ಬಾಗಲಕೋಟೆ | ಅರ್ಜಿ ವಿಲೇವಾರಿಯಲ್ಲಿ ವಿಳಂಬ ಸಲ್ಲದು: ಸಚಿವ ಕಾಶಪ್ಪನವರ ಖಡಕ್ ಸೂಚನೆ

Date:

ಸಾರ್ವಜನಿಕರ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ, ಅರ್ಹರಿಗೆ ನಿಗದಿತ ಅವಧಿಯೊಳಗೆ ನ್ಯಾಯ ಒದಗಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಶಪ್ಪನವರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಬಾಗಲಕೋಟೆ ನಗರದ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ನಡೆದ ಬಾಗಲಕೋಟೆ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಒಟ್ಟು 265 ಅರ್ಜಿಗಳು ಸ್ವೀಕೃತವಾಗಿದ್ದು, ಅಂಗವಿಕಲರ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಪಿಂಚಣಿ ಸೌಲಭ್ಯಗಳ 52 ಆದೇಶ ಪತ್ರಗಳನ್ನು ಸ್ಥಳದಲ್ಲೇ ವಿತರಿಸಲಾಯಿತು. ಉಳಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಜಿಲ್ಲೆಯಲ್ಲಿ ಈವರೆಗೆ ನಡೆದ ಆಂದೋಲನಗಳಲ್ಲಿ 6,068 ಅರ್ಜಿಗಳು ಸ್ವೀಕೃತವಾಗಿದ್ದು, 5,907 ಅರ್ಜಿಗಳಿಗೆ ಪರಿಹಾರ ಕಲ್ಪಿಸಲಾಗಿದೆ. ಬಾಕಿ ಅರ್ಜಿಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.ಇದೇ ವೇಳೆ, ಏಳು ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಮುಳುಗಡೆ ಸಂತ್ರಸ್ತೆ ರೇಣುಕಾ ಯಲ್ಲಪ್ಪ ಮಲ್ಲರ ಅವರ ಅಹವಾಲು ಆಲಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶೀಘ್ರ ಹಕ್ಕುಪತ್ರ ನೀಡುವಂತೆ ಸೂಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಉಮೇಶ ಮೇಟಿ, “ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸುವುದು ಪ್ರಜಾಸೇವಾ ಆಂದೋಲನದ ಉದ್ದೇಶ. ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯ ತಲುಪಿಸುವಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು” ಎಂದರು.

ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು...

ಬಾಗಲಕೋಟೆ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ: ದಶಕಗಳ ಹೋರಾಟಕ್ಕೆ ಜಯ

ಕರ್ನಾಟಕ ರಾಜ್ಯ ಸರ್ಕಾರ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯದ ಬೌದ್ಧ...

ಬಾಗಲಕೋಟೆ | ಆತ್ಮರಕ್ಷಣೆಗೆ ವುಶು, ಕರಾಟೆ ಕ್ರೀಡೆಗಳ ಅಗತ್ಯವಿದೆ: ಡಾ. ವೀರಣ್ಣ ಚರಂತಿಮಠ

ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯವಶ್ಯವಾಗಿದ್ದು, ವುಶು ಮತ್ತು...

ಯಾದಗಿರಿ | ವೆಂಕಟಪ್ಪ ನಾಯಕನ ನಾಡು ಸುರಪುರದಲ್ಲಿ ಅಸ್ಪೃಶ್ಯತೆ ಇಂದಿಗೂ ಜೀವಂತ!

ಯಾದಗಿರಿಯ ಸೂಗೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ, ಬಳೆ ಅಂಗಡಿ, ಹೊಲಿಗೆ ಶಾಪ್‌,...