ಬಾಗಲಕೋಟೆ | ಬೆಳೆ ವಿಮೆ ಪರಿಹಾರದಲ್ಲಿ ವಿಳಂಬ ಬೇಡ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

Date:

ಬಾಗಲಕೋಟೆ ಜಿಲ್ಲೆಯ ಅರ್ಹ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೊರೆಯಬೇಕಾದ ಬೆಳೆ ವಿಮಾ ಪರಿಹಾರವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ನಿಯಮಾನುಸಾರ ಕಾಲಮಿತಿಯೊಳಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಬಾಗಲಕೋಟೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಹಾಗೂ ಬೆಳೆ ಕಟಾವು ಪ್ರಯೋಗಗಳ ಜಿಲ್ಲಾ ಮಟ್ಟದ ಜಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಜಿಲ್ಲೆಯಲ್ಲಿ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬೆಳೆ ಹಾನಿಯ ವಾಸ್ತವ ಚಿತ್ರಣವನ್ನು ದಾಖಲಿಸುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಿ, ಯಾವುದೇ ಲೋಪವಿಲ್ಲದಂತೆ ನಿಖರ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ರೈತರ ಸಮ್ಮುಖದಲ್ಲೇ ಪ್ರಯೋಗ
ಬೆಳೆ ಕಟಾವು ಪ್ರಯೋಗ ನಡೆಸುವ ಮುನ್ನ ಸ್ಥಳೀಯ ರೈತರಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಪೂರ್ವಭಾವಿಯಾಗಿ ಮಾಹಿತಿ ನೀಡಬೇಕು. ರೈತರ ಸಮ್ಮುಖದಲ್ಲಿಯೇ ನಿಗದಿತ ನಿಯಮಗಳು ಹಾಗೂ ಮಾರ್ಗಸೂಚಿಗಳಂತೆ ಪ್ರಯೋಗಗಳನ್ನು ಕೈಗೊಂಡು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಬೆಳೆ ಕಟಾವು ಪ್ರಯೋಗದ ಫಲಿತಾಂಶವೇ ಬೆಳೆ ಇಳುವರಿ ನಿರ್ಧಾರಕ್ಕೆ ಪ್ರಮುಖ ಆಧಾರವಾಗಲಿದೆ. ಇದೇ ಇಳುವರಿ ಪ್ರಮಾಣವನ್ನು ಅಂತಿಮವಾಗಿ ಬೆಳೆ ವಿಮಾ ನಷ್ಟ ಪರಿಹಾರ ನಿರ್ಧರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ. ಹೀಗಾಗಿ ಪ್ರಯೋಗ ನಡೆಸುವ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಮಾರ್ಗಸೂಚಿ ಪಾಲನೆಗೆ ಒತ್ತು
ಬೆಳೆ ಕಟಾವು ಪ್ರಯೋಗಗಳಲ್ಲಿ ನಿಗದಿಪಡಿಸಿರುವ ವಿಧಾನ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಲೋಪ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ದಾಖಲಾಗುವ ಇಳುವರಿ ಮಾಹಿತಿ ವಾಸ್ತವ ಪರಿಸ್ಥಿತಿಗೆ ಅನುಗುಣವಾಗಿರುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ, ಸಂಖ್ಯಾಧಿಕಾರಿ ಗೌರಮ್ಮ ಸುಂಕದ ಹಾಗೂ ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ ಹೂಗಾರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ರಾಯಚೂರು | ದಲಿತರ ಸರಣಿ ಮೂರು ಕೊಲೆಗಳ ಸಿಐಡಿ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ...

ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ...