ಬಾಗಲಕೋಟೆ | ಕಬ್ಬು ಬಾಕಿ ಹಣ ತಕ್ಷಣ ಪಾವತಿಸಿ: ಸಚಿವ ಕಾಶಪ್ಪನವರ ಸೂಚನೆ

Date:

ರೈತರಿಗೆ ಪಾವತಿಸಬೇಕಾದ ಕಬ್ಬಿನ ಬಾಕಿ ಹಣವನ್ನು ಯಾವುದೇ ವಿಳಂಬ ಮಾಡದೆ ಕೂಡಲೇ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ರೈತರಿಗೆ ಪಾವತಿಸಬೇಕಾದ ಕಬ್ಬಿನ ಹಣವನ್ನು ಕೆಲವು ಕಾರ್ಖಾನೆಗಳು ಇನ್ನೂ ಪಾವತಿಸದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ಬಾಕಿ ಮೊತ್ತವನ್ನು ತಕ್ಷಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ವಿವಿಧ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಇರುವ ಹಣದ ಕುರಿತು ಸಚಿವರು ವಿವರವಾದ ಮಾಹಿತಿ ಪಡೆದರು. 2025-26ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಜಮಖಂಡಿ ಶುಗರ್ಸ್ ಹೊರತುಪಡಿಸಿ ಉಳಿದ ಎಲ್ಲ ಕಾರ್ಖಾನೆಗಳು ಪಾವತಿ ಮಾಡಿವೆ. ಸರ್ಕಾರದಿಂದ ಪಾವತಿಸಬೇಕಿದ್ದ ₹50 ಸಾವಿರದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಲಾಗಿದೆ. ಆದರೆ, ಕಾರ್ಖಾನೆಗಳು ಪ್ರತಿ ಮೆಟ್ರಿಕ್ ಟನ್‌ಗೆ ಪಾವತಿಸಬೇಕಾದ ₹50ರ ಬಾಕಿಯನ್ನು ಆರು ಕಾರ್ಖಾನೆಗಳು ಇನ್ನೂ ಪಾವತಿಸಿಲ್ಲ. ಈ ಮೊತ್ತವನ್ನು ಕೂಡಲೇ ಪಾವತಿಸುವಂತೆ ಸಚಿವರು ಸೂಚಿಸಿದರು.

ಬಾಕಿ ಪಾವತಿ ಬಳಿಕವೇ ಪ್ರಸಕ್ತ ಹಂಗಾಮಿನ ದರ ನಿಗದಿ
ಪ್ರಸಕ್ತ ಕಬ್ಬು ಹಂಗಾಮಿನಲ್ಲಿ ರೈತರಿಗೆ ನೀಡಬೇಕಾದ ಕಬ್ಬಿನ ದರದ ಕುರಿತು ಸಕ್ಕರೆ ಕಾರ್ಖಾನೆಗಳು ಅಗತ್ಯ ಮಾಹಿತಿಯನ್ನು ನೀಡಬೇಕು. ಮೊದಲಿಗೆ ರೈತರಿಗೆ ಬಾಕಿ ಇರುವ ಸಂಪೂರ್ಣ ಹಣವನ್ನು ಪಾವತಿಸಬೇಕು. ಬಳಿಕ ರೈತರ ಸಭೆ ಕರೆದು ಪ್ರಸಕ್ತ ಹಂಗಾಮಿನ ಕಬ್ಬಿನ ದರ ನಿಗದಿ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಕಾಶಪ್ಪನವರ ತಿಳಿಸಿದರು.

60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಅನುದಾನ
ಸಕ್ಕರೆ ಕಾರ್ಖಾನೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿಯಲ್ಲಿ ಜಿಲ್ಲೆಯ 60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ಅಗತ್ಯ ಸೌಲಭ್ಯಗಳ ಕಲ್ಪನೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳು ತಮ್ಮ ಸಿಎಸ್‌ಆರ್‌ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯ 60 ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರತಿ ಕಾರ್ಖಾನೆಗೆ ವಹಿಸಲಾದ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ಕಳೆದ ಸಾಲಿನಲ್ಲಿ ಸಿಎಸ್‌ಆರ್‌ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಕಾರ್ಯಕ್ರಮಗಳ ವರದಿಯನ್ನು ಸಲ್ಲಿಸುವಂತೆಯೂ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹೀರೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಅಧಿಕಾರಿಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...