ಬಾಗಲಕೋಟೆ | ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಗ್ನಿ ಅವಘಡ ತಡೆ, ಆಹಾರ ಸುರಕ್ಷತೆ ಕುರಿತು ಅರಿವು

Date:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ ಅಡುಗೆಯರು, ಅಡುಗೆ ಸಹಾಯಕರು, ಕಾವಲುಗಾರರು ಹಾಗೂ ಇತರೆ ಗ್ರೂಪ್‌-ಡಿ ಸಿಬ್ಬಂದಿಗಾಗಿ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಬಾಗಲಕೋಟೆಯ ನವನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿತ್ತು.

- Advertisement -

ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, “ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಅಡುಗೆ ಮತ್ತು ಗ್ರುಪ್-ಡಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ತರಬೇತಿಯಲ್ಲಿ ತಿಳಿಸಿಕೊಡುವ ಸುರಕ್ಷತಾ ಕ್ರಮಗಳನ್ನು ಕಾರ್ಯಕ್ಷೇತ್ರದಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ತಮ್ಮ ಕರ್ತವ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, “ವಸತಿ ನಿಲಯಗಳಲ್ಲಿ ಮಕ್ಕಳ ಯೋಗಕ್ಷೇಮ ನೋಡಿಕೊಳ್ಳುವ ಜವಾಬ್ದಾರಿ ಸಿಬ್ಬಂದಿಯ ಮೇಲಿದೆ. ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು, ಆಹಾರವನ್ನು ಸುರಕ್ಷಿತವಾಗಿ ಸಂಗ್ರಹಿಸಿ ಇಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಈ ಕಾರ್ಯಾಗಾರದ ಮೂಲಕ ಮಾಹಿತಿ ನೀಡಲಾಗುತ್ತಿದೆ. ತರಬೇತಿಯಲ್ಲಿ ತಿಳಿಸಿಕೊಡುವ ಅಂಶಗಳನ್ನು ಕರ್ತವ್ಯದಲ್ಲಿ ಅಳವಡಿಸಿಕೊಂಡು ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

de29c6b5 7f29 4c15 8554 368cee5d0bbd 1

ಕಾರ್ಯಾಗಾರದಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎ. ತೇಲಿ ಅವರು ಅಗ್ನಿ ಅವಘಡ ಸಂಭವಿಸದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಅಡುಗೆಮನೆ ಸುರಕ್ಷತೆ, ಅಗ್ನಿ ನಂದಿಸುವ ವಿಧಾನಗಳ ಕುರಿತು ತಿಳಿಸಿಕೊಟ್ಟರು. ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ ಸಾಳಗುಂದಿ ಅವರು ಆಹಾರ ತಯಾರಿಕೆ ಹಾಗೂ ಸಂರಕ್ಷಣೆಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳು, ಆಹಾರ ಸುರಕ್ಷತೆ ಮತ್ತು ಸ್ವಚ್ಛತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ನಿಲಯ ಪಾಲಕ ಬಿ.ಬಿ. ನಿಂಗಪ್ಪನವರು ಅಡುಗೆ ತಯಾರಿಕಾ ಪಾತ್ರೆಗಳು, ಪದಾರ್ಥಗಳ ಸಮರ್ಪಕ ಬಳಕೆ, ನೈರ್ಮಲ್ಯಯುತ ಸಂಗ್ರಹಣೆಯ ಬಗ್ಗೆ ತಿಳಿಸಿಕೊಟ್ಟರು.

ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆಹಾರ ಒದಗಿಸುವುದು, ಅಡುಗೆಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು, ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಬ್ಬಂದಿಗೆ ಪ್ರಾಯೋಗಿಕ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ ಜೋಶಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿ ಇದ್ದಲಗಿ, ಬಿಸಿಎಂ ತಾಲೂಕಾ ಅಧಿಕಾರಿ ಭೀಮರಾಯ ಕೋಲಕಾರ ಹಾಗೂ ಜಿಲ್ಲೆಯ ವಿವಿಧ ಕ್ರೈಸ್ ವಸತಿ ಶಾಲೆಗಳ ಅಡುಗೆಯರು, ಅಡುಗೆ ಸಹಾಯಕರು, ಕಾವಲುಗಾರರು ಮತ್ತು ಗ್ರೂಪ್‌-ಡಿ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಬೇಕು: ಹಜ್ರತ್ ಎಂ.ಪಿ. ಮುಜಮ್ಮಿಲ್ ಸಾಹೇಬ್ ಕರೆ

ಮೈಸೂರಿನ ಗೌಸಿಯಾ ನಗರದ ಉಸ್ಮಾನಿಯಾ ಬ್ಲಾಕ್‌ನ ನೌಜವಾನ್ ಕಮಿಟಿ ವತಿಯಿಂದ ಪ್ರತಿವರ್ಷದಂತೆ...

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...