ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

Date:

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ಸೃಜನ-2026’ ಮಹಿಳಾ ಸಂಭ್ರಮವನ್ನು ಕನ್ನಡ ನಾಡು-ನುಡಿ ಹಾಗೂ ನೃತ್ಯ ಝೇಂಕಾರದೊಂದಿಗೆ ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು.

- Advertisement -

ಬಾಗಲಕೋಟೆ ನಗರದಲ್ಲಿ ಸಂಘದ ನೂತನ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಪದ ಗೀತೆ, ಆಕಾಶಬುಟ್ಟಿ ತಯಾರಿಕೆ, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಹಾಗೂ ಸಾಮೂಹಿಕ ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಿಲ್ಲೆಯ 15ಕ್ಕೂ ಹೆಚ್ಚು ಪದವಿಪೂರ್ವ ಕಾಲೇಜುಗಳಿಂದ ನೂರಕ್ಕೂ ಅಧಿಕ ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.ಯುವಜನತೆಗೆ ಸಮೂಹ ಮಾಧ್ಯಮದ ಅಗತ್ಯವಿದೆಯೇ ಎಂಬ ವಿಷಯದ ಕುರಿತು ನಡೆದ ಚರ್ಚಾ ಸ್ಪರ್ಧೆ ಗಮನ ಸೆಳೆಯಿತು. ವಿದ್ಯಾರ್ಥಿನಿಯರು ಸ್ವತಃ ಸಿದ್ಧಪಡಿಸಿದ್ದ ವಿವಿಧ ಬಗೆಯ ಆಹಾರ ಪದಾರ್ಥಗಳ ಮೇಳವೂ ವಿಶೇಷ ಆಕರ್ಷಣೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ವಿದ್ಯಾರ್ಥಿನಿಯರು ತಯಾರಿಸಿದ ತಿಂಡಿ-ತಿನಿಸುಗಳನ್ನು ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಖರೀದಿಸಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಡಿ. ಲಮಾಣಿ, ವಿದ್ಯಾರ್ಥಿನಿಯರು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸೂಕ್ತ ವೇದಿಕೆ ದೊರೆತಾಗ ಅದನ್ನು ಪ್ರದರ್ಶಿಸಲು ಹಿಂಜರಿಯಬಾರದು. ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಜೆ. ಒಡೆಯರ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಚಟುವಟಿಕೆಗಳು ಆತ್ಮವಿಶ್ವಾಸ, ನಿರ್ವಹಣಾ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ವೃದ್ಧಿಸುವುದರ ಜೊತೆಗೆ ಆತ್ಮಸಂತೃಪ್ತಿಯನ್ನೂ ನೀಡುತ್ತವೆ ಎಂದು ತಿಳಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಕುಮಾರಿ ಭಾಗ್ಯಾ ಗುಲಗಂಜಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ರಿತಿಕಾ ಪಾಟೀಲ ಮತ್ತು ಸೌಜನ್ಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಡಾ. ಜಿ.ಐ. ನಂದಿಕೋಲಮಠ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎ.ವಿ. ಪುರಾಣಿಕ ಅತಿಥಿಗಳನ್ನು ಪರಿಚಯಿಸಿದರು. ಸಂಯೋಜಕ ಕೆ.ವಿ. ಜುಕ್ತಿಮಠ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕ ಪಿ.ಕೆ. ಚೌಗಲಾ ವಂದಿಸಿದರು.ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಕೆಗೆ ನ.25ರಂದು ವಿಧಾನಸೌಧ ಚಲೋ

ಕೋಳಿ ಸಾಕಾಣಿಕೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...