ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಜಿಲ್ಲಾದ್ಯಂತ ದಾಳಿ ನಡೆಸಿದೆ.
ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಮುಧೋಳ, ಜಮಖಂಡಿ ಹಾಗೂ ಹುನಗುಂದ ತಾಲೂಕುಗಳಲ್ಲಿ ಒಟ್ಟು 70 ಅಂಗಡಿಗಳನ್ನು ಪರಿಶೀಲಿಸಲಾಗಿದ್ದು, ನಿಯಮ ಉಲ್ಲಂಘಿಸಿದ 56 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ.16 ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಿ, 12 ಆಹಾರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಪರಿಶೀಲನೆ ವೇಳೆ ಹೋಟೆಲ್‌ಗಳು, ಬೇಕರಿಗಳು ಸೇರಿದಂತೆ ಆಹಾರ ಸಂಸ್ಥೆಗಳಲ್ಲಿ ಆಹಾರದ ಗುಣಮಟ್ಟ, ಅವಧಿ, ಸಂಗ್ರಹಣಾ ವಿಧಾನ ಹಾಗೂ ಎಫ್‌ಎಸ್‌ಎಸ್‌ಎಐ ಪರವಾನಗಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.ಬಾಗಲಕೋಟೆಯಲ್ಲಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ವಾಸುದೇವ ಸ್ವಾಮಿ, ನಗರಸಭೆ ಪೌರಾಯುಕ್ತ ಎಂ.ಎಂ. ಸಾರವಾನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಅಂಗಡಿಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ತಪಾಸಣೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.




