಯಂತ್ರ ಮಂಜೂರಾತಿಗಾಗಿ ಸಂಬಂಧಿಸಿದ ಆಯುಕ್ತರಿಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು.

ವಿದ್ಯಾರ್ಥಿನಿಯರೊಂದಿಗೆ ಶೈಕ್ಷಣಿಕ ಪ್ರಗತಿ ಚರ್ಚೆ:

ಡಿ. ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಗಜಾನನ ಬಾಲೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಅವರ ಶೈಕ್ಷಣಿಕ ಪ್ರಗತಿ ಹಾಗೂ ‘ವಿಷನ್ 90+’ ಕಾರ್ಯಕ್ರಮದ ಅನುಷ್ಠಾನದ ಕುರಿತು ಚರ್ಚಿಸಿದರು.

ನಂತರ ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸುವ ಆಹಾರ ಧಾನ್ಯಗಳ ಗೋದಾಮು ಮತ್ತು ಟಿ.ಎ.ಪಿ.ಸಿ.ಎಂ.ಎಸ್ ಮಳಿಗೆ ಪರಿಶೀಲಿಸಿದರು. ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು.

ಜಮಖಂಡಿಯ ಜೈ ಭಾರತ ಮಾತಾ ವೃದ್ಧಾಶ್ರಮದಲ್ಲಿ ವೃದ್ಧರಿಗೆ ಕಲ್ಪಿಸಿರುವ ವಸತಿ, ಕೊಠಡಿಗಳು ಹಾಗೂ ಶೌಚಾಲಯಗಳ ವ್ಯವಸ್ಥೆಯನ್ನು ಪರಿಶೀಲಿಸಿದ ಸಿಇಒಗೆ ಹಲವು ಸಮಸ್ಯೆಗಳು ಕಂಡುಬಂದವು.
ಶೀಟ್‌ಗಳಿಂದ ನಿರ್ಮಿಸಿರುವ ಕೊಠಡಿಗಳಲ್ಲಿ ಅತಿಯಾದ ಉಷ್ಣತೆ ಇದ್ದು, ಶೌಚಾಲಯಗಳ ವ್ಯವಸ್ಥೆಯೂ ಸಮರ್ಪಕವಾಗಿಲ್ಲದಿರುವುದನ್ನು ಗಮನಿಸಿದರು. ವೃದ್ಧರಿಗೆ ಅಗತ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಸಂಬಂಧಿಸಿದ ಎನ್‌ಜಿಒಗೆ ಒಂದು ವಾರದ ಗಡುವು ನೀಡಿದರು.

ವೃದ್ಧರಿಗೆ ಗೌರವಯುತ ಮತ್ತು ಆರಾಮದಾಯಕ ವಾತಾವರಣ ಕಲ್ಪಿಸುವುದು ಅಗತ್ಯವಾಗಿದ್ದು, ಮೂಲಸೌಕರ್ಯಗಳ ಸುಧಾರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಡಿಬಿಒಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ಸ್ಥಿತಿಯನ್ನು ಸಿಇಒ ಪರಿಶೀಲಿಸಿದರು.

ಭೇಟಿಯ ಸಂದರ್ಭದಲ್ಲಿ ಜಮಖಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಕೀಜೀ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂಜು ಹಿಪ್ಪರಗಿ, ಸುರೇಶ ಪಂಚಾಳ, ಸಹಾಯಕ ಲೆಕ್ಕಾಧಿಕಾರಿ ನರೇಂದ್ರ ಕೆಂಪನ್ನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...