ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

Date:

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಯ ಜವಾಬ್ದಾರಿಯಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ಪರೀಕ್ಷೆ ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಬಾಗಲಕೋಟೆ ನಗರದ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶುಕ್ರವಾರ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಪರೀಕ್ಷೆಯ ಪಾವಿತ್ರ್ಯತೆ ಹಾಗೂ ನಿಯಮಗಳ ಪಾಲನೆಗೆ ಮೊದಲ ಆದ್ಯತೆ ನೀಡಬೇಕು. ಪರೀಕ್ಷಾ ಪೂರ್ವ ಸಿದ್ಧತೆಯಿಂದ ಹಿಡಿದು ಪರೀಕ್ಷೆ ಮುಕ್ತಾಯವಾಗುವವರೆಗೂ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಈ ಉದ್ದೇಶದಿಂದ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ಕರ್ತವ್ಯ ಹಾಗೂ ಜವಾಬ್ದಾರಿಗಳ ಕುರಿತು ತರಬೇತಿ ನೀಡಲಾಗುತ್ತಿದ್ದು, ಅದನ್ನು ಸಂಪೂರ್ಣವಾಗಿ ಪಡೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳ ತಪಾಸಣೆ (ಫ್ರಿಸ್ಕಿಂಗ್) ಸೇರಿದಂತೆ ಸಮಗ್ರ ಭದ್ರತಾ ವ್ಯವಸ್ಥೆಗಾಗಿ ಒಟ್ಟು 240 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.ಅಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಹಿತಿ ಮಾಧ್ಯಮಗಳಿಗೆ ರವಾನೆಯಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಸಂಪನ್ಮೂಲ ವ್ಯಕ್ತಿ ಸಣ್ಣತಂಗಿ ಅವರು ಜಿಲ್ಲಾ ಮುಖ್ಯ ಮೇಲ್ವಿಚಾರಕರು, ವೀಕ್ಷಕರು, ಮಾರ್ಗಾಧಿಕಾರಿಗಳು, ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಪರೀಕ್ಷಾ ಮೇಲ್ವಿಚಾರಕರು ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಸವಿವರವಾಗಿ ತರಬೇತಿ ನೀಡಿದರು. ಪರೀಕ್ಷಾ ಪೂರ್ವ ಸಿದ್ಧತೆ, ಪರೀಕ್ಷಾ ಅವಧಿಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನಗಳು ಹಾಗೂ ನಿಯಮಗಳ ಪಾಲನೆ ಕುರಿತು ಮಾರ್ಗದರ್ಶನ ಮಾಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಡೋಂಬರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀರಾತಾಮು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...