ಬಾಗಲಕೋಟೆ | ಶಿಕ್ಷಕರ ನೇಮಕಾತಿ ಅಧಿಸೂಚನೆ ತಿದ್ದುಪಡಿಗೆ SYM ಆಗ್ರಹ

Date:

ಕರ್ನಾಟಕದಲ್ಲಿ 2026–27ನೇ ಸಾಲಿನ PSTR, GPTR ಹಾಗೂ HSTR ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಅಧಿಸೂಚನೆಗಳಲ್ಲಿನ ಲೋಪಗಳನ್ನು ಕೂಡಲೇ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಜಾರಿಗೊಳಿಸಬೇಕು ಎಂದು ಬಾಗಲಕೋಟೆಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM) ಇಳಕಲ್ ವತಿಯಿಂದ ಸಚಿವ ವಿಜಯಾನಂದ ಎಸ್. ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ನೇಮಕಾತಿ ಪರೀಕ್ಷೆಯ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪರಿಷ್ಕೃತ ಅಥವಾ ಪೂರಕ ಅಧಿಸೂಚನೆ ಹೊರಡಿಸಿ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಬಾಕಿ ಇರುವ ಬೇಡಿಕೆಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಉರ್ದು ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸುವುದು, ಗಣಿತ ಶಿಕ್ಷಕರ ಖಾಲಿ ಹುದ್ದೆಗಳನ್ನು ಪ್ರಕಟಿಸುವುದು, ಪರೀಕ್ಷೆಯ ಭಾಷಾ ಆಯ್ಕೆಗೆ ಸೂಕ್ತ ಅವಕಾಶ ಕಲ್ಪಿಸುವುದು ಹಾಗೂ ಐದು ವರ್ಷಗಳ ವಿಶೇಷ ವಯೋಮಿತಿ ಸಡಿಲಿಕೆ ನೀಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ತುರ್ತಾಗಿ ಪರಿಗಣಿಸಬೇಕು” ಎಂದು ಮನವಿಯಲ್ಲಿ ತಿಳಿಸಲಾಯಿತು.

ಸಾವಿರಾರು ಶಿಕ್ಷಕ ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ಕ್ರಮ ಕೈಗೊಂಡು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು SYM ಮುಖಂಡರು ಆಗ್ರಹಿಸಿದರು.

ಈ ಸಂದರ್ಭದಲ್ಲಿ SYM ಇಳಕಲ್ ನಗರಾಧ್ಯಕ್ಷ ಮುಹಮ್ಮದ್ ಸಿರಾಜ್ ಹುಣಚಗಿ ಕಾರ್ಯದರ್ಶಿ ಮುಜಮ್ಮಿಲ್ ಹಕ್ಕಿ ಹಾಗೂ ಕಾರ್ಯಕರ್ತ ಎಲ್.ಎ ಬಂಡಾರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...