ಬಾಗಲಕೋಟೆ | ಕನಿಷ್ಠ ವೇತನಕ್ಕೆ ಆಗ್ರಹಿಸಿ ʻಬಹುಹಳ್ಳಿ ಕುಡಿಯುವ ನೀರುʼ ನೌಕರರ ಪ್ರತಿಭಟನೆ

Date:

ಗ್ರಾಮೀಣ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯದಲ್ಲಿ ಹಗಲು-ರಾತ್ರಿ ಸೇವೆ ಸಲ್ಲಿಸುತ್ತಿರುವ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರಿಗೆ, ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾಡಳಿತ ಕಚೇರಿಯ ಮುಂದೆ ಪ್ರತಿಭಟನೆ ಆರಂಭಿಸಲಾಗಿದೆ.

- Advertisement -

ನೌಕರರ ವೇತನದಲ್ಲಿ ಕಡಿತವಾಗುತ್ತಿರುವ ಪಿಎಫ್ ಹಾಗೂ ಇಎಸ್‌ಐ ಮೊತ್ತದ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಪ್ರತಿ ತಿಂಗಳು ನೌಕರರಿಗೆ ವೇತನದ ಚೀಟಿ ಒದಗಿಸಬೇಕು. ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘದ ಪದಾಧಿಕಾರಿಗಳು ಹಲವು ಬಾರಿ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಉಪಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದರೆ, ಇದುವರೆಗೆ ಯಾವುದೇ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅನಿರ್ದಿಷ್ಟ ಪ್ರತಿಭಟನೆ ಆರಂಭಿಸಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈಗಿನ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ದಿನನಿತ್ಯದ ದವಸ-ಧಾನ್ಯಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಕಡಿಮೆ ವೇತನದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ. ಗ್ರಾಮೀಣ ಭಾಗಗಳಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳನ್ನು ಸರ್ಕಾರ ಹಾಗೂ ಜಿಲ್ಲಾ ಆಡಳಿತ ಗಂಭೀರವಾಗಿ ಪರಿಗಣಿಸಿ ಕೂಡಲೇ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನೌಕರರ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಸಂಘದ ಮುಖಂಡರು ಎಚ್ಚರಿಸಿದರು.

ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು. ನಾರಾಯಣ ಇಂಗಳೆ, ರಮೇಶ ವಡ್ಡರ, ಸಿದ್ದಪ್ಪ ಪೂಜಾರಿ, ಲಕ್ಕಪ್ಪ ಬೂಮ್ಮಣಗಿ, ಬೂತಾಳಪ್ಪ, ವಿಠಲ ಹೂಗಾರ, ಪರಶುರಾಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...